ಕೃಷಿ ಇಲಾಖೆಯು ಮಳೆಯ ನೀರನ್ನು ಸಂಗ್ರಹಿಸಿ ಕೃಷಿಯಲ್ಲಿ ಸದ್ಬಳಕೆಯನ್ನು ಮಾಡಲು ರೈತರನ್ನು ಉತ್ತೇಜಿಸುವ ಸಲುವಾಗಿ ರಾಜ್ಯ ಸರ್ಕಾರವು ಕೃಷಿ ಭಾಗ್ಯ ಯೋಜನೆಯನ್ನು ಜಾರಿ ಮಾಡಿದೆ, ಈ ಯೋಜನೆಯ ಮುಲಕ ವಿವಿಧ ಸೌಲಭ್ಯಗಳನ್ನು ಪಡೆದುಕೊಳ್ಳಲು ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕೃಷಿ ಭಾಗ್ಯ ಯೋಜನೆಯು ಪ್ಯಾಕೇಜ್ ಆದಾರದಲ್ಲಿ ಅನುಷ್ಟಾನಗೊಳ್ಳುತ್ತಿದ್ದು, ಬದು, ಕೃಷಿಹೊಂಡದ ಸುತ್ತ ತಂತಿ ಬೇಲಿ, ಕೃಷಿ ಹೊಂಡ, ಪಂಪ್ ಸೆಟ್, ಕೃಷಿಹೊಂಡಕ್ಕೆ ಪಾಲೀಥಿನ್ ಹೊದಿಕೆ, ಹಾಗೂ ಲಘು ನೀರಾವರಿಯ ಘಟಕಗಳನ್ನು ಅನುಷ್ಠಾನವನ್ನು ಮಾಡಲು ಸಹಾಯಧನವನ್ನು ನೀಡಲಾಗುತ್ತಿದೆ. ರೈತರು ಈ ಎಲ್ಲಾ ಘಟಕಗಳನ್ನು ಕಡ್ಡಾಯವಾಗಿ ಅನುಷ್ಠಾನವನ್ನು ಮಾಡಬೇಕಾಗಿರುತ್ತದೆ.
- ಸಾಮಾನ್ಯವಾದ ವರ್ಗದ ರೈತರಿಗೆ ಶೇ. 80 ರಷ್ಟು
- ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಶೇ. 90%
- ಸಹಾಯಧನವನ್ನು ನೀಡಲು ಅವಕಾಶವಿರುತ್ತದೆ.
ಈ ಸಹಾಯಧನ ಪಡೆಯಲು ಆಸಕ್ಕಿ ಹೊಂದಿದ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿಯನ್ನು ಸಲ್ಲಿಸಬಹುದು, ಈ ಸಹಾಯಧನಕ್ಕೆ ಭರ್ತಿಯನ್ನು ಮಾಡಿದ ಅರ್ಜಿಯೊಂದಿಗೆ ಪಹಣಿ, ಪಾಸ್ ಪೋರ್ಟ್ ಸೈಜ್ ಪೋಟೊ, ಬ್ಯಾಂಕ್ ಪಾಸ್ ಪುಸ್ತಕ, ಜಾತಿ ಪ್ರಮಾಣ ಪತ್ರದ ಪ್ರತಿ ಸೇರಿದಂತೆ ಅಗತ್ಯವಾದ ದಾಖಲಾತಿಯನ್ನು ಲಗತ್ತಿಸಿ ರೈತ ಸಂಪರ್ಕದ ಕೇಂದ್ರದಲ್ಲಿ ಅರ್ಜಿಯನ್ನು ಸಲ್ಲಿಸುವಂತೆ ಸಹಾಯಕ ಕೃಷಿ ನಿರ್ದೇಶಕ ರಮೇಶ್,ಎಸ್,ಟಿ.ರವರು ಪ್ರಕಟಣೆಯಲ್ಲಿ ಮಾಹಿತಿಯನ್ನು ತಿಳಿಸಿರುತ್ತಾರೆ.
ಇತರೆ ವಿಷಯಗಳು:
ಬಿಪಿಎಲ್ ಕಾರ್ಡ್ ರದ್ದು, ಅನರ್ಹ ಪಡಿತರ ಚೀಟಿಗಳನ್ನು ರದ್ದುಪಡಿಸುವಂತೆ ಅಧಿಕಾರಿಗಳಿಗೆ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ.