ಬಿಲ್‌ ಬಂದ 30 ದಿನದೊಳಗೆ ಶುಲ್ಕ ಪಾವತಿಸದಿದ್ದರೆ ವಿದ್ಯುತ್‌ ಸಂಪರ್ಕ ಕಡಿತ!!

ವಿದ್ಯುತ್ ಬಿಲ್ ಬಂದ 30 ದಿನಗಳ ಒಳಗೆ ಶುಲ್ಕವನ್ನು ಪಾವತಿ ಮಾಡದಿದ್ದರೆ ನಿಮ್ಮ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುವುದು. ಹೆಚ್ಚುವರಿಯ ಭದ್ರತಾ ಠೇವಣಿಯ ಮೊತ್ತವನ್ನು ಪಾವತಿ ಮಾಡದಿದ್ದಲ್ಲಿ KERC ನಿಯಮಾವಳಿಗಳ ಪ್ರಕಾರ ಗ್ರಾಹಕರ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುವುದಾಗಿ ಬೆಸ್ಕಾಂ ಮಾಹಿತಿಯನ್ನು ತಿಳಿಸಿದೆ.

Electricity Bill Payment

ಸೆಪ್ಟೆಂಬರ್ 1ರಿಂದ ನಿಯಮ ಅನ್ವಯವಾಗಲಿದೆ. ಗೃಹ ಮತ್ತು ವಾಣಿಜ್ಯ ಬಳಕೆದಾರರು, ಅಪಾರ್ಟ್ಮೆಂಟ್ ಗಳು, ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದ ಗ್ರಾಹಕರು ನಿಗದಿತ ಅವಧಿಯೊಳಗೆ ಶುಲ್ಕ ಪಾವತಿಸಬೇಕು. ಮೀಟರ್ ರೀಡಿಂಗ್ ಗೆ ಬರುವ ದಿನ ಪ್ರತಿ ತಿಂಗಳ ಮೊದಲ 15 ದಿನದಲ್ಲಿಯೇ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ತಿಳಿಸಲಾಗಿದೆ.

ಇದುವರೆಗೆ ಪ್ರತಿ ತಿಂಗಳ ಮೊದಲ 15 ದಿನದಲ್ಲಿ ಮೀಟರ್ ಮಾಪನ ಮಾಡಿದ ನಂತರ ಬಾಕಿ ಉಳಿಸಿಕೊಂಡಿರುವ ಗ್ರಾಹಕರ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಲು ಲೈನ್ ಮ್ಯಾನ್ ಗಳೊಂದಿಗೆ ಮೀಟರ್ ರೀಡರ್ ಮತ್ತೆ ಅದೇ ಸ್ಥಳಕ್ಕೆ ತೆರಳುತ್ತಿದ್ದರು. ಇನ್ನು ಮುಂದೆ ಮೀಟರ್ ರೀಡರ್ ಜೊತೆಗೇ ಲೈನ್ ಮ್ಯಾನ್ ಗಳು ಬಂದು ವಿದ್ಯುತ್ ಬಾಕಿ ಬಿಲ್ ಉಳಿಸಿಕೊಂಡಿರುವ ಗ್ರಾಹಕರ ವಿದ್ಯುತ್ ಸರಬರಾಜು ಬಿಲ್ ನೀಡುವ ಸಮಯದಲ್ಲಿ ಸ್ಥಗಿತಗೊಳಿಸಲಿದ್ದಾರೆ.

ವಿದ್ಯುತ್ ಬಿಲ್ ಪಾವತಿಗೆ ಬಿಲ್ ನೀಡಿದ 15 ದಿನದ ವರೆಗೆ ಯಾವುದೇ ರೀತಿಯ ಬಡ್ಡಿ ಇಲ್ಲದೆ ಕಾಲಾವಕಾಶ ಇರುತ್ತದೆ. ಅಂತಿಮವಾದ ದಿನಾಂಕದ ನಂತರವೂ ಬಡ್ಡಿ ಸಹಿತವಾದ ಪಾವತಿಗೆ 15 ದಿನಗಳ ಕಾಲಾವಕಾಶವನ್ನು ನೀಡಲಾಗುವುದು. ಗ್ರಾಹಕರು ಶುಲ್ಕವನ್ನು ಪಾವತಿಸದಿದ್ದಲ್ಲಿ ಮುಂದಿನ ಮೀಟರ್ ರೀಡಿಂಗ್ ದಿನವೇ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ. ವಿದ್ಯುತ್ ಬಾಕಿ ಇರುವ ಮೊತ್ತ & ಹೆಚ್ಚುವರಿಯ ಭದ್ರತಾ ಠೇವಣಿಯ ಮೊತ್ತ 100ರೂಪಾಯಿಗಳಿಗಿಂತ ಅಧಿಕ ಇದ್ದಲ್ಲಿ ಅಂತಹ ಸಂಪರ್ಕಗಳನ್ನು ತಕ್ಷಣ ಕಳಿತಗೊಳಿಸಲಾಗುವುದು ಎಂದು ಹೇಳಲಾಗಿದೆ.

ಆನ್‌ಲೈನ್ ಮೂಲಕ ವಿದ್ಯುತ್‌ ಬಿಲ್‌ ಪಾವತಿಸಿದ ಸಂದರ್ಭದಲ್ಲಿ ಕೆಲವೊಮ್ಮೆ ಬೆಸ್ಕಾಂ ಸಾಫ್ಟ್‌ವೇರ್‌ನಲ್ಲಿ ವಿವರ ನಮೂದಾಗದೇ ಇದ್ದಾಗ, ಬಾಕಿ ತೋರಿಸುವ ಸಾಧ್ಯತೆ ಇರುತ್ತದೆ. ಇಂಥಹ ಸಂದರ್ಭದಲ್ಲಿ ವಿದ್ಯುತ್‌ ಕಡಿತಕ್ಕೆ ಮುಂದಾದರೆ, ಸಿಬ್ಬಂದಿಗೆ ಬಿಲ್‌ ರಸೀದಿ ತೋರಿಸುವುದರಿಂದ ವಿದ್ಯುತ್‌ ಕಡಿತ ಮಾಡಲಾಗುವುದಿಲ್ಲ. ಹಾಗಾಗಿ, ನಮ್ಮ ಸಿಬ್ಬಂದಿಯೊಂದಿಗೆ ಸಹಕರಿಸಿ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ಕೋರಿದೆ.

ಜನಸಾಮಾನ್ಯರಿಗೆ ಗುಡ್ ನ್ಯೂಸ್.. 1ನೇ ತಾರೀಖಿನಿಂದ ಗ್ಯಾಸ್ ಸಿಲಿಂಡರ್, ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ..!

ಮಹಿಳೆಯರಿಗೆ ಗುಡ್ ನ್ಯೂಸ್… ಮಹಿಳೆಯರಿಗೆ 50 ಸಾವಿರ ಉಚಿತ!

Leave a Reply

Your email address will not be published. Required fields are marked *

rtgh