ರಾಜ್ಯ ಸರ್ಕಾರದಿಂದ ಕಾರ್ಮಿಕರ ಮಕ್ಕಳಿಗೆ ಸಿಹಿ ಸುದ್ದಿ, ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.

ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಗಾಗಿ 2024-25ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಸೌಲಭ್ಯವು ಪ್ರೌಢ ಶಾಲೆಯಿಂದ ಸ್ನಾತ್ತಕೋತ್ತರ ಪದವಿಯವರೆಗೆ ಹಾಗೂ ವೈಧ್ಯಕೀಯ, ಇಂಜಿನಿಯರಿಂಗ್‍ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಲಭ್ಯವಿದೆ.

2025ರ ಜನವರಿ 31ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಕಾರ್ಮಿಕರ ಮಾಸಿಕ ವೇತನವು ರೂ.35,000/- ಗಿಂತ ಹೆಚ್ಚು ಇರಬಾರದು. ಒಂದು ಕುಟುಂಬದಲ್ಲಿ ಒಬ್ಬ ವಿದ್ಯಾರ್ಥಿಗೆ ಮಾತ್ರ ಈ ಸೌಲಭ್ಯ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಆಸಕ್ತ ವಿದ್ಯಾರ್ಥಿಗಳು WWW.klwbapps.karnataka.gov.in ಎಂಬ ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳು ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗದಲ್ಲಿ ಶೇ.50, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಶೇ.45 ರಷ್ಟು ಅಂಕಗಳನ್ನು ಪಡೆದಿರಬೇಕು.

ಹೆಚ್ಚಿನ ಮಾಹಿತಿಗಾಗಿ, ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಕಾರ್ಮಿಕಕಲ್ಯಾಣ ಭವನ, ನಂ.48, 1ನೇ & 2ನೇ ಮಹಡಿ, ಮತ್ತೀಕೆರೆ ಮುಖ್ಯರಸ್ತೆ, ಯಶವಂತಪುರ, ಬೆಂಗಳೂರು-560022 ಇಲ್ಲಿ ಖುದ್ದಾಗಿ ಭೇಟಿ ನೀಡಬಹುದು ಅಥವಾ ದೂರವಾಣಿ ಸಂಖ್ಯೆ 080-23475188, 8277291175, 8277120505, 9141585402, 9141602562 ಮೂಲಕ ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

rtgh