ನಮಸ್ಕಾರ ಕರ್ನಾಟಕ, ಸ್ವಂತ ಮನೆ ಇಲ್ಲದವರಿಗೆ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿರುವವರಿಗೆ ಒಳ್ಳೆಯ ಸುದ್ದಿಯಿದೆ. ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೂರನೇ ಬಾರಿ ಅಧಿಕಾರಕ್ಕೆ ಬಂದ ನಂತರ, ಗ್ರಾಮೀಣ ಮತ್ತು ನಗರ ಪ್ರದೇಶಗಳ ಬಡ ಕುಟುಂಬಗಳಿಗೆ ಅತ್ಯುತ್ತಮ ಯೋಜನೆಯನ್ನು ಘೋಷಿಸಿದ್ದಾರೆ. ನೀವು ಸ್ವಂತ ಮನೆ ಇಲ್ಲದವರಾಗಿದ್ದರೆ ಅಥವಾ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರೆ, ಈ ಮಾಹಿತಿಯನ್ನು ಕಡ್ಡಾಯವಾಗಿ ಓದಿ.
ಕೇಂದ್ರ ಸರ್ಕಾರದಿಂದ ಗ್ರಾಮೀಣ ಮತ್ತು ನಗರ ಬಡವರಿಗೆ ಮನೆಗಳು ಯಾವಾಗ ಸಿಗುತ್ತವೆ? ಈ ಯೋಜನೆಯಡಿ ಕೇಂದ್ರ ಸರ್ಕಾರ ಯಾವಾಗ ಮನೆಗಳನ್ನು ಬಿಡುಗಡೆ ಮಾಡುತ್ತದೆ? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಬೇಕಾಗುವ ದಾಖಲೆಗಳೇನು? ಎಂಬ ಎಲ್ಲಾ ವಿವರಗಳನ್ನು ಈ ಲೇಖನದಲ್ಲಿ ನೀಡಲಾಗಿದೆ.
ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ನರೇಂದ್ರ ಮೋದಿ ಅವರು ಮೊದಲ ಸಚಿವ ಸಂಪುಟ ಸಭೆಯನ್ನು ನಡೆಸಿದ್ದು, ಪ್ರಮುಖ ತೀರ್ಮಾನವನ್ನ ಕೈಗೊಂಡಿದ್ದಾರೆ. ದೇಶದ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಬಡವರಿಗೆ 3 ಕೋಟಿ ಮನೆಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಈ ಮನೆಗಳನ್ನು ನಿರ್ಮಿಸಲು ನಿರ್ಧರಿಸಲಾಗಿದೆ.
ಈ ಮಹತ್ವದ ತೀರ್ಮಾನವನ್ನು ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ನಡೆದ ಸಂಪುಟ ಸಭೆಯಲ್ಲಿ 30 ಸಂಪುಟ ಸಚಿವರು, 5 ಸ್ವತಂತ್ರ ಖಾತೆ ನಿರ್ವಹಣೆ ಮತ್ತು 31 ರಾಜ್ಯ ಖಾತೆ ಸಚಿವರು ಪಾಲ್ಗೊಂಡಿದ್ದರು. ಮೊದಲ ಸಭೆಯಲ್ಲಿಯೇ ಬಡವರಿಗೆ ಅನುಕೂಲವಾಗುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಮತ್ತು ಎಲ್ಲಾ ಸಚಿವರು ಸಹಮತ ಸೂಚಿಸಿದ್ದಾರೆ.
ನಗರ ಮತ್ತು ಗ್ರಾಮೀಣ ಬಡವರು ತಮ್ಮ ಸ್ವಂತ ಮನೆ ಕನಸನ್ನು ನನಸು ಮಾಡುವ ದಿಸೆಯಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯಡಿ ಫಲಾನುಭವಿಗಳಿಗೆ ಬಯಲು ಪ್ರದೇಶದಲ್ಲಿ ಮನೆ ನಿರ್ಮಿಸಲು ₹1.20 ಲಕ್ಷ ರೂಪಾಯಿಯ ಸಹಾಯಧನ ನೀಡಲಾಗುತ್ತದೆ. ಗುಡ್ಡಗಾಡು ಪ್ರದೇಶದಲ್ಲಿ ಮನೆ ನಿರ್ಮಿಸಲು ₹1.30 ಲಕ್ಷ ರೂಪಾಯಿಯ ಸಹಾಯಧನ ನೀಡಲಾಗುತ್ತದೆ.
ಕಳೆದ 10 ವರ್ಷಗಳಲ್ಲಿ, ಕೇಂದ್ರ ಸರ್ಕಾರವು ಸುಮಾರು 4.21 ಕೋಟಿ ಮನೆಗಳನ್ನು ನಿರ್ಮಿಸಿ ಕೊಟ್ಟಿದೆ. ಪಿಎಂ ಕಿಸಾನ್ ನಿಧಿಯ ಹದಿನೇಳನೇ ಕಂತಿನ ಬಿಡುಗಡೆಗೆ ಅಧಿಕಾರ ನೀಡುವ ಕಡತಕ್ಕೂ ಸಹ ಪ್ರಧಾನ ಮಂತ್ರಿ ಸಹಿ ಹಾಕಿದ್ದಾರೆ. ಇದರ ಮೂಲಕ 9.3 ಕೋಟಿ ರೈತರಿಗೆ ಸವಾಲು ನಿರ್ವಹಣೆ ಮತ್ತು 20,000 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ.
ಇತರೆ ವಿಷಯಗಳು :
ಗೃಹಲಕ್ಷ್ಮಿ ಯೋಜನೆಯಲ್ಲಿ ಬಿಗ್ ಅಪ್ಡೇಟ್, ಇನ್ಮುಂದೆ ಒಟ್ಟು 1.78 ಲಕ್ಷದ ಮಹಿಳೆಯರಿಗೆ ಸಿಗೋದಿಲ್ಲ ಗೃಹಲಕ್ಷ್ಮಿ ಹಣ.
ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್, 7ನೇ ರಾಜ್ಯ ವೇತನ ಆಯೋಗ ಜಾರಿಯಾದ್ರೆ ವೇತನ ಎಷ್ಟು ಹೆಚ್ಚಾಗಲಿದೆ?