ಹಲೋ ಸ್ನೇಹಿತರೆ, ರಾಜ್ಯದಲ್ಲಿನ ರೈತರಿಗೆ ತೋಟಗಾರಿಕೆ ಇಲಾಖೆಯಿಂದ 2024-25 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ವರ್ಗದ ರೈತರಿಂದ ಸಹಾಯಧನ ಯೋಜನೆಗೆ ಅರ್ಜಿ ಆಹ್ವಾನಿಸಿದೆ. ಎಷ್ಟು ಸಹಾಯಧನ ಸಿಗಲಿದೆ? ಈ ಎಲ್ಲಾ ಮಾಹಿತಿಯ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ ಕೊನೆವರೆಗೂ ಓದಿ.

ತೋಟಗಾರಿಕೆ ಬೆಳೆಯನ್ನು ಬೆಳೆಯುತ್ತಿರುವ ಹಾಗೂ ನೀರಾವರಿ ಅಳವಡಿಸಿದ ಎಲ್ಲಾ ವರ್ಗದ ರೈತರ ಪ್ರತಿ ಫಲಾನುಭವಿಗೆ ಗರಿಷ್ಟ 5 ಹೆಕ್ಟೇರ್ ಪ್ರದೇಶದವರೆಗೆ ಹಾಗೂ ತರಕಾರಿ ಮತ್ತು ಹೂ ಬೆಳೆಗಳಿಗೆ ಗರಿಷ್ಟ 2 ಹೆಕ್ಟೇರ್ ಪ್ರದೇಶಕ್ಕೆ ಸಹಾಯಧನವನ್ನು ನೀಡಲಾಗುವುದು.
ಸೂಕ್ಷ್ಮ ನೀರಾವರಿ ಘಟಕ ಅಳವಡಿಸಿದ ಅರ್ಹ ಪ.ಜಾತಿ/ಪ.ಪಂಗಡದ ರೈತರ ಫಲಾನುಭವಿಗಳಿಗೆ 2 ಹೆಕ್ಟರ್. ಪ್ರದೇಶದವರೆಗೆ ಶೇ.90% ಮತ್ತು ಇತರೇ ವರ್ಗದ ರೈತ ಫಲಾನುಭವಿಗೆ ಶೇ.55 ರಷ್ಟು ಹಾಗೂ ಎಲ್ಲಾ ವರ್ಗದ ರೈತರಿಗೆ 3 ಹೆಕ್ಟರ್ ಪ್ರದೇಶಕ್ಕೆ ಶೇ. 45% ರಷ್ಟು ಸಹಾಯಧನ ನೀಡಲಾಗುತ್ತದೆ.
ಇದನ್ನು ಸಹ ಓದಿ: ಉಜ್ವಲಾ ಯೋಜನೆಗೆ ಮತ್ತೆ ಅರ್ಜಿ ಆಹ್ವಾನ! ಅವಕಾಶವಂಚಿತರು ಅಪ್ಲೇ ಮಾಡಬಹುದು
ಕೃಷಿ ಇಲಾಖೆಯಿಂದ ಅನುಮೋದಿತ ಕಂಪನಿಗಳ ಮಾಹಿತಿಯನ್ನು ಹಾಗೂ ಹೆಚ್ಚಿನ ವಿವರಗಳನ್ನು ಆಯಾ ಹೋಬಳಿಗಳಿಗೆ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಭೇಟಿ ಮಾಡಿ ಪಡೆಯಬಹುದಾಗಿದೆ.
ಈ ಹಿಂದೆ ಅರ್ಜಿ ಸಲ್ಲಿಸಿ ಸಹಾಯಧನ ಪಡೆಯದವರು ಈ ಸಾಲಿನಲ್ಲಿ ಪುನಃ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ ಹಾಗೂ ಸಹಾಯಧನ ಪಡೆಯಲು ಒಳ್ಳೆಯ ಅವಕಾಶ ಇದಾಗಿದೆ ಎಂದು ತೋಟಗಾರಿಕೆ ಇಲಾಖೆಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಇತರೆ ವಿಷಯಗಳು:
ಸರ್ಕಾರದ ಈ ಯೋಜನೆಯಡಿ ಪ್ರತಿ ತಿಂಗಳು ಸಿಗಲಿದೆ 1,000 ರೂ. ನೆರವು!
ಆ.31 ಲಾಸ್ಟ್ ಡೇಟ್: ಮುಂದಿನ ತಿಂಗಳಿನಿಂದ ರೇಷನ್ ಸೌಲಭ್ಯ ನಿಲ್ಲಿಸಲು ಸರ್ಕಾರದ ಆದೇಶ!