ರಾಜ್ಯದ ಮಹಿಳೆಯರಿಗೆ ಸಿಹಿ ಸುದ್ದಿ, ಈ ವರ್ಗದ ಮಹಿಳೆಯರಿಗೆ ಸಿಗಲ್ಲಿದೆ ಸಾಲದ ಸೌಲಭ್ಯ, ಇಂದೇ ಅರ್ಜಿ ಸಲ್ಲಿಸಿ.

ನಮಸ್ಕಾರ ಕರ್ನಾಟಕ, ರಾಜ್ಯದ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ 2024-25 ನೇ ಸಾಲಿನಲ್ಲಿ ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ವಿಶೇಷ ಸಾಲ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಿದೆ.

ಈ ಯೋಜನೆಯಡಿ ಮುಸ್ಲಿಂ, ಕ್ರೈಸ್ತ, ಜೈನ, ಬೌದ್ಧ, ಸಿಖ್, ಮತ್ತು ಪಾರ್ಸಿ ಸಮುದಾಯಗಳ ಅರ್ಹ ಮಹಿಳೆಯರು ಸಾಲ ಸೌಲಭ್ಯ ಪಡೆದು ತಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಿಕೊಳ್ಳಬಹುದು.

ಈ ಸೌಲಭ್ಯ ಪಡೆಯಲು ಆಸಕ್ತರು ತಮ್ಮ ಅರ್ಜಿಗಳನ್ನು ಆನ್ ಲೈನ್ ಮೂಲಕ ಸಲ್ಲಿಸಬೇಕು. ಆನ್ ಲೈನ್ ಅರ್ಜಿ ಸಲ್ಲಿಕೆಯ ನಂತರ, ಅಗತ್ಯ ದಾಖಲಾತಿಗಳೊಂದಿಗೆ ಆಫ್ಲೈನ್ ನಲ್ಲೂ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ಅರ್ಜಿಯನ್ನು ಡೌನ್ ಲೋಡ್ ಮಾಡಿಕೊಂಡು, ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಹಮೀದ್ ಷಾ ಕಾಂಪ್ಲೆಕ್ಸ್, 2ನೇ ಮಹಡಿ, ಹಲಸೂರು ಗೇಟ್ ಪೊಲೀಸ್ ಸ್ಟೇಷನ್ ಹಿಂಭಾಗ, ಕಬ್ಬನ್ ಪೇಟೆ ಮುಖ್ಯರಸ್ತೆ, ಬೆಂಗಳೂರು ನಗರ ಜಿಲ್ಲೆ ಇಲ್ಲಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

ಆಗಸ್ಟ್ 31, 2024. ಈ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ:

ಹೆಚ್ಚಿನ ಮಾಹಿತಿಯನ್ನು ಕಮ್ಡೋನ್ ಅಧಿಕೃತ ವೆಬ್‌ಸೈಟ್ ಮೂಲಕ ಅಥವಾ ದೂರವಾಣಿ ಸಂಖ್ಯೆ 080-22114817 ಮೂಲಕ ಪಡೆಯಬಹುದು.

Apply OnlineClick here

ಇತರೆ ವಿಷಯಗಳು:

ಪ್ರಯಾಣಿಕರಿಗೆ ಸಿಹಿ ಸುದ್ದಿ! ರೈಲಿನಲ್ಲಿ ಆರಂಭವಾಗಲಿದೆ ‘ಸೂಪರ್ ಅಪ್ಲಿಕೇಷನ್ʼ

ಇಂದಿರಾ ಕ್ಯಾಂಟೀನ್ ಪ್ರಿಯರಿಗೆ ಸಿಹಿ ಸುದ್ದಿ, ಡಿಜಿಟಲ್ ಟಚ್ ಮೂಲಕ ಹೋಟೆಲ್-ರೆಸ್ಟೋರೆಂಟ್ ರೀತಿ ಆರ್ಡರ್ ನೀಡಲು ಅವಕಾಶ.

Leave a Reply

Your email address will not be published. Required fields are marked *

rtgh