ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಹಣಕ್ಕಾಗಿ ಮಹಿಳೆಯರು ತೀವ್ರ ಕಾದು ಕುಳಿತಿದ್ದಾರೆ. ಈ ಯೋಜನೆಯ ಅಡಿಯಲ್ಲಿ 11 ಮತ್ತು 12ನೇ ಕಂತಿನ ಹಣವನ್ನು ಕೈ ಸೇರಿಸಿಕೊಳ್ಳಲು ಮಹಿಳೆಯರು ನಿರೀಕ್ಷಿಸುತ್ತಿದ್ದಾರೆ.
ಈ ಹಿನ್ನೆಲೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹಣ ಬಿಡುಗಡೆಗೆ ಸಂಬಂಧಿಸಿದ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ರಾಜ್ಯದಲ್ಲಿನ ಮಹಿಳೆಯರ ಆರ್ಥಿಕ ಸ್ವಾವಲಂಬನೆಗಾಗಿ ಈ ಯೋಜನೆಯನ್ನು ಜಾರಿಗೆ ತರುವ ಮೂಲಕ ಪ್ರತೀ ಕುಟುಂಬದ ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ (DBT) ಹಣವನ್ನು ನೇರವಾಗಿ ಖಾತೆಗೆ ವರ್ಗಾವಣೆ ಮಾಡಲಾಗುತ್ತಿದೆ.
ಬಹುತೇಕ ಫಲಾನುಭವಿಗಳು 10 ಕಂತುಗಳ ಹಣವನ್ನು ಪಡೆದಿದ್ದಾರೆ. ಆದರೆ, 11 ಮತ್ತು 12ನೇ ಕಂತು ಇನ್ನೂ ಬಿಡುಗಡೆಯಾಗಿಲ್ಲ. ಈ ಮಧ್ಯೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪ್ರತೀ ತಿಂಗಳ 15ನೇ ತಾರೀಕಿನೊಳಗೆ ಹಣ ಬಿಡುಗಡೆ ಮಾಡುವುದಾಗಿ ಘೋಷಿಸಿದ್ದರು. ಆದರೆ, ಈಗಾಗಲೇ 15ನೇ ತಾರೀಕು ಕಳೆಯಿತು ಮತ್ತು ಹತ್ತು ದಿನಗಳೂ ಕಳೆದಿವೆ, ಹಣ ಇನ್ನೂ ಖಾತೆಗೆ ಜಮೆಯಾಗಿಲ್ಲ.
ಹಣದ ಬಂದಿದೆಯೇ ಎಂದು ಚೆಕ್ ಮಾಡಲು ಮಹಿಳೆಯರು ಬ್ಯಾಂಕಿಗೆ ತೆರಳುತ್ತಿದ್ದು, ಬೇಸತ್ತು ಹೋಗಿದ್ದಾರೆ. ಬ್ಯಾಂಕ್ ಸಿಬ್ಬಂದಿ ಕೂಡ ಅವರಿಗೆ ಉತ್ತರಿಸುತ್ತಾ ಕಂಠ ಶೋಷಿಸಿದ್ದಾರೆ. ಈ ಮಧ್ಯೆ, ಸರ್ಕಾರ ಯಾವುದೇ ದಿನಾಂಕವನ್ನು ಸ್ಪಷ್ಟಪಡಿಸಿಲ್ಲ.
ಡಿ.ಕೆ.ಶಿವಕುಮಾರ್ ಮಾಧ್ಯಮಗಳೊಂದಿಗೆ ಮಾತನಾಡಿ, ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಹಣ ವರ್ಗಾವಣೆ ಮಾಡಲು ಸಂಪನ್ಮೂಲಗಳನ್ನು ಒದಗಿಸಲಾಗುತ್ತಿದೆ. ಕೆಲವೊಮ್ಮೆ ಎರಡು ತಿಂಗಳ ಹಣವನ್ನು ಒಟ್ಟಿಗೆ ಬಿಡುಗಡೆ ಮಾಡಲಾಗುತ್ತದೆ. ಈ ಬಾರಿ ಕೂಡ ಹೀಗೆಯೇ ಮಾಡಲಾಗುವುದು, ಆದರೆ ಯಾವುದೇ ಕಾರಣಕ್ಕೂ ಯೋಜನೆಯನ್ನು ರದ್ದು ಮಾಡಲಾಗುವುದಿಲ್ಲ ಎಂದು ಹೇಳಿದ್ದಾರೆ.
ಮಾಹಿತಿ ಪ್ರಕಾರ, ಈ ತಿಂಗಳ ಅಂತ್ಯದೊಳಗೆ ಗೃಹಲಕ್ಷ್ಮೀ ಯೋಜನೆಯ ಹಣ ಬರುವುದರಲ್ಲಿ ಅನುಮಾನವಿದೆ. ಈ ಯೋಜನೆಯ ಅಡಿಯಲ್ಲಿ ಪ್ರತೀ ತಿಂಗಳು 2 ಸಾವಿರ ರೂಪಾಯಿಯಂತೆ ವಾರ್ಷಿಕ 24 ಸಾವಿರ ರೂಪಾಯಿಯನ್ನು ನೀಡಲು ಸರ್ಕಾರ ಉದ್ದೇಶಿಸಿದೆ.
ಲೋಕಸಭಾ ಚುನಾವಣೆಯ ನಂತರ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಸಿಕ್ಕಿಲ್ಲ. ಇದರಿಂದ ಫಲಾನುಭವಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರವು ಹಣ ಬಿಡುಗಡೆ ದಿನಾಂಕದ ಕುರಿತು ಸ್ಪಷ್ಟ ಮಾಹಿತಿಯನ್ನು ನೀಡಬೇಕಾಗಿದೆ.