ಹಲೋ ಸ್ನೇಹಿತರೆ, ಅತೀ ಮಳೆಯ ಕಾರಣಕ್ಕೆ ರಾಜ್ಯಾದ್ಯಂತ 80,000 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ಹಾಳಾಗಿದ್ದು, ವಾರದೊಳಗಾಗಿ ಎಲ್ಲಾ ರೈತರಿಗೂ ಪರಿಹಾರ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, “ರಾಜ್ಯಾದ್ಯಂತ ಕೃಷಿ ಬೆಳೆ 78679 ಹೆಕ್ಟೇರ್ ಹಾನಿಯಾಗಿದ್ದರೆ, ತೋಟಗಾರಿಕಾ ಬೆಳೆ 2294 ಹೆಕ್ಟೇರ್ ಪ್ರದೇಶ ಹಾನಿಯಾಗಿದೆ ಎಂದು ವರದಿ ದೊರಡತಿದೆ ಎಂದರು.
ಇನ್ನು 1 ವಾರದೊಳಗೆ ರೈತರಿಗೆ ಪರಿಹಾರ ನೀಡುವ ಕಾರ್ಯಕ್ಕೂ ತಕ್ಚಣ ಚಾಲನೆ ನೀಡಲಾಗುವುದು ಎಂದರು. ಪ್ರಸ್ತುತ ರಾಜ್ಯ ಸರ್ಕಾರದ ಬೆಳೆ ಇರುವ ಸಂಪನ್ಮೂಲದಲ್ಲೇ ಪರಿಹಾರ ನೀಡಲಾಗುವುದು. ಇನ್ನೂ ಮಳೆಗಾಲ ಒಂದೂವರೆ ತಿಂಗಳ ಬರುವ ಸಾಧ್ಯತೆ ಇರುವುದರಿಂದ ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಳೆಹಾನಿಯಾಗುವ ಸಂಭವವಿದೆ. ಹೀಗಾಗಿ ಮುಂಗಾರಿನ ಸಂಪೂರ್ಣ ಅವಧಿ ಮುಗಿದ ತದನಂತರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು” ಎಂದು ತಿಳಿಸಿದರು.
“ಈ ವರ್ಷ ಬೆಳೆಹಾನಿ ಪ್ರಮಾಣವನ್ನು ಸ್ವಲ್ಪ ಮಟ್ಟಿಗೆ ನಿಯಂತ್ರಿಸಲಾಗಿದೆ. 2020ರಲ್ಲಿ 2.21 ಲಕ್ಷ ಹೆಕ್ಟೇರ್ ನಷ್ಟು ಬೆಳೆ ಹಾನಿಗೊಳಗಾಗಿತ್ತು. 2021ರಲ್ಲಿ 2.12 ಲಕ್ಷ ಹೆಕ್ಟೇರ್ ಹಾಗೂ 2022 ರಲ್ಲಿ 1.53 ಹೆಕ್ಟೇರ್ ಬೆಳೆಹಾನಿಯಾಗಿತ್ತು. ಆದರೆ, ಕಳೆದ ವರ್ಷಗಳಿಗೆ ಹೋಲಿಕೆ ಮಾಡಿದರೆ, ಈ ವರ್ಷ 80,000 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬೆಳೆಹಾನಿಯಾಗಿದೆ.
ಇದನ್ನು ಓದಿ: ರಾಜ್ಯದ ನಾರಿಯರಿಗೆ ಸಿಹಿ ಸುದ್ದಿ ; ಇದೇ ದಿನ ಬಿಡುಗಡೆಯಾಗಲಿದೆ ಗ್ಯಾರಂಟಿ ಅನುದಾನ
ಈವರೆಗೆ ಸರ್ಕಾರ ನೀಡಿರುವ ಪರಿಹಾರ ಎಷ್ಟು?
ಈ ವರ್ಷದ ಮಳೆಗಾಲದಲ್ಲಿ 1126 ಮನೆಗಳು ಸಂಪೂರ್ಣ ಕುಸಿದಿದ್ದರೆ, ಅನಧೀಕೃತವಾಗಿರುವ 75 ಮನೆಗಳೂ ಕುಸಿದಿವೆ. ಇದಲ್ಲದೆ, 1176 ಮನೆಗಳು ತೀವ್ರ ಹಾನಿಗೊಳಗಾಗಿದ್ದರೆ, 2338 ಮನೆಗಳು ಸ್ವಲ್ಪ ಹಾನಿಯಾಗಿವೆ. ಒಟ್ಟಾರೆ 8,000 ಮನೆಗಳು ಹಾನಿಗೆ ಒಳಗಾಗಿವೆ.
ಸಂಪೂರ್ಣ ಮನೆ ಹಾನಿಯಾದರೆ 1,20,000 ರೂಪಾಯಿಯ ಜೊತೆಗೆ ಸರ್ಕಾರದಿಂದಲೇ ಒಂದು ಮನೆಯನ್ನೂ ನೀಡಲಾಗುತ್ತಿದೆ. ಈ ಕಾರ್ಯಗಳಿಗೆ ಈವರೆಗೆ ಒಟ್ಟು 9.21ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಮನೆಗೆ ನೀರು ನುಗ್ಗಿ ಸಣ್ಣಪುಟ್ಟ ಹಾನಿಯಾಗಿರುವ 2800 ಮನೆಗಳಿಗೆ 70 ಲಕ್ಷ ಹಣ ಪರಿಹಾರ ನೀಡಲಾಗಿದೆ.
ದಿನಬಳಕೆ ವಸ್ತುಗಳ ಖರೀದಿಗೆ 70 ಲಕ್ಷ ಪರಿಹಾರ ಸೇರಿ ಒಟ್ಟಾರೆ 1.40 ಕೋಟಿ ರೂ ಪರಿಹಾರ ನೀಡಲಾಗಿದೆ. ಹಾನಿಗೊಳಗಾದ ಅನದೀಕೃತ ಮನೆಗಳಿಗೆ 1 ಲಕ್ಷ ರೂಪಾಯಿವರೆಗೆ ಪರಿಹಾರ ನೀಡಲಾಗಿದೆ. ಮನೆ ಸ್ವಲ್ಪ ಮಟ್ಟಿಗೆ ಹಾನಿಯಾಗಿದ್ದರೆ ಎಸ್‌ಡಿಆರ್‌ಎಫ್ ನಿಯಮದ ಅಡಿಯಲ್ಲಿ ಕೇವಲ 2,500 ರೂಪಾಯಿ ಮಾತ್ರ ನೀಡಲು ಸಾಧ್ಯ. ಆದರೆ, ರಾಜ್ಯ ಸರ್ಕಾರದ 50,000 ವರೆಗೆ ಪರಿಹಾರ ನೀಡಿದೆ.
ಇತರೆ ವಿಷಯಗಳು:
ಸೂರ್ಯಘರ್ ಉಚಿತ ವಿದ್ಯುತ್ ಯೋಜನೆ, ಪಿಎಂ ಸೂರ್ಯಘರ್ ಯೋಜನೆಗೆ ಅರ್ಜಿ ಆಹ್ವಾನ.
ರಾಜ್ಯದ ರೈತರಿಗೆ ಸಿಹಿ ಸುದ್ದಿ, ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ.