Canara Bank Recruitment 2024: ನಮಸ್ಕಾರ ಕರ್ನಾಟಕ, ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್‌ಗಳಲ್ಲೊಂದು ಆಗಿರುವ ಕೆನರಾ ಬ್ಯಾಂಕ್ (Canara Bank) 2024ನೇ ಸಾಲಿನ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. 1 ಮುಖ್ಯ ಅರ್ಥಶಾಸ್ತ್ರಜ್ಞ (Chief Economist) ಹುದ್ದೆಯು ಖಾಲಿ ಇರುವುದರಿಂದ, ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 28, 2024 ಆಗಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು. ಆಯ್ಕೆಯಾದವರು ಭಾರತಾದ್ಯಂತ ಎಲ್ಲಿ ಬೇಕಾದರೂ ಪೋಸ್ಟಿಂಗ್ ಪಡೆಯಬಹುದು.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ವಿವರ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಇತ್ಯಾದಿಗಳ ಕುರಿತು ಮಾಹಿತಿ ಪಡೆಯುವುದು ಅತೀವ ಮುಖ್ಯ. ಈ ಕುರಿತು ಮಾಹಿತಿ ಈ ಕೆಳಗಿನಂತಿದೆ:
ಶೈಕ್ಷಣಿಕ ಅರ್ಹತೆ:
ಕೆನರಾ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಎಕನಾಮಿಕ್ಸ್/ಎಕನಾಮಿಟ್ರಿಕ್ಸ್‌ನಲ್ಲಿ ಸ್ನಾತಕೋತ್ತರ ಅಥವಾ ಡಾಕ್ಟರಲ್ ಪದವಿ ಹೊಂದಿರಬೇಕು.
ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಮಾರ್ಚ್ 1, 2024ಕ್ಕೆ ಗರಿಷ್ಠ 55 ವರ್ಷ ಮೀರಿರಬಾರದು. ಮೀಸಲಾತಿ ಪ್ರಕಾರ ಕೆಲವು ಅರ್ಹ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಈ ನೇಮಕಾತಿ ಪ್ರಕ್ರಿಯೆಯಲ್ಲಿ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ.
ವೇತನ:
ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಗದಿಪಡಿಸಿದ ವೇತನವಿಲ್ಲ. ಅವರ ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ನೀಡಲಾಗುತ್ತದೆ.
ಉದ್ಯೋಗ ಸ್ಥಳ: ಬೆಂಗಳೂರು
ಆಯ್ಕೆ ಪ್ರಕ್ರಿಯೆ:
- ಸ್ಕ್ರೀನಿಂಗ್
- ಶಾರ್ಟ್‌ಲಿಸ್ಟಿಂಗ್
- ಇಂಟರ್‌ಯಾಕ್ಷನ್
- ಸಂದರ್ಶನ
ಅರ್ಜಿಯನ್ನು ಹೇಗೆ ಸಲ್ಲಿಸಬೇಕು?
ಅಭ್ಯರ್ಥಿಗಳು ನೋಟಿಫಿಕೇಶನ್‌ನಲ್ಲಿ ನೀಡಿರುವಂತೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ನೇರವಾಗಿ ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಬಳಸಿ.
Apply Online | Click here |
ಇತರೆ ವಿಷಯಗಳು :
SCDCC Bank jobs: ಸಹಕಾರಿ ಬ್ಯಾಂಕ್‌ನಲ್ಲಿ ಒಟ್ಟು 123 ಹುದ್ದೆಗಳ ನೇಮಕ, ತಡ ಮಾಡದೆ ಇಂದೇ ಅರ್ಜಿ ಸಲ್ಲಿಸಿ.