ನಮಸ್ಕಾರ ಕರ್ನಾಟಕ, ರಾಜ್ಯ ಸರ್ಕಾರವು ಯಜಮಾನಿಯರಿಗೆ ಸಂಭ್ರಮದ ಸುದ್ದಿ ನೀಡಿದ್ದು, ಗೃಹಲಕ್ಷ್ಮಿ ಯೋಜನೆಯ 2 ತಿಂಗಳ ಬಾಕಿ ಹಣವನ್ನು 10 ದಿನಗಳೊಳಗೆ ಫಲಾನುಭವಿಗಳ ಖಾತೆಗಳಿಗೆ ಜಮಾ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯ ಹಣ ಮೂರ್ನಾಲ್ಕು ತಿಂಗಳಿನಿಂದ ಬಾಕಿಯಾಗಿದೆ ಎನ್ನುವ ಸುದ್ದಿ ಸರಿಯಲ್ಲ. ಮೇ ತಿಂಗಳಲ್ಲಿಯೇ ನಾವು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಜಮಾ ಮಾಡಿದ್ದೇವೆ.
ಜೂನ್ ಮತ್ತು ಜುಲೈ ತಿಂಗಳ ಗೃಹಲಕ್ಷ್ಮಿ ಹಣ ತಾಂತ್ರಿಕ ಸಮಸ್ಯೆಗಳ ಕಾರಣದಿಂದಾಗಿ ಜಮಾ ಆಗಿಲ್ಲ. ಈ ಸಮಸ್ಯೆಯನ್ನು ಪರಿಹರಿಸಲು ಡಿಬಿಟಿ ಪುಶ್ ಪ್ರಕ್ರಿಯೆ ನಡೆಯುತ್ತಿದೆ. 8-10 ದಿನಗಳೊಳಗೆ ಫಲಾನುಭವಿಗಳ ಖಾತೆಗಳಿಗೆ ಹಣವನ್ನು ಜಮಾ ಮಾಡಲಾಗುವುದು ಎಂದು ತಿಳಿಸಿದರು.
ಮಹಿಳೆಯ ಆರ್ಥಿಕ ಸಬಲೀಕರಣಕ್ಕಾಗಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಚುನಾವಣೆ ವೇಳೆ ರಾಜ್ಯದ ಮಹಿಳೆಯರಿಗೆ ಈ ಯೋಜನೆಯ ಭರವಸೆ ನೀಡಲಾಗಿತ್ತು. ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸಲಾಗುವುದಿಲ್ಲ ಎಂದು ಸಚಿವೆ ತಿಳಿಸಿದ್ದಾರೆ.
ಇತರೆ ವಿಷಯಗಳು :
ಮಹಿಳೆಯರು ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ.
ಇನ್ಮುಂದೆ 300 ಯೂನಿಟ್ ಉಚಿತ ವಿದ್ಯುತ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರದಿಂದ ಸೂರ್ಯಘರ್ ಯೋಜನೆ ಘೋಷಣೆ
ಸ್ವಂತ ಮನೆ ಇಲ್ಲದವರಿಗೆ ಸಿಹಿ ಸುದ್ದಿ, 3 ಕೋಟಿ ಹೊಸ ಮನೆಗಳು ಬಿಡುಗಡೆ, ಇಂದೇ ಈ ಕೆಲಸ ಮಾಡಿ ಸ್ವಂತ ಮನೆ ಪಡೆದುಕೊಳ್ಳಿ.