ಹಲೋ ಸ್ನೇಹಿತರೆ, ಕೇಂದ್ರ ಸರ್ಕಾರದ ಮಾತೃವಂದನಾ ಯೋಜನೆಯಡಿ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸೌಲಭ್ಯ ಪಡೆಯಲು ಮೊದಲನೇಯ ಗರ್ಭಿಣಿ ಮಹಿಳೆಯರು ಮತ್ತು ಎರಡನೇ ಪ್ರಸವದಲ್ಲಿ ಹೆಣ್ಣು ಮಗು ಜನಿಸಿದ ಮಹಿಳೆಯರಿಂದ ನೋಂದಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ಮಾತೃವಂದನಾ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ!
ಈ ನೋಂದಣಿಗೆ ನಿಗಧಿತ ನಮೂನೆಯಲ್ಲಿ ಅರ್ಜಿ ಭರ್ತಿ ಮಾಡಲು, ತಾಯಿ ಕಾರ್ಡ್ ಮತ್ತು ಮಗುವಿನ ಲಸಿಕೆ ಮಾಹಿತಿಯ ಪ್ರತಿ, ಫಲಾನುಭವಿಯ ಆಧಾರ್ ಕಾರ್ಡ್, ಫಲಾನುಭವಿಯ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಕಡ್ಡಾಯವಾಗಿ ಜೋಡಣೆಯಾಗಿರಬೇಕು. ಪಡಿತರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ನರೇಗಾ ಕಾರ್ಡ್, ಇ-ಶ್ರಮ್ ಕಾರ್ಡ್, ಆಯುಷ್ಮಾನ್ ಕಾರ್ಡ್ ಜೊತೆಗೆ ಸಲ್ಲಿಸಬೇಕು.
ಈ ಯೋಜನೆಯಡಿ ಮಹಿಳೆಯ ಮೊದಲ ಗರ್ಭಾವಸ್ಥೆ ಮತ್ತು ನಂತರದ ಸಾಕಷ್ಟು ವಿಶ್ರಾಂತಿಗಾಗಿ ಆಂಶಿಕ ಪರಿಹಾರವನ್ನು ಗರ್ಭಿಣಿ ಮತ್ತು ಬಾಣಂತಿಯರ ಆರೋಗ್ಯದಲ್ಲಿ ಸುಧಾರಣೆ ತರಲು ಪ್ರೋತ್ಸಾಹಧನ ರೂಪದಲ್ಲಿ ವೇತನ ನಷ್ಟಕ್ಕಾಗಿ ನೀಡುವುದಾಗಿದೆ.
ಇದನ್ನು ಕೂಡ ಓದಿ: ಕಾರು ಚಾಲಕರಿಗೆ ಟೋಲ್ ತೆರಿಗೆಯಿಂದ ಮುಕ್ತಿ! ಸಾರಿಗೆ ಸಚಿವರ ಪ್ರಕಟಣೆ
ಮೊದಲ ಮಗುವಿಗೆ ಎರಡು ಕಂತಿನಲ್ಲಿ ರೂ. 5000, ಎರಡನೇ ಕಂತಿನಲ್ಲಿ 6000 ನೀಡಲಾಗುವುದು. ಸರ್ಕಾರಿ ನೌಕರರು ಮತ್ತು ಸಾರ್ವಜನಿಕ ಉದ್ದಿಮೆಗಳ ನೌಕರರನ್ನು ಹೊರತುಪಡಿಸಿ ಮೊದಲ ಪ್ರಸವದ ಗರ್ಭಿಣಿ ಮತ್ತು ಎರಡನೇ ಹೆಣ್ಣು ಮಗುವಿನ ಬಾಣಂತಿಯರು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು.
ಈ ಬಗ್ಗೆ ಶಿಶು ಅಭಿವೃದ್ಧಿ ಕೇಂದ್ರ ಕಚೇರಿ ಅಥವಾ ನಿಮ್ಮ ಹತ್ತಿರದ ಅಂಗನವಾಡಿ ಕೇಂದ್ರದಲ್ಲಿ ಮಾಹಿತಿ ತಿಳಿದು ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಇತರೆ ವಿಷಯಗಳು:
20 ಲಕ್ಷ ಬಿಪಿಎಲ್, ಅಂತ್ಯೋದಯ ಕಾರ್ಡ್‌ಗೆ ಕಡಿವಾಣ!
ಪಿಎಂ ಕಿಸಾನ್ 18 ನೇ ಕಂತಿನ ಹಣ ಖಾತೆಗೆ ಬರುವುದಿಲ್ಲ! ಕಾರಣ ತಿಳಿಸಿದ ಮೋದಿ