ಜನ ಸಾಮಾನ್ಯರ ಮೇಲೆ ಮತ್ತೆ ಬರೆ ಎಳೆದ ಸರ್ಕಾರ.! ಹಾಲಿನ ದರ 1.5 ರೂ. ಹೆಚ್ಚಳ

ಹಲೋ ಸ್ನೇಹಿತರೇ, ಸರ್ಕಾರ ರೈತರಿಗೆ ನೀಡುವ ಹಾಲಿನ ದರದಲ್ಲಿ 1.50 ರೂಪಾಯಿ ಕಡಿತಗೊಳಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಚಿವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದ್ದಾರೆ.

milk price hike
milk price hike

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು, ಅಧಿಕಾರ ದರ್ಪದ ಅಮಲಿನಿಂದ ಕೊಬ್ಬಿರುವ ರಾಜ್ಯ ಕಾಂಗ್ರೆಸ್ ಸರ್ಕಾರವು ಅನ್ನದಾತನ ಮೇಲೆ ಬೆಲೆ ಏರಿಕೆಯಯ ಬರೆ ಎಳೆಯುತ್ತಿದೆ. ರೈತನ ಜೀವನಾಧಾರವಾಗಿರುವ ಹಾಲಿನ ದರದ ಮೇಲೆ ಕಾಂಗ್ರೆಸ್ ವು ಆಡಳಿತದ ಕೆಟ್ಟ ದೃಷ್ಠಿಯು ಬಿದ್ದಿದೆ. ಇದರ ಪರಿಣಾಮವೇ ಹಾಲಿನ ಖರೀದಿ ದರಕ್ಕೆ ಕತ್ತರಿ ಪ್ರಯೋಗವಾಗಿದೆ ಎಂದು ಹರಿ ಹಾಯ್ದಿದ್ದಾರೆ.

ಕೆಲವು ಹಾಲು ಒಕ್ಕೂಟಗಳು ಏಕಪಕ್ಷೀಯವಾಗಿ ಹಾಲಿನ ಖರೀದಿ ದರವನ್ನು 1.50 ರೂ. ಕಡಿತ ಮಾಡಿವೆ. ಹೊಸದಾದ ಖರೀದಿ ದರವು 30.50 ರಿಂದ 29ಕ್ಕೆ ರೂಪಾಯಿಗಳಿಗೆ ಕುಸಿದಿದೆ.

ಕಾಮಧೇನುವನ್ನೇ ನಂಬಿದ್ದಂತಹ ರೈತನ ಕರುಳಿಗೆ ಕೊಳ್ಳಿ ಬಿದ್ದಿದೆ. ನಮ್ಮದು ರೈತಪರ ಸರ್ಕಾರ ಎನ್ನುವ ಮುಖ್ಯಮಂತ್ರಿಗಳು ಇತ್ತ ಗಮನ ಹರಿಸಬೇಕು. ಅವರಿಗೆ ಅಷ್ಟು ಸಮಯ ಇದೆ ಎಂದು ನಾನಾದರೂ ಪರಿಭಾವಿಸುತ್ತೇನೆಯೇ ಎಂದು ಈ ಸಂಧರ್ಭದಲ್ಲಿ ಮಾಧ್ಯಮಗಳ ಮುಂದೆ ತಿಳಿಸಿದ್ದಾರೆ.

ಕೂಡಲೇ ಈ ಬಗ್ಗೆ ಮುಖ್ಯಮಂತ್ರಿಗಳು ಕ್ರಮ ವಹಿಸಿ ಹಾಲು ಖರೀದಿ ದರಕ್ಕೆ ತಡೆ ಒಡ್ಡಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

rtgh