ಹಲೋ ಸ್ನೇಹಿತರೆ, ರಾಜ್ಯದ 8ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿ ಎನ್ಎಂಎಂಎಸ್ ಪರೀಕ್ಷೆ ನಡೆಸಲಾಗುತ್ತದೆ. ಈ ಸಾಲಿನ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 5 ಕೊನೆಯ ದಿನಾಂಕವಾಗಿರುತ್ತದೆ. NMMS ಪರೀಕ್ಷೆ 2024ನೇ ಡಿಸೆಂಬರ್ 8 ರಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕೆಎಸ್ಕ್ಯುಎಸಿ ವತಿಯಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿರುತ್ತದೆ.
NMMS ಪರೀಕ್ಷೆಯನ್ನು ಸರ್ಕಾರಿ, ಅನುದಾನಿತ ಮತ್ತು ಸ್ಥಳೀಯ ಸಂಸ್ಥೆ ಶಾಲೆಗಳಲ್ಲಿ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವಾಗ, ವಿದ್ಯಾರ್ಥಿ ವೇತನ ನೀಡುವುದು ಈ ಯೋಜನೆ ಉದ್ದೇಶವಾಗಿದೆ.
ಇದನ್ನು ಓದಿ: ಆ. 20ರಿಂದ ಈ ಪಟ್ಟಿಯಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ!
NMMS ಪರೀಕ್ಷೆಯ ಆನ್ಲೈನ್ ಅರ್ಜಿಯು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ವೆಬ್ ಸೈಟ್ https://kseab.karnataka.gov.in ನಲ್ಲಿ ಲಭ್ಯವಿದೆ. ಶಾಲಾ ಮುಖ್ಯ ಶಿಕ್ಷಕರು ತಮ್ಮ ಶಾಲೆಯ ವಿದ್ಯಾರ್ಥಿಗಳ ಅರ್ಜಿಯನ್ನು ಆನ್ಲೈನ್ನಲ್ಲಿ ಮಂಡಳಿಯ ವೆಬ್ಸೈಟ್ನಲ್ಲಿ ಭರ್ತಿ ಮಾಡಿ NMMS ಲಾಗಿನ್ನಲ್ಲಿ ಸಲ್ಲಿಸುತ್ತಾರೆ. ಆನ್ಲೈನ್ ಅರ್ಜಿ ಸಲ್ಲಿಸಲು 2024ನೇ ಸೆಪ್ಟೆಂಬರ್ 5 ಕೊನೆಯ ದಿನಾಂಕ.
ಹೆಚ್ಚಿನ ಮಾಹಿತಿಗಾಗಿ ಮಂಡಳಿಯ ವೆಬ್ಸೈಟ್ನಲ್ಲಿನ ಪ್ರಸ್ತುತ ಅಧಿಕೃತ ಅಧಿಸೂಚನೆಯನ್ನು ಗಮನಿಸಬಹುದು ಹಾಗೂ ಕೆಎಸ್ಕ್ಯೂಎಸಿ ಕಚೇರಿಯ ದೂರವಾಣಿ ಸಂಖ್ಯೆ 080-23341615 ಅನ್ನು ಸಂಪರ್ಕಿಸಬಹುದು.
ಇತರೆ ವಿಷಯಗಳು:
18ನೇ ಕಂತಿನ ಹಣ ಬಿಡುಗಡೆಗೆ ಅಧಿಕೃತ ಘೊಷಣೆ!
ಜಿಲ್ಲಾಧಿಕಾರಿಗಳಿಂದ ಬೆಳೆ ಹಾನಿಗೆ ಪರಿಹಾರ ವಿತರಣೆ! ರೈತರ ಖಾತೆಗೆ ನೇರ ವರ್ಗಾವಣೆ