ಆ. 20ರಿಂದ ಈ ಪಟ್ಟಿಯಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ!

ಹಲೋ ಸ್ನೇಹಿತರೆ, ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟು ಹೋಗಿದ್ದರೆ ಅಥವಾ ತಿದ್ದುಪಡಿ ಮಾಡಬೇಕಾದರೆ ಕೇಂದ್ರ ಚುನಾವಣಾ ಆಯೋಗ ಸಿಹಿಸುದ್ದಿ ನೀಡಿದ್ದು, ಮತದಾರರ ಪಟ್ಟಿ ಪರಿಷ್ಕರಣೆಯ ವೇಳಾಪಟ್ಟಿ ಪ್ರಕಟಿಸಿದೆ. ಅಗಸ್ಟ್ 20 ರಿಂದ ಅಕ್ಟೋಬರ್ 18ರವರೆಗೆ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ ನೀಡಲಾಗಿದೆ.

Allowance for additioncorrection of name in voter list

ಮತದಾರರ ಪಟ್ಟಿ ಪರಿಷ್ಕರಣೆ ಸಮಯದಲ್ಲಿ ರಾಜ್ಯದ ಎಲ್ಲಾ ಮತಗಟ್ಟೆಯ ಅಧಿಕಾರಿಗಳು ಮನೆಗಳಿಗೆ ಭೇಟಿ ನೀಡಲಿದ್ದು, ಈ ಸಮಯದಲ್ಲಿ ನಾಗರಿಕರು ಯಾವುದೇ ತಿದ್ದುಪಡಿ ಇದ್ದಲ್ಲಿ, ಹೆಸರು ನೋಂದಣಿ, ಮೃತರು ಮತ್ತು ಸ್ಥಳಾಂತರಗೊಂಡ ಮತದಾರರ ಹೆಸರುಗಳ ತೆಗೆದು ಹಾಕಲು, 18 ವರ್ಷ ತುಂಬುವ ಯುವ ಮತದಾರರ ಹೆಸರು ಸೇರ್ಪಡೆ ಕುರಿತು ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನು ಸಹ ಓದಿ: ಟಮೊಟೋ ಬೆಳೆದ ರೈತರಿಗೆ ಶಾಕ್‌! ದಿಢೀರನೆ ಕುಸಿದ ಬೆಲೆ

ಆಗಸ್ಟ್ 20 ರಿಂದ ಅಕ್ಟೋಬರ್ 18ರವರೆಗೆ ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದೂ. ಅಕ್ಟೋಬರ್ 19 ರಿಂದ 28 ರ ವರೆಗೆ ಸಮಗ್ರ ಕರಡು ಮತದಾರರ ಪಟ್ಟಿಯನ್ನು ಸಿದ್ಧಪಡಿಸಲಾಗುವುದು. ಅಕ್ಟೋಬರ್ 29ರಂದು ಸಮಗ್ರ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಲಾಗುವುದು. ಸಾರ್ವಜನಿಕರು ತಮ್ಮ ಲೋಪದೋಷಗಳ ಕುರಿತಾಗಿ ಅಕ್ಟೋಬರ್ 29 ರಿಂದ ನವೆಂಬರ್ 28ರ ವರೆಗೆ ಈ ಕುರಿತು ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

2025ರ ಜನವರಿ 1ರೊಳಗೆ ಮತದಾರರ ಪಟ್ಟಿಯ ಗುಣಮಟ್ಟವನ್ನು ಚೆಕ್ ಮಾಡಲಾಗುವುದು. ಜನವರಿ 6ರಂದು ಅಂತಿಮ ಪಟ್ಟಿ ಪ್ರಕಟಿಸಲಾಗುವುದು. ಆಕ್ಷೇಪಣೆ ಅವಧಿಯಲ್ಲಿ ಮುಖ್ಯ ಚುನಾವಣಾ ಅಧಿಕಾರಿಗಳು ನಿಗದಿತ ಶನಿವಾರ ಮತ್ತು ಭಾನುವಾರ ವಿಶೇಷ ಅಭಿಯಾನದ ದಿನಾಂಕಗಳನ್ನು ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ.

ಇತರೆ ವಿಷಯಗಳು:

ಆಭರಣ ಪ್ರಿಯರಿಗೆ ಸಿಹಿ ಸುದ್ದಿ, ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ.

ಬಿಪಿಎಲ್ ಕಾರ್ಡ್ದಾರರ ಮೇಲೆ ಕ್ರಿಮಿನಲ್ ಕೇಸ್!ಅನರ್ಹರ ರೇಷನ್ ಕಾರ್ಡ್ ರದ್ದು..!

Leave a Reply

Your email address will not be published. Required fields are marked *

rtgh