ಮಹಿಳೆಯರಿಗೆ ಸರ್ಕಾರದಿಂದ ಉಚಿತ ಹೊಲಿಗೆ ಯಂತ್ರ ಪಡೆಯಲು ಆ.31 ಕೊನೆಯ ದಿನಾಂಕ!

ಹಲೋ ಸ್ನೇಹಿತರೆ, ಕೇಂದ್ರದಲ್ಲಿ ಮೂರನೇ ಬಾರಿಗೆ NDA ಸರ್ಕಾರ ರಚನೆಯಾಗುವುದರೊಂದಿಗೆ, ಮೊದಲು ನಡೆಯುತ್ತಿದ್ದ ಅನೇಕ ಯೋಜನೆಗಳನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಲಾಗಿದೆ. ಈ ಯೋಜನೆಗಳಲ್ಲಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ನೀಡುವ ಯೋಜನೆ ನಡೆಯುತ್ತಿದೆ. ಯೋಜನೆಯಡಿ ಕೇಂದ್ರ ಸರ್ಕಾರವು ವಿವಿಧ ರೀತಿಯ ವೃತ್ತಿಗಳಿಗೆ ಸಂಬಂಧಿಸಿದ ವಿಶೇಷ ಉಪಕರಣಗಳು ಮತ್ತು ಯಂತ್ರಗಳನ್ನು ಒದಗಿಸುತ್ತದೆ.

Free Tailoring Machine Application

ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಎಂಬ ಯೋಜನೆಯನ್ನು ನಡೆಸುತ್ತಿದ್ದೂ. ಮಹಿಳೆ ಮತ್ತು ಪುರುಷರಿಗೆ ಹೊಲಿಗೆ ಯಂತ್ರವನ್ನು ಖರೀದಿಸಲು 15,000 ರೂ.ಗಳನ್ನು ಪಡೆಯಬಹುದು. ಈ ಹಣವನ್ನು ನೇರವಾಗಿ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಇದಲ್ಲದೆ, ಸರ್ಕಾರವು ಒಂದು ವಾರದ ಡಿಜಿಟಲ್ ತರಬೇತಿಯನ್ನು ಸಹ ಒದಗಿಸುತ್ತದೆ. ಆ ಸಮಯದಲ್ಲೂ ಅದು ದಿನಕ್ಕೆ 500 ರೂಪಾಯಿಗಳ ದರದಲ್ಲಿ ಪಾವತಿಸುತ್ತದೆ.

ಹೊಲಿಗೆ ಯಂತ್ರವನ್ನು ಖರೀದಿಸಿದ ನಂತರ, ಕೇಂದ್ರವು ಒಂದು ಲಕ್ಷ ರೂಪಾಯಿಗಳ ಸಾಲವನ್ನು ಸಹ ನೀಡುತ್ತದೆ. ಈ ಸಾಲವನ್ನು 18 ತಿಂಗಳಲ್ಲಿ ಮರುಪಾವತಿ ಮಾಡಲು ಅವಕಾಶವಿರುತ್ತದೆ. ಸಾಲವನ್ನು ಮರುಪಾವತಿ ಮಾಡಿದ ನಂತರ, ನೀವು ಇನ್ನೂ ಹೆಚ್ಚಾಗಿ ಎರಡು ಲಕ್ಷದವರೆಗೆ ಸಾಲ ಪಡೆಯಬಹುದು. ಇದನ್ನು 30 ತಿಂಗಳಲ್ಲಿ ಪಾವತಿಸಬೇಕು. ಅಂಗಡಿ ತೆರೆಯಲು ಹೊಲಿಗೆ ವಸ್ತುಗಳನ್ನು ಖರೀದಿಸುವವರಿಗೆ ಕೇಂದ್ರ ಸರ್ಕಾರ ಈ ಸಾಲವನ್ನು ನೀಡುತ್ತಿದೆ.

ಇದನ್ನು ಓದಿ: ಆ. 17, 18 ರಂದು ವೈದ್ಯಕೀಯ ಸೇವೆಗಳು ಸಂಪೂರ್ಣ ಸ್ಥಗಿತ!

ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಹತೆ

  • ಮೊದಲು ಅರ್ಜಿದಾರರು ಭಾರತದ ಪ್ರಜೆಯಾಗಿರಬೇಕು.
  • ಈಗಾಗಲೇ ಹೊಲಿಗೆ ಮಾಡುತ್ತಿರುವವರು ಮಾತ್ರ ಉಚಿತ ಹೊಲಿಗೆ ಯಂತ್ರ ಯೋಜನೆಯಡಿ ಅರ್ಜಿ ಸಲ್ಲಿಸಬಹುದು.
  • ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿದಾರರು 18 ವರ್ಷ ಮೇಲ್ಪಟ್ಟವರಾಗಿರಬೇಕು.

ಯೋಜನೆಗೆ ಅಗತ್ಯವಿರುವ ದಾಖಲೆಗಳು

ಈ ಯೋಜನೆಗೆ ಅರ್ಜಿ ಸಲ್ಲಿಸುವ ಅರ್ಜಿದಾರರ ಬಳಿ ಆಧಾರ್ ಕಾರ್ಡ್, ವಿಳಾಸ ಪುರಾವೆ, ಗುರುತಿನ ಚೀಟಿ, ಜಾತಿ ಪ್ರಮಾಣಪತ್ರ, ಪಾಸ್ಪೋರ್ಟ್ ಗಾತ್ರದ ಫೋಟೋ, ಮೊಬೈಲ್ ಸಂಖ್ಯೆ, ಬ್ಯಾಂಕ್ ಪಾಸ್ಬುಕ್ ಇರಬೇಕು.

ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು?

ಮೊದಲನೆಯದಾಗಿ, pmvishwakarma.gov.in ಅಧಿಕೃತ ವೆಬ್ ಸೈಟಗೆ ಭೇಟಿ ನೀಡಿ. ಇಲ್ಲಿ ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳಿ. ನೀವು ಅರ್ಜಿಯನ್ನು ಆನ್ ಲೈನ್ ನಲ್ಲಿ ಮಾಡಲು ಸಾಧ್ಯವಾಗದಿದ್ದರೆ ನಿಮ್ಮ ಹತ್ತಿರದ ಸೇವಾ ಕೇಂದ್ರಕ್ಕೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಿ. ನೀವು ಮೇಲೆ ತಿಳಿಸಿದ ದಾಖಲೆಗಳನ್ನು ಇಟ್ಟುಕೊಳ್ಳಬೇಕು. ನಿಮ್ಮ ಅರ್ಜಿಯನ್ನು ಸಲ್ಲಿಸಿದ ನಂತರ ನೀವು ಸ್ವೀಕೃತಿಯನ್ನು ಪಡೆಯುತ್ತೀರಿ. ಆ ರಸೀದಿಯನ್ನು ನಿಮ್ಮೊಂದಿಗೆ ಇರಿಸಿಕೊಳ್ಳಿ. ಇದರ ನಂತರ, ಕೇಂದ್ರವು ಕೆಲವೇ ದಿನಗಳಲ್ಲಿ ನಿಮ್ಮ ಬ್ಯಾಂಕ್ ಖಾತೆಗೆ ಹಣವನ್ನು ಜಮಾ ಮಾಡುತ್ತದೆ. ಆದರ ನೀವು ಹೊಲಿಗೆ ಯಂತ್ರವನ್ನು ಖರೀದಿಸಬಹುದು. ಅರ್ಜಿ ಸಲ್ಲಿಸಲು ಇದೇ ಆಗಸ್ಟ್ 31 ಕೊನೆಯ ದಿನವಾಗಿದೆ.

ಇತರೆ ವಿಷಯಗಳು:

SBI, PNB ಖಾತೆಗಳು ಬಂದ್! 15 ದಿನ ಅದೇಶ ತಡೆಹಿಡಿದ ಸರ್ಕಾರ

ಸರ್ಕಾರಿ ನೌಕರರಿಗೆ ಆ.17ರಂದು ‘ವಿಶೇಷ ಸಾಂದರ್ಭಿಕ ರಜೆ’ ಮಂಜೂರು!

Leave a Reply

Your email address will not be published. Required fields are marked *

rtgh