ಹಲೋ ಸ್ನೇಹಿತರೆ, ರಾಜ್ಯದಲ್ಲಿನ ಸಾಕ್ಷರತಾ ಪ್ರಮಾಣ ಕುಸಿಯುತ್ತಿರುವುದರಿಂದ, ಹೆಚ್ಚಳ ಮಾಡುವ ಉದ್ದೇಶದಿಂದ SSLC ಮತ್ತು ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಶಾಲಾ- ಕಾಲೇಜಿಗೆ ದಾಖಲಾಗಿ ಪಾಠ ಕೇಳುವ ಅವಕಾಶವನ್ನು ಶಿಕ್ಷಣ ಇಲಾಖೆ ನೀಡಿದೆ. ಈ ಅವಕಾಶದ ಬಗ್ಗೆ ಇನ್ನಷ್ಟು ಮಾಹಿತಿ ತಿಳಿದುಕೊಳ್ಳಲು ಈ ಲೇಖನವನ್ನು ಕೊನೆವರೆಗೂ ಓದಿ.
ರಾಜ್ಯದಲ್ಲಿ ಶಾಲಾ ಶಿಕ್ಷಣ, ಪದವಿ ಪೂರ್ವ ಮತ್ತು ಪದವಿ ಶಿಕ್ಷಣದಲ್ಲಿನ ಒಟ್ಟು ಸಾಕ್ಷರತೆ ಅನುಪಾತದಲ್ಲಿ ವ್ಯತ್ಯಾಸವಿದೆ. ಈ ಸಂಖ್ಯೆಯನ್ನು ಸರಿದೂಗಿಸಿ ಮತ್ತು ಉನ್ನತ ಶಿಕ್ಷಣ ಪಡೆಯುವವರು ಸಂಖ್ಯೆಯನ್ನು ಹೆಚ್ಚಳ ಮಾಡುವ ಉದ್ದೇಶದಿಂದ ಹೊಸ ನಿಯಮ ಜಾರಿಗೆ ತರಲಾಗಿದೆ ಎಂದು ಇಲಾಖೆ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ಆಂಧ್ರ ಪ್ರದೇಶದಲ್ಲಿರುವ ಇಂತಹ ಒಂದು ನಿಯಮವನ್ನು ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜಾರಿಗೊಳಿಸುತ್ತಿದೆ.
ಹೊಸ ನಿಯಮವೇನು?
2023-24ನೇ ಸಾಲಿನಲ್ಲಿ 10 ಮತ್ತು 12ನೇ ತರಗತಿಯಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಶಾಲೆಗಳಲ್ಲಿನ ಆಯಾ ತರಗತಿಗಳಿಗೆ ಪ್ರವೇಶ ಒದಗಿಸುವ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದರಂತೆ, ಸರ್ಕಾರ ಅನುಮತಿ ನೀಡಿದೆ. ಜಿಇಆರ್ ಸುಧಾರಿಸಲು ಪ್ರೋತ್ಸಾಹ ನೀಡುವ ಉದ್ದೇಶವನ್ನು ಸಹ ಹೊಂದಲಾಗಿದೆ.
ವಿದ್ಯಾರ್ಥಿಗೆ ಏನೆಲ್ಲ ಅನುಕೂಲಗಳಿವೆ?
- ರೆಗ್ಯುಲರ್ ಶಾಲಾ ಕಾಲೇಜು ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ/ದ್ವಿತೀಯ ಪಿಯುಸಿ ಪರೀಕ್ಷೆ 3 ಪರೀಕ್ಷೆಗಳಲ್ಲಿ ಅನುತ್ತೀರ್ಣರಾದಲ್ಲಿ ಮತ್ತೆ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಪ್ರವೇಶ ಪಡೆಯಲು ಆಸಕ್ತಿ ಇದ್ದಲ್ಲಿ ಮರು ದಾಖಲಾತಿಗೆ ಅವಕಾಶ ನೀಡಲಾಗುವುದು.
- ಮರು ದಾಖಲಾತಿ ಪಡೆಯುವ ವಿದ್ಯಾರ್ಥಿಗಳಿಗೆ ಇತರೆ ವಿದ್ಯಾರ್ಥಿಗಳಂತೆ ಎಲ್ಲ ಚಟುವಟಿಕೆಗಳಲ್ಲಿ ಭಾಗವಹಿಸಲು ಮತ್ತು ಎಲ್ಲ ವಿಷಯದ ತರಗತಿಗಳಲ್ಲಿ ಪೂರ್ಣಾವಧಿ ಹಾಜರಾಗಿ ಪರೀಕ್ಷೆ ಬರೆಯಬಹುದಾಗಿದೆ.
- ಶಾಲೆಗಳಲ್ಲಿ ಹಾಜರಾಗುವ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಪಠ್ಯಪುಸ್ತಕಗಳು, ಶೂ ಮತ್ತು ಸಾಕ್ಸ್, ಮಧ್ಯಾಹ್ನದ ಬಿಸಿಯೂಟ ಸೇರಿ ಎಲ್ಲ ಪ್ರೋತ್ಸಾಹ ಸೌಲಭ್ಯಗಳನ್ನು ಈ ಮಕ್ಕಳಿಗೂ ವಿಸ್ತರಿಸಬೇಕು. ಶುಲ್ಕ ಪಾವತಿಯಲ್ಲಿ ಸಹ ವಿನಾಯಿತಿ ನೀಡಬೇಕು.
- ಇಂತಹ ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಮತ್ತೆ ಆಸಕ್ತಿ ಹುಟ್ಟುವಂತೆ ಮಾಡಲು ಧನಾತ್ಮಕ ಮನೋಭಾವನೆ ಉಂಟಾಗುವಂತೆ ಕ್ರಮ ಕೈಗೊಳ್ಳಬೇಕು.
ಇತರೆ ವಿಷಯಗಳು:
300 ರೂ.ಗೆ ಎಲ್ಪಿಜಿ ಸಿಲೆಂಡರ್! ಗ್ರಾಹಕರು ಇಂದೇ ಪ್ರಯೋಜನ ಪಡೆಯಿರಿ
ಮದ್ಯಪ್ರಿಯರಿಗೆ ಸರ್ಕಾರದಿಂದ ನೆಮ್ಮದಿ ಸುದ್ದಿ! ಇಂದಿನಿಂದ `ಎಣ್ಣೆ’ ಬೆಲೆ ಏರಿಕೆಗೆ ಬ್ರೇಕ್