ಹಲೋ ಸ್ನೇಹಿತರೆ, 2024-25ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಉದ್ಯೋಗಿನಿ ಯೋಜನೆ ಮಹಿಳೆಯರು ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ಸ್ವಯಂ ಉದ್ಯೋಗಿಗಳಾಗಲು ಬ್ಯಾಂಕ್ ಗಳ ಮೂಲಕ ಸಾಲ ಮತ್ತು ನಿಗಮದ ಮೂಲಕ ಸಹಾಯಧನ ೊದಗಿಸಲಾಗುತ್ತದೆ. ಯಾವ ಯಾವ ಯೋಜನೆಗಳ ಅಡಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ ಕೊನೆವರೆಗೂ ಓದಿ.
ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ
ಅರ್ಜಿದಾರರ ವಯೋಮಿತಿ 18 ರಿಂದ 55 ವರ್ಷಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗ : ಆದಾಯ ಮಿತಿ : ರೂ. 2.00 ಲಕ್ಷಗಳಾಗಿರುತ್ತವೆ. ಲಿಂಗತ್ವ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ. 30,000/- ಗಳ ಪ್ರೋತ್ಸಾಹಧನ ನೀಡಲಾಗುತ್ತದೆ.
ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ
- ದೇವದಾಸಿ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು
- ಘಟಕ ವೆಚ್ಚ: ಕನಿಷ್ಟ ರೂ. 1.00 ಲಕ್ಷದಿಂದ ಗರಿಷ್ಟ ರೂ. 3.00 ಲಕ್ಷಗಳು ರೂ. 30,000/- ಗಳ ಪ್ರೋತ್ಸಾಹಧನ ನೀಡಲಾಗುತ್ತದೆ.
- ಸಹಾಯಧನ ಶೇ. 50%
- ಆದಾಯ ಮಿತಿ : ರೂ. 1.50 ಲಕ್ಷದ ಒಳಗಿರಬೇಕು
- ಘಟಕ ವೆಚ್ಚ : ಗರಿಷ್ಟ ರೂ. 3.00 ಲಕ್ಷಗಳು
- ಸಹಾಯಧನ ಶೇ.30 ರಷ್ಟು
ಚೇತನ ಯೋಜನೆ
ಈ ಯೋಜನೆಯಡಿ ದಮನಿತ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ. 30,000/- ಗಳ ಪ್ರೋತ್ಸಾಹಧನ ನೀಡಲಾಗುತ್ತದೆ. ಅರ್ಜಿದಾರರ ವಯೋಮಿತಿ 18 ವರ್ಷ ಮೇಲ್ಪಟ್ಟಿರಬೇಕಾಗುತ್ತದೆ.
ಧನಶ್ರೀ ಯೋಜನೆ
ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ರೂ. 30,000/-ಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ. ವಯೋಮಿತಿ 18 ರಿಂದ 60 ವರ್ಷಗಳಾಗಿರಬೇಕಾಗುತ್ತದೆ.
ಇದನ್ನು ಸಹ ಓದಿ: ರೈತರೇ ಈ ಎರಡು ಕೆಲಸ ಮಾಡದಿದ್ರೆ ಕಿಸಾನ್ ಹಣ ಬರೋದಿಲ್ಲಾ!
ವಿಶೇಷ ಸೂಚನೆ :
- ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಕಡ್ಡಾಯವಾಗಿ ಆಧಾರ್ ಸೀಡಿಂಗ್ ಮಾಡಿಸಿರಬೇಕು.
- ಉದ್ಯೋಗಿನಿ ಯೋಜನೆಯ SCSP/TSP ಬಳಕೆಯಾಗದ (Unspent) ಅನುದಾನದಡಿ ಸೌಲಭ್ಯ ಪಡೆಯಲು ಇಚ್ಛಿಸುವವರು ಅರ್ಜಿದಾರರು ಸಹ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸುವುದು.
- ಈ ಎಲ್ಲಾ ಯೋಜನೆಗಳಿಗೆ ಅರ್ಜಿಗಳು ಸೇವಾಸಿಂಧು ಪೋರ್ಟಲ್ https://sevasindhu.karnataka, gov.in ನಲ್ಲಿ ಸುಲಭವಾಗಿ ಲಭ್ಯವಿರುತ್ತದೆ.
- ಅರ್ಜಿದಾರರು ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಕೂಡ ಅರ್ಜಿ ಸಲ್ಲಿಸುವುದು.
- 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ.
ಅರ್ಜಿ ಸಲ್ಲಿಸಲು ದಿನಾಂಕ : 21.08.2024 ರ ಬೆಳಿಗ್ಗೆ 10.00 ಗಂಟೆಯಿಂದ 21.09.2024 ರ ಸಂಜೆ 5.30 ಗಂಟೆಯವರೆಗೆ ಲಭ್ಯವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲೆಯ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಛೇರಿ ಅಥವಾ ನಿಗಮದ ವೆಬ್ ಸೈಟ್ (https://kswdc.karnataka.gov.in) ಭೇಟಿ ನೀಡಿ.
ಇತರೆ ವಿಷಯಗಳು:
ಸೆಪ್ಟೆಂಬರ್ 1 ಉದ್ಯೋಗಿಗಳಿಗೆ ಹಬ್ಬ! ಡಿಎ ಹೆಚ್ಚಳ ದಿನಾಂಕ ನಿಗದಿ
ಗಣೇಶ ಹಬ್ಬಕ್ಕೆ ಎಣ್ಣೆ ಪ್ರಿಯರಿಗೆ ಸಿಹಿ ಸುದ್ದಿ! ರಾಜ್ಯದಲ್ಲಿ ಶೇ.15ರಿಂದ 25ರಷ್ಟು ದರ ಇಳಿಕೆ