ಭೂ ಕಾಯ್ದೆ ತಿದ್ದುಪಡಿ: ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ!

ಹಲೋ ಸ್ನೇಹಿತರೆ, ದೇವರಾಜ ಅರಸು ಅವರು ಕೃಷಿಕರು ಮಾತ್ರ ಕೃಷಿ ಭೂಮಿ ಖರೀದಿಸಬೇಕು ಎಂದು ತಂದಿದ್ದ ಕಾಯ್ದೆಯನ್ನು ಬಿಜೆಪಿಯವರು ತಿದ್ದುಪಡಿ ಮಾಡಿ ನೇಗಿಲು ಹಿಡಿಯಲು ಬಾರದವರಿಗೂ ಕೃಷಿ ಭೂಮಿ ಖರೀದಿಗೆ ಅವಕಾಶ ಕಲ್ಪಿಸಿದ್ದರು. ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಗೆ ಬಹುಮತಕ್ಕೆ ಬಂದ ಕೂಡಲೇ ಈ ತಿದ್ದುಪಡಿ ಕಾಯ್ದೆಯನ್ನು ರದ್ದು ಮಾಡಿ ಹಿಂದಿನಂತೆ ಕೃಷಿಕರಷ್ಟೇ ಕೃಷಿ ಭೂಮಿ ಖರೀದಿಸುವಂತೆ ಮಾಡುತ್ತೇವೆ ಎಂದು ಹೇಳಿದ್ದಾರೆ.

Land Act

ಕೃಷಿಕರಲ್ಲದವರು ಇನ್ನೂ ಕೃಷಿ ಭೂಮಿ ಖರೀದಿಸಲು ಅವಕಾಶ ಇರುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ನೆಡೆದ ದೇವರಾಜ ಅರಸು ಜನ್ಮ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ನವರು ಮಾತನಾಡಿದರು.

ಇದನ್ನು ಓದಿ: 18ನೇ ಕಂತಿನ ಹಣ ಬಿಡುಗಡೆಗೆ ಅಧಿಕೃತ ಘೊಷಣೆ!

ದೇವರಾಜ ಅರಸು ಅವರು ಉಳುವವನೇ ಭೂಮಿಯೊಡೆಯ ಎಂದು ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ಮಾಡಿ ಅಸಂಖ್ಯಾತ ಜನರಿಗೆ ಭೂಮಿಯ ಮಾಲೀಕತ್ವವನ್ನು ನೀಡಿದರು. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಭೂಮಿಯ ಹಕ್ಕನ್ನು ಖಾತ್ರಿಪಡಿಸಲು 79 ಎ ಮತ್ತು ಬಿ ಗೆ ಮಾಡಿರುವ ಭೂ ತಿದ್ದುಪಡಿಯನ್ನು ಖಾಯ್ದೆಯನ್ನು ಮತ್ತೆ ಸರಿಪಡಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.

ಇತರೆ ವಿಷಯಗಳು:

ಎಲ್‌ಕೆಜಿ, ಯುಕೆಜಿ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಶೀಘ್ರವೇ ಆರಂಭ!

ಆ.31 ಲಾಸ್ಟ್ ಡೇಟ್: ಮುಂದಿನ ತಿಂಗಳಿನಿಂದ ರೇಷನ್‌ ಸೌಲಭ್ಯ ನಿಲ್ಲಿಸಲು ಸರ್ಕಾರದ ಆದೇಶ!

Leave a Reply

Your email address will not be published. Required fields are marked *

rtgh