ಹಲೋ ಸ್ನೇಹಿತರೆ, ರಾಜ್ಯದಲ್ಲಿ ಕೃಷಿ ಭೂಮಿ ಖರೀದಿಗೆ ಸಂಬಂಧಿಸಿದಂತೆ ಹೊಸ ನಿಯಮ ಜಾರಿಗೆ ತರಲು ಸರ್ಕಾರ ತಿರ್ಮಾನಿಸಿದ್ದು, ಶೀಘ್ರವೇ ಭೂ ಸುಧಾರಣೆ ಕಾಯ್ದೆಯನ್ನು ತಿದ್ದುಪಡಿ ಮಾಡಲು ನಿರ್ಧರಿಸಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಸಂಪೂರ್ಣ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಭೂ ಸುಧಾರಣೆಗೆ ಮರು ತಿದ್ದುಪಡಿ ತಂದು ಉದ್ಯಮಿಗಳ ಪಾಲಾಗುತ್ತಿರುವ ಕೃಷಿಕರ ಜಮೀನುಗಳನ್ನು ಮರಳಿ ಕೃಷಿಕರಿಗೆ ಮಾತ್ರ ಸಿಗುವಂತೆ ಮಾಡಲಾಗುವುದು ಎಂದರು.
ಭೂ ಸುಧಾರಣೆ ಕಾಯ್ದೆಯನ್ನು ತಿದ್ದುಪಡಿ ಮಾಡಿ ಅಸಂಖ್ಯಾತ ಜನರಿಗೆ ಭೂಮಿಯ ಮಾಲೀಕತ್ವ ನೀಡಿದರು. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಭೂಮಿಯ ಹಕ್ಕನ್ನು ಖಾತರಿ ಮಾಡಲು 79 ಎ ಮತ್ತು ಬಿ ಗೆ ಮಾಡಿರುವ ತಿದ್ದುಪಡಿಯನ್ನು ಮತ್ತೆ ಸರಿಪಡಿಸಲಾಗುವುದು ಎಂದು ಹೇಳಿದರು.
ಇದನ್ನು ಓದಿ: ಅಕ್ಟೋಬರ್ 1 ರಿಂದ ಸಣ್ಣ ಉಳಿತಾಯ ಯೋಜನೆಗಳಿಗೆ ಹೊಸ ನಿಯಮ ಜಾರಿ.!
ಸ್ವಾತಂತ್ರ್ಯ ಬಂದು 77 ವರ್ಷಗಳು ಕಳೆದರೂ ಇನ್ನೂ ನಮ್ಮಲ್ಲಿ ಸಾಮಾಜಿಕ ಸಮಾನತೆ ಬೆಳೆಸಲು ಸಾಧ್ಯವಾಗಿಲ್ಲ. ಸಮಾನವಾಗಿ ಸಂಪತ್ತು ಹಂಚಿಕೆ ಮಾಡಲು ನಮಗೆ ಸಾಧ್ಯವಾಗಿಲ್ಲ. ವ್ಯಕ್ತಿಯನ್ನು ಜಾತಿಯ ಆಧಾರದ ಮೇಲೆ ಗುರುತಿಸುವಂತಹ ವ್ಯವಸ್ಥೆ ಇನ್ನೂ ನಮ್ಮಲ್ಲಿ ಇದೆ. ಜನರನ್ನು ಅವರ ವ್ಯಕ್ತಿತ್ವದ ಮೇಲೆ, ಪ್ರತಿಭೆ ಮೇಲೆ ಗುರುತಿಸದೆ ಜಾತಿ ಆಧಾರದಲ್ಲಿ ಗುರುತಿಸಲಾಗುತ್ತಿದೆ. ಆದರೆ ಯಾರೂ ಕೂಡಾ ಜಾತಿ ಆಧಾರದಲ್ಲಿ ಸಮಾಜದಲ್ಲಿ ಪ್ರತಿಭಾವಂತ ವ್ಯಕ್ತಿ ಆಗಲು ಸಾಧ್ಯವಿಲ್ಲ. ಸರಿಯಾದ ಅವಕಾಶಗಳು ಸಿಕ್ಕಿದರೆ ಮಾತ್ರ ಪ್ರತಿಭಾವಂತ ಆಗಲು ಸಾಧ್ಯ ಎಂದರು.
ಇತರೆ ವಿಷಯಗಳು:
ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ಚಿನ್ನದ ದರ ಕುಸಿತ!
ಸರ್ಕಾರಿ ನೌಕರರಿಗೆ ರೋಚಕ ಸುದ್ದಿ.. ಹೊಸ ಆಯೋಗದ ನವೀಕರಣ!