ಬಿಪಿಎಲ್ ಕಾರ್ಡ್ ರದ್ದು, ಅನರ್ಹ ಪಡಿತರ ಚೀಟಿಗಳನ್ನು ರದ್ದುಪಡಿಸುವಂತೆ ಅಧಿಕಾರಿಗಳಿಗೆ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ.

ನಮಸ್ಕಾರ ಕರ್ನಾಟಕ!, ತುಮಕೂರು ಜಿಲ್ಲೆಯಲ್ಲಿ ಪ್ರಸ್ತುತ ಇರುವ 6,92,508 ಪಡಿತರ ಚೀಟಿಗಳಲ್ಲಿ ಅನರ್ಹ ಚೀಟಿಗಳನ್ನು ತಕ್ಷಣವೇ ರದ್ದುಪಡಿಸುವಂತೆ ಗೃಹ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಅವರು ಸೂಚನೆ ನೀಡಿದ್ದಾರೆ.

ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಸಚಿವರು, ಆದಾಯ ತೆರಿಗೆ ಪಾವತಿಸುತ್ತಿರುವ, ಕುಟುಂಬದ ಆದಾಯ 1.20 ಲಕ್ಷಕ್ಕಿಂತ ಹೆಚ್ಚು ಇರುವವರು, ಸರ್ಕಾರಿ ಉದ್ಯೋಗದಲ್ಲಿರುವವರು, ಹಾಗೂ 3 ಹೆಕ್ಟೇರ್‌ಗಿಂತ ಹೆಚ್ಚಿನ ಭೂಮಿಯನ್ನು ಹೊಂದಿರುವವರು ಹೊಂದಿದ ಪಡಿತರ ಚೀಟಿಗಳನ್ನು ರದ್ದುಪಡಿಸಬೇಕೆಂದು ಹತ್ತಿರದ ಸಭೆಯಲ್ಲಿ ಸೂಚನೆ ನೀಡಲಾಗಿತ್ತು.

ಆದರೆ, ಇದುವರೆಗೆ ಕೇವಲ 98,893 ಪಡಿತರ ಚೀಟಿಗಳು ಮಾತ್ರ ರದ್ದುಪಡಿಸಲಾಗಿದೆ.

ಮತ್ತೆ ಸಭೆಯಲ್ಲಿ, ಉಳಿದಿರುವ ಎಲ್ಲಾ ಅನರ್ಹ ಪಡಿತರ ಚೀಟಿಗಳನ್ನು ತಕ್ಷಣವೇ ರದ್ದುಪಡಿಸುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮಂಟೇಸ್ವಾಮಿ ಅವರಿಗೆ ಕಡ್ಡಾಯ ಸೂಚನೆ ನೀಡಲಾಗಿದೆ.

ಇತರೆ ವಿಷಯಗಳು:

ಸೂರ್ಯಘರ್ ಉಚಿತ ವಿದ್ಯುತ್ ಯೋಜನೆ, ಪಿಎಂ ಸೂರ್ಯಘರ್ ಯೋಜನೆಗೆ ಅರ್ಜಿ ಆಹ್ವಾನ.

ರಾಜ್ಯದ ರೈತರಿಗೆ ಸಿಹಿ ಸುದ್ದಿ, ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ.

Leave a Reply

Your email address will not be published. Required fields are marked *

rtgh