HAL Recruitment 2024: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (Hindustan Aeronautics Limited) ಖಾಲಿ ಇರುವ ಹುದ್ದೆಗಳ್ಳಿಗೆ ಅರ್ಜಿ ಆಹ್ವಾನ. ಒಟ್ಟು 1 ಡಯಾಲಿಸಿಸ್ ಟೆಕ್ನಿಷಿಯನ್(Dialysis Technician) ಹುದ್ದೆ ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು, ಅರ್ಜಿ ಹೇಗೆ ಸಲ್ಲಿಸುವುದು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಶೈಕ್ಷಣಿಕ ಅರ್ಹತೆ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಸಂಸ್ಥೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, 12ನೇ ತರಗತಿ, ಡಿಪ್ಲೊಮಾ, ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಆಸಕ್ತ ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನ ನಿಗದಿಪಡಿಸಿಲ್ಲ. ಅವರ ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ಕೊಡಲಾಗುತ್ತದೆ.
ಉದ್ಯೋಗದ ಸ್ಥಳ:
ಬೆಂಗಳೂರು
ಆಯ್ಕೆ ಪ್ರಕ್ರಿಯೆ:
- ಲಿಖಿತ ಪರೀಕ್ಷೆ
- ಸಂದರ್ಶನ
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 25/06/2024
- ಅರ್ಜಿ ಸಲ್ಲಿಸಲು ಕೊನೆಯ ದಿನ: ಜುಲೈ 9, 2024(ನಾಳೆ)
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಮುಖ್ಯ ವ್ಯವಸ್ಥಾಪಕರು (HR)
ಕೈಗಾರಿಕಾ ಆರೋಗ್ಯ ಕೇಂದ್ರ
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಬೆಂಗಳೂರು ಕಾಂಪ್ಲೆಕ್ಸ್)
ಸುರಂಜನದಾಸ್ ರಸ್ತೆ, (ಹಳೆಯ ವಿಮಾನ ನಿಲ್ದಾಣದ ಹತ್ತಿರ)
ಬೆಂಗಳೂರು-560017.