ಯಜಮಾನಿಯರಿಗೆ ಸಿಹಿ ಸುದ್ದಿ, ನಾಳೆಯೇ ಒಟ್ಟಿಗೆ 2 ಕಂತಿನ ಹಣ ಖಾತೆಗೆ ಜಮಾ.

ನಮಸ್ಕಾರ ಕರ್ನಾಟಕ, ತಾಂತ್ರಿಕ ಸಮಸ್ಯೆಗಳಿಂದಾಗಿ ಕಳೆದ ಎರಡು ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಆಗುತ್ತಿರಲಿಲ್ಲ. ಆದರೆ ಈಗ ಈ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಲಾಗಿದ್ದು, ನಾಳೆ ಅಥವಾ ನಾಡಿದ್ದು, ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣ ಒಂದೇ ಬಾರಿಗೆ ಖಾತೆಗೆ ಜಮಾ ಆಗಲಿದೆ ಎಂಬುದಾಗಿ ತಿಳಿಸಲಾಗಿದೆ.

ಇದರಿಂದ ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಕಾಯುತ್ತಿರುವ ಯಜಮಾನಿಯರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಈ ತಿಂಗಳ ಮೊದಲ ವಾರದಲ್ಲೇ ಜೂನ್ ಮತ್ತು ಜುಲೈ ತಿಂಗಳ ಹಣವನ್ನು ಒಟ್ಟಿಗೆ ಜಮಾ ಮಾಡಲಿದೆ.

ಆಗಸ್ಟ್ 5 ರಂದು ಬೆಳಗಾವಿ, ಕಲಬುರ್ಗಿ, ಬೀದರ್, ವಿಜಯಪುರ, ಬಳ್ಳಾರಿ, ರಾಯಚೂರು, ಗದಗ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಯಾದಗಿರಿ, ಚಿತ್ರದುರ್ಗ, ಬೆಂಗಳೂರು, ಕೋಲಾರ ಜಿಲ್ಲೆಗಳಿಗೆ ಹಣ ಬಿಡುಗಡೆ ಮಾಡಲಾಗುವುದು. ಉಳಿದ ಜಿಲ್ಲೆಗಳಿಗೆ ಆಗಸ್ಟ್ 6 ರಂದು ಹಣ ಜಮಾ ಮಾಡಲಾಗುವುದು ಎಂದು ತಿಳಿಸಲಾಗಿದೆ.

ಈ ಮೂಲಕ, ತಾಂತ್ರಿಕ ಸಮಸ್ಯೆಗಳ ಕಾರಣದಿಂದಾಗಿ ಹಣ ದೊರಕದೇ ಇರುವ ಯಜಮಾನಿಯರಿಗೆ ಇದೀಗ ಅನುಕೂಲವಾಗಲಿದೆ. ಸರ್ಕಾರವು ಈ ಸಮಸ್ಯೆಗಳನ್ನು ಬಗೆಹರಿಸಿ, ಬಾಕಿ ಇರುವ ಎರಡು ಕಂತಿನ ಹಣವನ್ನು ಬಿಡುಗಡೆ ಮಾಡುತ್ತಿರುವುದು ಹರ್ಷದ ವಿಚಾರವಾಗಿದೆ.

ಇತರೆ ವಿಷಯಗಳು :

ಕೇಂದ್ರ ಸರ್ಕಾರದ ಮತ್ತೊಂದು ಮಹತ್ವದ ಯೋಜನೆ! ಅಪಘಾತದಲ್ಲಿ ಗಾಯಗೊಂಡವರಿಗೆ 1.5 ಲಕ್ಷ

ವಾಹನ ಸವಾರರೇ ಇಂದಿನಿಂದ ಈ ನಿಯಮಗಳು ಬದಲಾಗುತ್ತವೆ, ನಿಯಮ ಉಲ್ಲಂಘಿಸಿದರೆ ದಂಡ ಫಿಕ್ಸ್.

Leave a Reply

Your email address will not be published. Required fields are marked *

rtgh