20 ಲಕ್ಷ ಬಿಪಿಎಲ್, ಅಂತ್ಯೋದಯ ಕಾರ್ಡ್‌ಗೆ ಕಡಿವಾಣ!

ಹಲೋ ಸ್ನೇಹಿತರೆ, ರಾಜ್ಯದಲ್ಲಿ ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವ ಅನರ್ಹ ಫಲಾನುಭವಿಗಳನ್ನು ಗುರುತಿಸಿ ಸುಮಾರು 20 ಲಕ್ಷಕ್ಕೂ ಹೆಚ್ಚು ಕಾರ್ಡ್ ಗಳನ್ನು ರದ್ದುಪಡಿಸಲು ಆಹಾರ ಇಲಾಖೆ ಚಿಂತನೆ ನಡೆಸಿದೆ.

BPL Card Cancel

ಅನರ್ಹ ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡ್ ಗುರುತಿಸಲು ಸರ್ವೆ ನಡೆಸಲು ಖಾಸಗಿ ಕಂಪನಿಯೊಂದಕ್ಕೆ ಇಲಾಖೆ ಜವಾಬ್ದಾರಿ ವಹಿಸಿದೆ ಎನ್ನಲಾಗಿದ್ದು, ಪ್ರಸ್ತುತ ರಾಜ್ಯದಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ನಿಯಮಕ್ಕಿಂತ 14 ಲಕ್ಷ ಹೆಚ್ಚುವರಿ ಕಾರ್ಡ್ ಗಳಿವೆ ಎಂದು ಆಹಾರ ಇಲಾಖೆ ಕಂಡುಕೊಂಡಿದೆ.

ಇದನ್ನು ಕೂಡ ಓದಿ: ಸರ್ಕಾರದ ಜನಪ್ರಿಯ ಯೋಜನೆಯ ಹೆಸರು ಬದಲು.! ಹಾಗಾದ್ರೆ ಯಾವುದು ಗೊತ್ತಾ ಈ ಸ್ಕೀಮ್??

ಅನರ್ಹ ಕಾರ್ಡ್ ಗಳನ್ನು ರದ್ದು ಮಾಡಲು ಆಹಾರ ಇಲಾಖೆ ಸಿದ್ಧತೆ ನಡೆಸಿದ್ದು, ಅನರ್ಹರ ಪತ್ತೆ ಹಚ್ಚಲು ಖಾಸಗಿ ಸಂಸ್ಥೆಗೆ ಸಮೀಕ್ಷೆ ಹೊಣೆ ನೀಡಲು ಪ್ಲಾನ್ ಮಾಡಲಾಗಿದೆ. ಅನ್ನಭಾಗ್ಯ ಯೋಜನೆಯ ಅನಗತ್ಯ ವೆಚ್ಚ ಉಳಿಸಲು ಈ ಕಾರ್ಡ್ ಗಳನ್ನು ರದ್ದು ಮಾಡಲು ಚಿಂತನೆ ನಡೆಸಲಾಗಿದೆ. ಆಹಾರ ಭದ್ರತೆ ಕಾಯ್ದೆಯ ಅನ್ವಯ ರಾಜ್ಯದಲ್ಲಿ 1.03 ಕೋಟಿ ಬಿಪಿಎಲ್ ಕಾರ್ಡ್ ಗಳು ಇರಬೇಕು. ಆದರೆ, 1.16 ಕೋಟಿಗೂ ಹೆಚ್ಚು ಬಿಪಿಎಲ್ ಕಾರ್ಡುಗಳನ್ನು ಈಗಾಗಲೇ ವಿತರಿಸಲಾಗಿದೆ.

ಇತರೆ ವಿಷಯಗಳು:

ಭಾಗ್ಯಲಕ್ಷ್ಮಿ ಯೋಜನೆಯಡಿ 2.30 ಲಕ್ಷ ಹೆಣ್ಣು ಮಕ್ಕಳ ಖಾತೆಗೆ! ಮೆಚ್ಯುರಿಟಿ ಹಣ ಹಾಕಲು ಸಿದ್ಧತೆ

ಈ ಹಳೆಯ ವಸ್ತುಗಳು ನಿಮ್ಮ ಬಳಿ ಇದ್ರೆ ಗುಡ್‌ ನ್ಯೂಸ್!‌ ಕನಿಷ್ಠ ಬೆಲೆಯಲ್ಲಿ ಖರೀದಿಗೆ ಆದೇಶ

Leave a Reply

Your email address will not be published. Required fields are marked *

rtgh