ಇನ್ನೂ ದಿನಾಂಕ ಮುಂದೂಡಿಕೆ ಇಲ್ಲ!

ಹಲೋ ಸ್ನೇಹಿತರೆ, 2019 ರ ಹಿಂದಿನ ಹಳೇ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ ಅಳವಡಿಸಲು ಸೆಪ್ಟೆಂಬರ್ 15ರ ವರೆಗೆ ಗಡುವು ನೀಡಲಾಗಿದೆ. ಎಚ್‌ಎಸ್‌ಆರ್ಪಿ ನಂಬರ್‌ ಪ್ಲೇಟ್ ಅಳವಡಿಸಲು ಸೆಪ್ಟೆಂಬರ್ 15 ಕೊನೆಯ ದಿನವಾಗಿದೆ. ಯಾವುದೇ ಕಾರಣಕ್ಕೂ ಈ ಬಾರಿ ಗಡುವು ವಿಸ್ತರಣೆ ಮಾಡಲಾಗುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

HSRP Number Plate 2024

ಈಗಾಗಲೇ ಕಳೆದ 1 ವರ್ಷದಿಂದ ದಿನಾಂಕ ವಿಸ್ತರಣೆ ಮಾಡುತ್ತಲೇ ಬರುತ್ತಿದ್ದೇವೆ, ಮತ್ತೆ ಯಾವುದೇ ಕಾರಣಕ್ಕೂ ದಿನಾಂಕ ವಿಸ್ತರಣೆ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. 2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್‌ಎಸ್‌ಆರ್ಪಿ ಅಳವಡಿಸಿಕೊಳ್ಳಲೇಬೇಕು. https://transport.karnataka.gov.in/english ಆನ್ಲೈನ್ ಮೂಲಕವೂ ನೋಂದಣಿಗೆ ಅವಕಾಶ ನೀಡಲಾಗಿದೆ.

ಇದನ್ನು ಓದಿ: ಕಾರು ಚಾಲಕರಿಗೆ ಟೋಲ್ ತೆರಿಗೆಯಿಂದ ಮುಕ್ತಿ! ಸಾರಿಗೆ ಸಚಿವರ ಪ್ರಕಟಣೆ

ಹಳೆಯ ವಾಹನಗಳಿಗೆ ಹೈ ಸೆಕ್ಯೂರಿಟಿ ನೋಂದಣಿ ಫಲಕ(HSRP) ಅಳವಡಿಕೆಗೆ ರಾಜ್ಯ ಸರ್ಕಾರದ ವತಿಯಿಂದ ನೀಡಲಾದ ಗಡುವು ಸೆ. 15ಕ್ಕೆ ಮುಕ್ತಾಯವಾಗಲಿದೆ. ಸೆ. 16 ರಿಂದಲೇ HSRP ಅಳವಡಿಕೆ ಮಾಡದ ವಾಹನಗಳಿಗೆ ದಂಡ ವಿಧಿಸಲು ಸಾರಿಗೆ ಇಲಾಖೆ ನಿರ್ಧರಿಸಿದೆ.

ಸೆ.16ರಿಂದ ಎಲ್ಲಾ ಜಿಲ್ಲೆಗಳಲ್ಲೂ 500 ರೂ. ದಂಡ ಹಾಕಲಾಗುವುದು. ಮೊದಲ ಸಲ 500 ರೂ. ದಂಡ ವಿಧಿಸಿದರೇ ಎರಡನೇ ಸಲಕ್ಕೆ 1,000 ರೂ. ದಂಡ ವಿಧಿಸಲಾಗುತ್ತದೆ ಎಂದು ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ. 1.49 ಕೋಟಿ ವಾಹನಗಳು ಇನ್ನೂ ಹೆಚ್‌ಎಸ್‌ಆರ್ಪಿ ಹಾಕಿಸಿಲ್ಲ ಎಂದು ಮಾಹಿತಿ ತಿಳಿದು ಬಂದಿದೆ.

ಇತರೆ ವಿಷಯಗಳು:

ಪಿಎಂ ಕಿಸಾನ್‌ 18 ನೇ ಕಂತಿನ ಹಣ ಖಾತೆಗೆ ಬರುವುದಿಲ್ಲ! ಕಾರಣ ತಿಳಿಸಿದ ಮೋದಿ

ಮೈಕ್ರೋ ಕ್ರೆಡಿಟ್: 2.5 ಲಕ್ಷಕ್ಕೆ ಸಿಗಲಿದೆ 1.5 ಲಕ್ಷ ಸಹಾಯಧನ!

Leave a Reply

Your email address will not be published. Required fields are marked *

rtgh