SCDCC Bank jobs: ನಮಸ್ಕಾರ ಗೆಳೆಯರೇ, ನಮ್ಮ ರಾಜ್ಯದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇಲ್ಲಿ ಪ್ರಸ್ತುತ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ. ಈ ಕೆಲಸಕ್ಕೆ ನೇರ ನೇಮಕಾತಿಯಿಂದ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ಸಂಪೂರ್ಣ ಮಾಹಿತಿ ಓದಿ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ | ದ್ವಿತೀಯ ದರ್ಜೆ ಗುಮಾಸ್ತರು |
ಒಟ್ಟು ಹುದ್ದೆ | 123 |
ವೇತನ | ರೂ.24190- ರೂ.55655 ಹಾಗೂ ಇತರ ಭತ್ಯೆಗಳು |
ಈಗಾಗಲೇ 07-08-2023 ರ ಪ್ರಕಟಣೆಯ ಮೂಲಕ ಆಹ್ವಾನಿಸಲಾಗಿರುವ ಅರ್ಜಿಗಳಲ್ಲಿ ಲಿಖಿತ ಪರೀಕ್ಷೆಗೆ ಅರ್ಹರಾಗಿರುವ ಅಭ್ಯರ್ಥಿಗಳು ಹೊಸದಾಗಿ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಆದ್ಯತೆ:
ದ್ವಿತೀಯ ದರ್ಜೆ ಗುಮಾಸ್ತ ಹುದ್ದೆಗೆ ಬಿ.ಕಾಂ, ಬಿ.ಬಿ.ಎಂ. ಬಿ.ಸಿ.ಎ ಪದವಿಯಾದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ವಯೋಮಿತಿ
- ಅಭ್ಯರ್ಥಿಯ ಗರಿಷ್ಠ ವಯೋಮಿತಿಯು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದರೆ 40 ವರ್ಷ.
- ಇತರೆ ಹಿಂದುಳಿದ ಜಾತಿ ಮತ್ತು ವರ್ಗಗಳಿಗೆ 38 ವರ್ಷ.
- ಇತರರು 35 ವರ್ಷ ಮೀರಿರಬಾರದು.
- ಮಾಜಿ ಸೈನಿಕರು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 10 ವರ್ಷದ ಹೆಚ್ಚುವರಿ ರಿಯಾಯಿತಿ ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
- ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ.
- ಮೌಖಿಕ ಸಂದರ್ಶನಗಳ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿ ಶುಲ್ಕವಿಲ್ಲ
Apply online | Click here |