ನಮಸ್ಕಾರ ಕರ್ನಾಟಕ, ನಮ್ಮ ಆರೋಗ್ಯ ಒಳ್ಳೆಯದಾಗಿದರೆ, ನಾವು ಬಹಳಷ್ಟು ಸಾಧಿಸಬಹುದು. “ಆರೋಗ್ಯವೇ ಭಾಗ್ಯ” ಎಂದು ಹೇಳುವುದರಲ್ಲಿ ನಿಜವೇ ಇದೆ. ಆದರೆ, ಇಂದಿನ ಕಾಲದಲ್ಲಿ ವೈದ್ಯಕೀಯ ಸೇವೆಗಳು ಹೆಚ್ಚು ಖಾಸಗೀಕರಣಗೊಳ್ಳುತ್ತಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವುದು ದುಬಾರಿ ವಿಷಯವಾಗಿದೆ.
ಬಡವರಿಗೆ ಈ ಸೇವೆಗಳನ್ನು ಪಡೆಯುವುದು ಕಷ್ಟವಾಗಿದೆ. ಆದ್ದರಿಂದ, ಸರ್ಕಾರ ಬಡವರಿಗೆ ನೆರವಾಗುವ ಉಚಿತ ಆರೋಗ್ಯ ಸೇವೆಗಳನ್ನು ಒದಗಿಸಲು ಹೊಸ ಯೋಜನೆಯನ್ನು ಪರಿಚಯಿಸಿದೆ. ಈ ಯೋಜನೆ ‘ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ’ ಎಂಬುದು.
ಈ ಯೋಜನೆ ಬಿಪಿಎಲ್ ಕಾರ್ಡ್ ಹೊಂದಿರುವವರಿಗಾಗಿ ವಿಶೇಷವಾಗಿ ಜಾರಿಗೆ ತಂದಿದ್ದು, 2018ರಲ್ಲಿ ಕರ್ನಾಟಕದಲ್ಲಿ ಪ್ರಾರಂಭವಾಯಿತು. ಈ ಯೋಜನೆಯ ಮೂಲಕ ರಾಜ್ಯದ ಬಡಜನರಿಗೆ ಉಚಿತ ಆರೋಗ್ಯ ಸೇವೆಗಳನ್ನು ನೀಡಲು ಸರ್ಕಾರ ಮುಂದಾಗಿದೆ.
ರೇಷನ್ ಕಾರ್ಡ್ ಹೊಂದಿರುವವರು ಈ ಉಚಿತ ಚಿಕಿತ್ಸೆಯ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಈ ಯೋಜನೆಯಡಿಯಲ್ಲಿ ಕೆಲವು ಸರ್ಕಾರಿ ಹಾಗೂ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಸೇವೆಗಳು ಲಭ್ಯವಿದೆ.
ಅಸ್ಪತ್ರೆಯಲ್ಲಿ ಉತ್ತಮ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಅಸ್ಪತ್ರೆಯಲ್ಲಿ ಸೇರಿರುವ ವೆಚ್ಚ, ಚಿಕಿತ್ಸೆ, ಔಷಧಿ, ಡಿಸ್ಚಾರ್ಜ್ ಆದ ನಂತರದ ವೆಚ್ಚ ಇತ್ಯಾದಿಗಳನ್ನು ಈ ಕಾರ್ಡ್ ಆವರಿಸುತ್ತದೆ.
ಈ ಕಾರ್ಡ್ ನಿಮ್ಮ ಬಳಿ ಇದ್ದರೆ ವರ್ಷಕ್ಕೆ 5 ಲಕ್ಷ ರೂಪಾಯಿಯವರೆಗೂ ಉಚಿತ ಚಿಕಿತ್ಸೆಯನ್ನು ಪಡೆಯಬಹುದು. ವರ್ಷಕ್ಕೆ ಒಂದು ಕುಟುಂಬಕ್ಕೆ 1.50 ಲಕ್ಷ ರೂಪಾಯಿಯವರೆಗೆ ಚಿಕಿತ್ಸಾ ಸೌಲಭ್ಯ ಲಭ್ಯವಿರುತ್ತದೆ.
ಈ ಸೌಲಭ್ಯ ಪಡೆಯಲು ರೇಷನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಬೇಕು. ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವವರಿಗೆ 1.5 ಲಕ್ಷ ರೂಪಾಯಿಯವರೆಗೆ ಚಿಕಿತ್ಸೆ ಪಡೆಯಲು ಅನುಮತಿ ಇದೆ. ಸರ್ಕಾರದ ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಉಪಯೋಗಿಸುವುದನ್ನು ತಪ್ಪಿಸಿಕೊಳ್ಳಬೇಡಿ.
ಅವಶ್ಯಕತೆ ಇರುವ ದಾಖಲೆಗಳು:
ಆಧಾರ್ ಕಾರ್ಡ್
ರೇಷನ್ ಕಾರ್ಡ್
ಪ್ಯಾನ್ ಕಾರ್ಡ್
ಕ್ಯಾಸ್ಟ್ ಸರ್ಟಿಫಿಕೇಟ್
ಇನ್ಕಮ್ ಸರ್ಟಿಫಿಕೇಟ್
ಈ ಯೋಜನೆಯ ಸೌಲಭ್ಯವನ್ನು ಪಡೆಯಲು abdm.gov.in ಲಿಂಕ್ ಗೆ ಭೇಟಿ ನೀಡಿ. ಇಲ್ಲಿ ಆಯುಷ್ಮಾನ್ ಭಾರತ್ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಈ ಸೌಲಭ್ಯದಿಂದ ನೀವು ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಎರಡೂ ಕಡೆಗಳಲ್ಲಿ ಚಿಕಿತ್ಸೆ ಪಡೆಯಬಹುದು.
ಇತರೆ ವಿಷಯಗಳು :
ಕೇಂದ್ರ ಸರ್ಕಾರದ ಮತ್ತೊಂದು ಮಹತ್ವದ ಯೋಜನೆ! ಅಪಘಾತದಲ್ಲಿ ಗಾಯಗೊಂಡವರಿಗೆ 1.5 ಲಕ್ಷ
ವಾಹನ ಸವಾರರೇ ಇಂದಿನಿಂದ ಈ ನಿಯಮಗಳು ಬದಲಾಗುತ್ತವೆ, ನಿಯಮ ಉಲ್ಲಂಘಿಸಿದರೆ ದಂಡ ಫಿಕ್ಸ್.