Anganawadi job: ನಮಸ್ಕಾರ ರಾಜ್ಯದ ಮಹಿಳೆಯರೇ, ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ವಿವಿಧ ತಾಲೂಕುಗಳಿಂದ ಅರ್ಜಿ ಆಹ್ವಾನಿ, 61 ಅಂಗನವಾಡಿ ಕಾರ್ಯಕರ್ತೆ ಹಾಗೂ 238 ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಯಲ್ಲ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಉದ್ಯೋಗ ಸ್ಥಳ:
ಕಲಬುರಗಿ ಜಿಲ್ಲೆಯ ಒಂಬತ್ತು ಶಿಶು ಅಭಿವೃದ್ಧಿಯೋಜನೆಗಳ ಕಚೇರಿ.
ಹುದ್ದೆಗಳ ವಿವರ:
ಅಫಜಲ್ಪೂರ ತಾಲೂಕಿನಲ್ಲಿ 17 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 25 ಸಹಾಯಕಿಯರ ಹುದ್ದೆಗಳು, ಆಳಂದ ತಾಲೂಕಿನಲ್ಲಿ 5 ಅಂಗನವಾಡಿ ಕಾರ್ಯಕರ್ತೆಯರ ಮತ್ತು 26 ಸಹಾಯಕಿಯರ ಹುದ್ದೆಗಳು, ಚಿಂಚೋಳಿ ತಾಲೂಕಿನಲ್ಲಿ 7 ಅಂಗನವಾಡಿ ಕಾರ್ಯಕರ್ತೆಯರ ಹಾಗೂ15 ಸಹಾಯಕಿಯರ ಹುದ್ದೆಗಳು, ಚಿತ್ತಾಪುರ ತಾಲೂಕಿನಲ್ಲಿ 10 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಕೊನೆ ದಿನಾಂಕ:
ವೆಬ್ಸೈಟ್ ನಲ್ಲಿ ಆನ್ಲೈನ್ಮೂಲಕ ಆಗಸ್ಟ್ 7 ರ ಸಂಜೆ 5.30 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಆಯಾ ತಾಲೂಕಿನಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
- ಮಹಿಳೆಯರ ಬಳಿ ಆಧಾರ್ ಕಾರ್ಡ್ ಇರಬೇಕು.
- ವಿಧ್ಯಾಭ್ಯಾಸ ಅರ್ಹತೆ ಪ್ರಮಾಣ ಪತ್ರ ಇರಬೇಕು.
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಇರಬೇಕು.
- ಜನ್ಮದಿನಾಂಕದ ದಾಖಲೆ ಇರಬೇಕು.
- ಇತ್ತೀಚಿನ ಭಾವಚಿತ್ರ ಇರಬೇಕು.
ವಯೋಮಿತಿ:
ಅಂಗನವಾಡಿ ಕಾರ್ಯಕರ್ತೆ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು 19-35 ವಯೋಮಿತಿಯೊಳಗಿನ ಹೆಣ್ಣು ಮಕ್ಕಳು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತರು ಅರ್ಜಿ ಸಲ್ಲಿಸಬಹುದು.ವಿಕಲಚೇತನರಿಗೆ 10 ವರ್ಷ ಗಳ ವಯೋಮಿತಿ ಸಡಿಲಿಕೆ ಇರುತ್ತದೆ.
ವಿಧವೆಯರ ಆಯ್ಕೆ:
ನೇಮಕಾತಿ ಪ್ರಕ್ರಿಯೆಯಲ್ಲಿ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳಿಗೆ 5 ಬೋನಸ್ ಅಂಕಗಳನ್ನು ನೀಡಲಾಗುವುದು.
ಅಂಗನವಾಡಿ ಕಾರ್ಯಕರ್ತೆ ಸಹಾಯಕಿಯರ ಹುದ್ದೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಇಲ್ಲಿ ಸ್ಲಲಿಸಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.
Apply Online | Click here |