ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ, ಆಗಸ್ಟ್ ಈ ದಿನದಂದು ವಿಶೇಷ ಸಾಂದರ್ಭಿಕ ರಜೆ ಘೋಷಣೆ.

ನಮಸ್ಕಾರ ಕರ್ನಾಟಕ, ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ 7ನೇ ವೇತನ ಆಯೋಗದ ವರದಿ ಜಾರಿಗೊಂಡ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಬೆಂಗಳೂರಿನಲ್ಲಿ ಆಯೋಜಿಸಲಾಗುತ್ತಿರುವ ಅಭಿನಂದನಾ ಸಮಾರಂಭಕ್ಕೆ ಇಂದು ಸರ್ಕಾರ ವಿಶೇಷ ಸಾಂದರ್ಭಿಕ ರಜೆಯನ್ನು ಘೋಷಿಸಿದೆ.

ಆಗಸ್ಟ್ 17 ರಂದು ನಡೆಯಲಿರುವ ಈ ಸಮಾರಂಭದಲ್ಲಿ ಭಾಗವಹಿಸಲು, ಸರ್ಕಾರದ ಅಧೀನ ಕಾರ್ಯದರ್ಶಿಗಳು ಇಲಾಖೆಯ ಎಲ್ಲಾ ನೌಕರರಿಗೆ ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿದ್ದಾರೆ. ಈ ಕುರಿತು, ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸುತ್ತೋಲೆ ಹೊರಡಿಸಿದ್ದು, ನೌಕರರು ತಮ್ಮ ಸಂಬಂಧಪಟ್ಟ ಅಧಿಕಾರಿಗಳಿಂದ ರಜೆಯನ್ನು ಮಂಜೂರು ಮಾಡಿಕೊಳ್ಳಬೇಕಾಗಿದೆ.

ಕಾರ್ಯಕ್ರಮವು ಬೆಂಗಳೂರು ಅರಮನೆ ಆವರಣದಲ್ಲಿ ನಡೆಯಲಿದ್ದು, ಈ ವೇಳೆ 7ನೇ ವೇತನ ಆಯೋಗದ ಅನುಷ್ಠಾನಕ್ಕಾಗಿ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಅವರನ್ನು ಅಭಿನಂದಿಸುವ ಜೊತೆಗೆ ಕಾರ್ಯಾಗಾರವನ್ನು ಸಹ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ ನೌಕರರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಅಥವಾ ಅವರು ನಾಮನಿರ್ದೇಶನ ಮಾಡಿದ ಅಧಿಕಾರಿಯವರಿಂದ ಅಧಿಕೃತ ಹಾಜರಾತಿ ಪ್ರಮಾಣ ಪತ್ರವನ್ನು ಪಡೆದು, ತಮ್ಮ ಸಂಬಂಧಪಟ್ಟ ಅಧಿಕಾರಿಗಳಿಗೆ ಸಲ್ಲಿಸಬೇಕಾಗಿದೆ.

ಈ ರಜೆ ಕರ್ನಾಟಕ ರಾಜ್ಯದ ಎಲ್ಲಾ ನೌಕರರಿಗೆ, ನಿಗಮ-ಮಂಡಳಿ, ಪ್ರಾಧಿಕಾರ, ಮತ್ತು ಇತರ ಸ್ವಾಯತ್ತ ಸಂಸ್ಥೆಗಳ ನೌಕರರಿಗೂ ಅನ್ವಯಿಸುತ್ತದೆ. ಈ ಕುರಿತು, ಸಂಬಂಧಪಟ್ಟ ಅಧಿಕಾರಿಗಳು ಸಾರ್ವಜನಿಕ ಸೇವೆಗಳಲ್ಲಿ ಯಾವುದೇ ವ್ಯತ್ಯಾಸವಿಲ್ಲದೆ ರಜೆಯನ್ನು ಮಂಜೂರು ಮಾಡಬೇಕಾಗಿದೆ.

ಈ ನಿರ್ಧಾರವನ್ನು ಸರ್ಕಾರ ಆರ್ಥಿಕ ಇಲಾಖೆಯ ಅನುಮೋದನೆಯೊಂದಿಗೆ ಹೊರಡಿಸಿರುವುದು ವಿಶೇಷ. ಆದ್ದರಿಂದ, ಆ. 17ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಎಲ್ಲ ರಾಜ್ಯ ಸರ್ಕಾರಿ ನೌಕರರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಸಿದ್ಧರಾಗಿರಿ.

ಇತರೆ ವಿಷಯಗಳು:

ಸೂರ್ಯಘರ್ ಉಚಿತ ವಿದ್ಯುತ್ ಯೋಜನೆ, ಪಿಎಂ ಸೂರ್ಯಘರ್ ಯೋಜನೆಗೆ ಅರ್ಜಿ ಆಹ್ವಾನ.

ರಾಜ್ಯದ ರೈತರಿಗೆ ಸಿಹಿ ಸುದ್ದಿ, ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ.

Leave a Reply

Your email address will not be published. Required fields are marked *

rtgh