ನಮಸ್ಕಾರ ಕರ್ನಾಟಕ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರದಿಂದ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಸಂತಸದ ಸುದ್ದಿ. ಈಗ 5 ಲಕ್ಷ ರೂಪಾಯಿಯ ಆರ್ಥಿಕ ನೆರವನ್ನು ನೀಡುವ ಹೊಸ ಯೋಜನೆ ಜಾರಿಗೆ ಬಂದಿದೆ.
ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳು ಆಯುಷ್ಮಾನ್ ಕಾರ್ಡ್ ಅನ್ನು ನೋಂದಣಿ ಮಾಡಿಸಿಕೊಳ್ಳುವುದರಿಂದ ಪ್ರತಿವರ್ಷ 5 ಲಕ್ಷ ರೂಪಾಯಿಯ ಉಚಿತ ಚಿಕಿತ್ಸೆ ಪಡೆಯಲು ಅರ್ಹರಾಗುತ್ತಾರೆ. ಆರೋಗ್ಯ ರಕ್ಷಕ ಆಯುಷ್ಮಾನ್ ಭಾರತ್ – ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಮತ್ತು ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆಯಡಿ ಈ ಸೌಲಭ್ಯ ಲಭ್ಯವಿದೆ.
ಆಯುಷ್ಮಾನ್ ಕಾರ್ಡ್‌ನಿಂದ ಬಿಪಿಎಲ್ ಕಾರ್ಡುದಾರರು ಪ್ರತಿವರ್ಷ 5 ಲಕ್ಷ ರೂಪಾಯಿವರೆಗೆ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಪಡೆಯಬಹುದು. ಈ ಯೋಜನೆಯಿಂದ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳು ಮಾತ್ರವಲ್ಲ, ಎಪಿಎಲ್ ಕಾರ್ಡುದಾರರು ಸಹ ಲಾಭ ಪಡೆಯಬಹುದಾಗಿದೆ.
ಬಿಪಿಎಲ್ ಕುಟುಂಬಗಳಿಗೆ ವಾರ್ಷಿಕವಾಗಿ 1.5 ಲಕ್ಷ ರೂಪಾಯಿವರೆಗೆ ಉಚಿತ ಚಿಕಿತ್ಸೆ ಸಿಗುತ್ತದೆ. ಇನ್ನೂ ಆಯುಷ್ಮಾನ್ ಕಾರ್ಡ್ ಮಾಡಿಸದೇ ಇದ್ದವರು ತಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರಗಳಲ್ಲಿ ಪಡಿತರ ಚೀಟಿ ಮತ್ತು ಮೊಬೈಲ್ ಸಂಖ್ಯೆಯನ್ನು ನೀಡಿ ಉಚಿತವಾಗಿ ನೋಂದಣಿ ಮಾಡಿಸಬಹುದು. ಈ ಯೋಜನೆಯ ಎಲ್ಲಾ ವೆಚ್ಚವನ್ನು ಸರಕಾರವೇ ಭರಿಸುತ್ತದೆ.
ಆಯುಷ್ಮಾನ್ ಕಾರ್ಡನ್ನು ಹೊಂದಿರುವವರು ದೇಶದ ಯಾವುದೇ ಭಾಗದಲ್ಲಿದ್ದರೂ ಉಚಿತ ಚಿಕಿತ್ಸೆ ಪಡೆಯಬಹುದು. ತುರ್ತು ಪರಿಸ್ಥಿತಿಗಳಲ್ಲಿ 171 ರೀತಿಯ ಚಿಕಿತ್ಸೆಗಳನ್ನು ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ 104 ಅಥವಾ 14555ಗೆ ಕರೆಮಾಡಿ. ಟೋಲ್ ಫ್ರೀ ಸಂಖ್ಯೆ: 18004258330 ಅನ್ನು ಸಂಪರ್ಕಿಸಿ ಅಥವಾ ನಿಮ್ಮ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳನ್ನು ಸಂಪರ್ಕಿಸಬಹುದು.
ಇತರೆ ವಿಷಯಗಳು :
ಮಹಿಳೆಯರು ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ.
ಇನ್ಮುಂದೆ 300 ಯೂನಿಟ್ ಉಚಿತ ವಿದ್ಯುತ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರದಿಂದ ಸೂರ್ಯಘರ್ ಯೋಜನೆ ಘೋಷಣೆ
ಸ್ವಂತ ಮನೆ ಇಲ್ಲದವರಿಗೆ ಸಿಹಿ ಸುದ್ದಿ, 3 ಕೋಟಿ ಹೊಸ ಮನೆಗಳು ಬಿಡುಗಡೆ, ಇಂದೇ ಈ ಕೆಲಸ ಮಾಡಿ ಸ್ವಂತ ಮನೆ ಪಡೆದುಕೊಳ್ಳಿ.