ಹಲೋ ಸ್ನೇಹಿತರೆ, ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗಾಗಿ 7ನೇ ವೇತನ ಆಯೋಗವನ್ನು ಜಾರಿಗೊಳಿಸಿದೆ. ಇದರ ಬೆನ್ನಲ್ಲೇ ಸರ್ಕಾರಿ ನೌಕರರ ಮತ್ತೊಂದು ಬೇಡಿಕೆಯಾದಂತ ಹಳೆ ಪಿಂಚಣಿ ಯೋಜನೆ OPS ಜಾರಿಗೊಳಿಸೋದಕ್ಕೆ ಪರಿಶೀಲನಾ ಸಮಿತಿಯನ್ನು ರಚಿಸಲು ಆದೇಶಿಸಿದೆ.
ಈ ಸಲುವಾಗಿ ಆರ್ಥಿಕ ಇಲಾಖೆಯ ಉಪ ಕಾರ್ಯದರ್ಶಿ ಅರುಳ್ ಕುಮಾರ್ ಅವರು ನಡವಳಿಯನ್ನು ಹೊರಡಿಸಿದ್ದಾರೆ. ರಾಜ್ಯದಲ್ಲಿ ಜಾರಿಯಲ್ಲಿರುವಂತಹ ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲಾಗಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿ ಮಾಡುವ ಸಾಧ್ಯತೆಗಳ ಕುರಿತು ಪರಿಶೀಲಿಸಲು ಸಮಿತಿಯನ್ನು ರಚಿಸಲಾಗಿರುವುದಾಗಿ ತಿಳಿಸಿದ್ದಾರೆ.
ಈ ಸಮಿತಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಸರ್ಕಾರದ ಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಈ ಸಮಿತಿಯ ಸದಸ್ಯರನ್ನಾಗಿ ಬೆಂಗಳೂರು ಪ್ರಾದೇಶಿಕ ಆಯುಕ್ತರಾದಂತ ಅಮಲಾನ್ ಆದಿತ್ಯ ಬಿಸ್ವಾಸ್ ಅವರನ್ನು ನೇಮಿಸಲಾಗಿದೆ.
ಇದನ್ನು ಓದಿ: ದೇಶಾದ್ಯಂತ ರೈತರಿಗೆ ಎಚ್ಚರಿಕೆ.. ನರೇಂದ್ರ ಮೋದಿಯವರ ಪ್ರಮುಖ ಘೋಷಣೆ!
ಈ ಮೇಲ್ಕಂಡ ಸಮಿತಿಗೆ ಈಗಾಗಲೇ ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿ ಮಾಡಿರುವ ರಾಜ್ಯಗಳಲ್ಲಿ ಈ ಯೋಜನೆಯನ್ನು ಈಗಾಗಲೇ ಅನುಷ್ಟಾನಗೊಳಿಸಿರುವ ಬಗ್ಗೆ ಹಾಗೂ ಕೈಗೊಂಡಿರುವಂತ ಕ್ರಮಗಳ ಬಗ್ಗೆ ಅಧ್ಯಯನ ನಡೆಸಿ ವರದಿಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ.
ಇದಲ್ಲದೇ ತನ್ನದೇ ಆದ ಕಾರ್ಯವಿಧಾನಗಳನ್ನು ರೂಪಿಸಿಕೊಳ್ಳುವಲ್ಲಿ ಈ ಸಮಿತಿ ಸಕ್ಷಮವಾಗಿರುತ್ತದೆ. ಸಮಿತಿಯ ಪರಿಶೀಲನೆಗೊಳಪಟ್ಟ ಅಂಶಗಳಿಗೆ ಅಗತ್ಯವೆನಿಸಿದ ಮಾಹಿತಿಗಳನ್ನು ಒದಗಿಸಲು ಸರ್ಕಾರದ ಎಲ್ಲಾ ಇಲಾಖೆಗಳಿಗೆ ಸೂಕ್ತ ನಿರ್ದೇಶನವನ್ನು ಸಹ ನೀಡಿದೆ.
ಇತರೆ ವಿಷಯಗಳು:
ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಿಗಲಿದೆ 5000 ವರೆಗೆ ಉಚಿತ ಸ್ಕಾಲರ್ಶಿಪ್..!
ನಾಳೆ ರಾಜ್ಯಾದ್ಯಂತ ಆಸ್ಪತ್ರೆಗಳಲ್ಲಿ ಒಪಿಡಿ ಸೇವೆ ಸಂಪೂರ್ಣ ಬಂದ್..!