ಹಲೋ ಸ್ನೇಹಿತರೆ, ರಾಜ್ಯದ ರೈತರಿಗೆ ತೋಟಗಾರಿಕೆ ಇಲಾಖೆ ವತಿಯಿಂದ ತೋಟಗಾರಿಕೆ ಬೆಳೆ ಬೆಳೆಯಲು ಇಚ್ಚಿಸಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ರೈತ ಫಲಾನುಭವಿಗಳಿಗೆ ಜಾರಿಗೆ ತಂದ ವಿವಿಧ ಯೋಜನೆಗಳಡಿ ಸಹಾಯಧನ ಪಡೆದುಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಯಾವ ಯಾವ ಯೋಜನೆಗಳಿಗೆ ಅರ್ಜಿ ಬಿಡುಗಡೆ ಮಾಡಲಾಗಿದೆ? ಹೇಗೆ ಅಪ್ಲೇ ಮಾಡುವುದು ಈ ಎಲ್ಲಾ ಮಾಹಿತಿ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ ಕೊನೆವರೆಗೂ ಓದಿ.
ಯೋಜನೆಗಳು:
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ:
ಜಮೀನಿನಲ್ಲಿ ಹೊಸ ಪ್ರದೇಶ ವಿಸ್ತರಣೆ, ಕೃಷಿಹೊಂಡ ನಿರ್ಮಾಣ, ಈರುಳ್ಳಿ ಶೇಖರಣ ಘಟಕ, ನೆರಳುಪರದೆ, ಪ್ಯಾಕ್ ಹೌಸ್ ಮತ್ತು ತಳ್ಳುವಗಾಡಿ, ಮಿನಿ ಟ್ರಾಕ್ಟರ್ (20 ಪಿಟಿಒ ಹೆಚ್ಚು) ವಿವಿಧ ಘಟಕಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ಶೇ.50 ರಷ್ಟು ಸಹಾಯಧನ ನೀಡಲಾಗುತ್ತದೆ.
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ:
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ-ಹನಿ ನೀರಾವರಿ ಕಾರ್ಯಕ್ರಮದಡಿ ರೈತರಿಗೆ ಸಹಾಯಧನ ನೀಡಲಾಗುತ್ತದೆ. ಸಾಮಾನ್ಯ ವರ್ಗದ ರೈತರಿಗೆ ಹೊಸದಾಗಿ ವ್ಯವಸ್ಥೆ ಅಳವಡಿಸುವ ಫಲಾನುಭವಿಗಳಿಗೆ ಮಾತ್ರ ಶೇ.55 ರಂತೆ ಹಾಗೂ ಶೇ.90 ರಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಫಲಾನುಭವಿಗಳಿಗೆ ಸಹಾಯಧನ ನೀಡಲಾಗುತ್ತದೆ.
ಇದನ್ನು ಓದಿ: ಮಕ್ಕಳ ಹೆಸರಿನಲ್ಲಿ ಈ ಖಾತೆ ತೆರೆಯಲು ಅನುಮತಿ! ಮೋದಿ ಮತ್ತೊಂದು ಘೋಷಣೆ
*ಕೇಂದ್ರ ಪುರಸ್ಕೃತ ಖಾದ್ಯ ತೈಲ ಅಭಿಯಾನ – ತಾಳೆ ಬೆಳೆ ಯೋಜನೆ:
ತಾಳೆ ಬೆಳೆ ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮಕ್ಕೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ಶೇ.50 ರಷ್ಟು ಸಹಾಯಧನದ ಸೌಲಭ್ಯ.
ತೋಟಗಾರಿಕೆ ಇಲಾಖೆಯಲ್ಲಿ ಜಾರಿ ಮಾಡಿದ ಎಲ್ಲಾ ಯೋಜನೆಗಳಡಿ ಅಲ್ಪಸಂಖ್ಯಾತ ವರ್ಗಕ್ಕೆ ಶೇ.15, ವಿಕಲಾಂಗಚೇತನ ವರ್ಗದವರಿಗೆ ಶೇ.5 ಮತ್ತು ರೈತ ಮಹಿಳೆಯರಿಗೆ ಶೇ.33 ರಷ್ಟು ಅನುದಾನ ಮೀಸಲಿರಿಸಲಾಗಿದ್ದು, ಆಸಕ್ತ ರೈತ ಫಲಾನುಭವಿಗಳು ಈ ಯೋಜನೆಗಳ ಸಹಾಯಧನ ಸೌಲಭ್ಯ ಯೋಜನೆಯನ್ನು ಸದುಪಯೋಗ ಪಡೆದುಕೊಳ್ಳಬೇಕು.
ಹೆಚ್ಚಿನ ಮಾಹಿತಿ ತಿಳಿಯಲು ಆಯಾ ತಾಲ್ಲೂಕಿನ ತೋಟಗಾರಿಕೆ ಇಲಾಖೆ ಕಚೇರಿಗೆ ಸಂಪರ್ಕಿಸಿ, ಹೇಗೆ ಅರ್ಜಿ ಸಲ್ಲಿಸಬಹುದು ಎಂದು ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು ಎಂದು ಬಳ್ಳಾರಿ ತೋಟಗಾರಿಕೆ ಉಪ ನಿರ್ದೇಶಕ ಸಂತೋಷ್ ಸಪ್ಪಂಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇತರೆ ವಿಷಯಗಳು:
ಗ್ರಾ.ಪಂ ನೌಕರರಿಗೆ ಸಿಗಲಿದೆ 50 ಸಾವಿರ ರೂ. ವೈದ್ಯಕೀಯ ವೆಚ್ಚ! ರಾಜ್ಯ ಸರ್ಕಾರದ ಆದೇಶ
ರಾಜ್ಯದ ನಾರಿಯರಿಗೆ ಸಿಹಿ ಸುದ್ದಿ ; ಇದೇ ದಿನ ಬಿಡುಗಡೆಯಾಗಲಿದೆ ಗ್ಯಾರಂಟಿ ಅನುದಾನ