ಪೂರ್ವ ಪ್ರಾಥಮಿಕ ಹಂತದಲ್ಲೇ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಎಲ್ ಕೆಜಿ, ಯುಕೆಜಿ ಆರಂಭದ ಬಗ್ಗೆ ಇತ್ತಿಚಿಗೆ ಮಾಹಿತಿ ನೀಡಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಳ್ಕರ್, ಇದೀಗ ಶೀಘ್ರವೇ ಅಂಗನವಾಡಿ ಶಿಕ್ಷಕಿಯರ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಈಗಾಗಲೇ ಆನ್‌ಲೈನ್ ಮೂಲಕ ಅರ್ಜಿ ಕರೆದಿದ್ದು, ಜಿಲ್ಲಾಧಿಕಾರಿಗಳ, ಜಿಲ್ಲಾ ಪಂಚಾಯಿತಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಒಳಗೊಂಡ ಜಿಲ್ಲಾ ಮಟ್ಟದ ಸಮಿತಿಯಲ್ಲಿ ನೇಮಕಾತಿ ನಡೆಯಲಿದೆ ಎಂದರು.
ಅಂಗನವಾಡಿಯ ಮೂಲ ಉದ್ದೇಶ, ಉತ್ತಮ ಶಿಕ್ಷಣದ ಜೊತೆಗೆ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವುದು. ಮುಖ್ಯಮಂತ್ರಿಗಳು ಈಗಾಗಲೇ ಮೌಕಿಕವಾಗಿ ಆದೇಶ ನೀಡಿದ್ದು, ಇದೇ 22 ರಿಂದ ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ತರಗತಿಗಳನ್ನು ಆರಂಭಿಸಲಾಗುತ್ತಿದ್ದು, ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣ ಮಾಡಲಾಗುವುದು ಎಂದರು.
ಪೌಷ್ಠಿಕ ಆಹಾರ ಯೋಜನೆಯಡಿ ಅಕ್ಕಿ, ಗೋಧಿಯನ್ನು ಕೇಂದ್ರ ಸರ್ಕಾರದ ಎಫ್.ಸಿ.ಐ ಮೂಲಕ, ಹಾಲಿನ ಪುಡಿಯನ್ನು ಕೆ.ಎಂ.ಎಫ್ ಮೂಲಕ ಖರೀದಿಸಲಾಗುತ್ತಿದೆ. ಕೋಳಿಮೊಟ್ಟೆಗಳನ್ನು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಸ್ಥಳೀಯವಾಗಿ ಖರೀದಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.
ಇತರೆ ವಿಷಯಗಳು :
ಗೃಹಲಕ್ಷ್ಮಿ ಯೋಜನೆಯಲ್ಲಿ ಬಿಗ್ ಅಪ್ಡೇಟ್, ಇನ್ಮುಂದೆ ಒಟ್ಟು 1.78 ಲಕ್ಷದ ಮಹಿಳೆಯರಿಗೆ ಸಿಗೋದಿಲ್ಲ ಗೃಹಲಕ್ಷ್ಮಿ ಹಣ.
ಸ್ವಂತ ಮನೆ ಇಲ್ಲದವರಿಗೆ ಸಿಹಿ ಸುದ್ದಿ, 3 ಕೋಟಿ ಹೊಸ ಮನೆಗಳು ಬಿಡುಗಡೆ, ಇಂದೇ ಈ ಕೆಲಸ ಮಾಡಿ ಸ್ವಂತ ಮನೆ ಪಡೆದುಕೊಳ್ಳಿ.
ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್, 7ನೇ ರಾಜ್ಯ ವೇತನ ಆಯೋಗ ಜಾರಿಯಾದ್ರೆ ವೇತನ ಎಷ್ಟು ಹೆಚ್ಚಾಗಲಿದೆ?