ರಾಜ್ಯಾದ್ಯಂತ ಕಲರ್ ಕಾಟನ್ ಕ್ಯಾಂಡಿ ಮಾರಾಟವನ್ನು ನಿಷೇಧ ಮಾಡಿ, ರಾಜ್ಯ ಸರ್ಕಾರ ಆದೇಶಿಸಿದೆ. ಒಂದು ವೇಳ ನಿಯಮ ಮೀರಿ ಕಲರ್ ಕ್ಯಾಂಡಿ ಮಾರಾಟ ಮಾಡಿದ್ರೇ ಅಂತವರಿಗೆ 7 ವರ್ಷ ಜೈಲು, 10 ಲಕ್ಷ ದಂಡವನ್ನು ವಿಧಿಸುವುದಾಗಿ ಎಚ್ಚರಿಕೆ ನೀಡಿದೆ.
ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಾಟನ್ ಕ್ಯಾಂಡಿಗಳ ಗುಣಮಟ್ಟ ಕೃತಕ ಬಣ್ಣಗಳ ಬೆರೆಸುವಿಕೆಯಿಂದಾಗಿ ಉತ್ತಮವಾಗಿಲ್ಲದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಾಟನ್ ಕ್ಯಾಂಡಿಗಳ ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ವಿಶ್ಲೇಷಣೆಗೊಳಪಡಿಸಲಾಗಿರುತ್ತದೆ ಎಂದಿದ್ದಾರೆ.
ಹೀಗಾಗಿ ಕೇಕ್ ನಲ್ಲೂ ಬಳಸುವ ಕೃತಕ ಬಣ್ಣವನ್ನು ನಿಷೇಧಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಕೇಕ್ ನಲ್ಲಿ ಬಳಸುವ ಬಣ್ಣದಲ್ಲಿ ಅಪಾಯಕಾರಿ ಅಂಶಗಳು ಪತ್ತೆಯಾದ ಹಿನ್ನೆಲೆ ಶೀಘ್ರವೇ ಸರ್ಕಾರ ಆದೇಶ ಹೊರಡಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ಜನರು ಅದಿಕವಾಗಿ ಸೇವನೆ ಮಾಡುವ ಕೇಕ್‌ಗಳ ಮೇಲೆ ನಿಗಾವನ್ನು ವಹಿಸಲಾಗುತ್ತಿದೆ. ಕೇಕ್‌ಗೆ ಬಳಸುವಂತಹ ಮೈದಾಹಿಟ್ಟು, ಕ್ರೀಮ್‌ಗಳಿಗೆ ಬಳಸುವ ಪದಾರ್ಥಗಳು, ಕೋಕೋ ಪೌಡರ್, ಪ್ಲೇವರ್‌ಗಳು ಮತ್ತು ಕಲರ್‌ಗಳನ್ನು ಪರಿಶೀಲನೆಗೆ ಒಳಪಡಿಸಲಾಗುತ್ತಿದೆ. ರೆಡ್ ವೆಲ್ವೆಟ್, ಪೈನಾಪಲ್, ಚಾಕೋಲೇಟ್ ಸೇರಿದಂತೆ ಅನೇಕ ಪ್ಲೇವರ್‌ಗಳನ್ನ ಜನರು ಇಷ್ಟ ಪಡುವುದರಿಂದ ಅವುಗಳನ್ನು ತಯಾರಿಕೆ ಅಥವಾ ಅದಕ್ಕೆ ಹಾಕುವಂತಹ ಪದಾರ್ಥಗಳು ಜನರ ಆರೋಗ್ಯಕ್ಕೆ ಪೂರಕವಾಗಿದೆಯೇ ಅಥವಾ ಮಾರಕವಾಗಿದೆಯೇ ಎನ್ನುವುದರ ಪರೀಕ್ಷೆಗಳು ನಡೆಯಲಿದೆ.
ಸುಮಾರು 264 ಕಡೆಗಳಲ್ಲಿ ಕೇಕ್‌ಗಳ ಸ್ಯಾಂಪಲ್ಗಳನ್ನು ಪಡೆದುಕೊಂಡು ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ. ಇದರ ವರದಿಗೆ ಇಲಾಖೆಯು ಕಾಯುತ್ತಿದೆ. ಒಂದು ವೇಳೆ, ವರದಿಯು ಪಾಸಿಟಿವ್ ಎಂದು ಬಂದಿದ್ದೇ ಆದಲ್ಲಿ ಕೆಲವೊಂದು ಪದಾರ್ಥಗಳ ಮೇಲೆ ನಿರ್ಬಂಧನೆಗಳನ್ನು ಹೇರಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ. ಆಹಾರಗಳಿಗೆ ಬಳಸುವಂತಹ ಕೆಲವೊಂದು ಪದಾರ್ಥಗಳಿಗೆ ನಿರ್ಬಂಧನೆಗಳನ್ನು ವಿಧಿಸುತ್ತಿರುವುದನ್ನು ಬೇಕರಿಯ ಮಾಲೀಕರ ಸಂಘಟನೆಗಳು ಸ್ವಾಗತಿಸಿದೆ. ನಾವು ಸಹಜವಾದ ಕಲರ್ಗಳನ್ನು ಬಳಕೆ ಮಾಡುತ್ತೇವೆ. ಕೆಮಿಕಲ್ ಬಳಕೆಯನ್ನು ಮಾಡಲ್ಲ ಆಹಾರ ಇಲಾಖೆಯ ಕ್ರಮವು ಸರಿಯಾಗಿದೆ ಎಂದು ಬೇಕರಿಯ ಮಾಲೀಕರು ತಿಳಿಸಿದ್ದಾರೆ.
ಇತರೆ ವಿಷಯಗಳು:
ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ಚಿನ್ನದ ದರ ಕುಸಿತ!
ಎಲ್ಲಾ ಶಾಲೆ ಕಾಲೇಜುಗಳಿಗೆ 7 ದಿನ ರಜೆ! ಪಟ್ಟಿ ಚೆಕ್ ಮಾಡಿ