ರಾಜ್ಯದ ಮಹಿಳೆಯರಿಗೆ ಸಿಹಿ ಸುದ್ದಿ, ಈ ಯೋಜನೆಯಡಿ ಸಿಗಲಿದೆ 65 ಸಾವಿರ ರೂ ಸಾಲದ ಸೌಲಭ್ಯ.

ನಮಸ್ಕಾರ ಕರ್ನಾಟಕ, ರಾಜ್ಯ ಸರ್ಕಾರವು ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ಎಮ್ಮೆ ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡುವ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಶೇ.6 ರ ಬಡ್ಡಿ ಸಹಾಯಧನ ನೀಡಲಾಗುತ್ತದೆ.

ಪ್ರಸಕ್ತ(2024-25) ಸಾಲಿನಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ರೈತ ಮಹಿಳೆಯರಲ್ಲಿ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ಎಮ್ಮೆ ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡುವ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಶೇ.6 ರ ಬಡ್ಡಿ ಸಹಾಯಧನ ನೀಡಲಾಗುತ್ತದೆ.

ಪ್ರಸಕ್ತ ಸಾಲಿನಲ್ಲಿ ಹೈನುಗಾರಿಕೆಗಾಗಿ ವಿವಿಧ ಬ್ಯಾಂಕ್‍ಗಳಲ್ಲಿ ಸಾಲ ಪಡೆಯುವ ಪ್ರತಿ ಫಲಾನುಭವಿಗಳಿಗೆ ಗರಿಷ್ಠ 65 ಸಾವಿರ ರೂ ಸಾಲದ ಮೊತ್ತಕ್ಕೆ ಶೇ.6 ಬಡ್ಡಿ ಸಹಾಯಧನ (3625 ರೂ.) ನೀಡಲಾಗುತ್ತದೆ.

ಪ್ರತಿ ಹಸು/ಎಮ್ಮೆ ಘಟಕದ ಮೊತ್ತ ರೂ:65000, ಶೇ.6 ವಾರ್ಷಿಕ ಬಡ್ಡಿ ಸಹಾಯಧನದ ಪ್ರತಿ ಫಲಾನುಭವಿಗೆ ಗರಿಷ್ಟ ರೂ.3624.50/-(3625),

ಆಸಕ್ತ ಫಲಾನುಭವಿಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗೆ ಹತ್ತಿರದ ಪಶುವೈದ್ಯಕೀಯ ಸಂಸ್ಥೆಗಳನ್ನು ಅಥವಾ ಸಂಬಂಧಪಟ್ಟ ಪಶು ಆಸ್ಪತ್ರೆಗಳನ್ನು ಸಂರ್ಪಕಿಸಬಹುದು ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಇತರೆ ವಿಷಯಗಳು :

ಗೃಹಲಕ್ಷ್ಮಿ ಯೋಜನೆಯಲ್ಲಿ ಬಿಗ್ ಅಪ್ಡೇಟ್, ಇನ್ಮುಂದೆ ಒಟ್ಟು 1.78 ಲಕ್ಷದ ಮಹಿಳೆಯರಿಗೆ ಸಿಗೋದಿಲ್ಲ ಗೃಹಲಕ್ಷ್ಮಿ ಹಣ.

ಸ್ವಂತ ಮನೆ ಇಲ್ಲದವರಿಗೆ ಸಿಹಿ ಸುದ್ದಿ, 3 ಕೋಟಿ ಹೊಸ ಮನೆಗಳು ಬಿಡುಗಡೆ, ಇಂದೇ ಈ ಕೆಲಸ ಮಾಡಿ ಸ್ವಂತ ಮನೆ ಪಡೆದುಕೊಳ್ಳಿ.

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್, 7ನೇ ರಾಜ್ಯ ವೇತನ ಆಯೋಗ ಜಾರಿಯಾದ್ರೆ ವೇತನ ಎಷ್ಟು ಹೆಚ್ಚಾಗಲಿದೆ?

Leave a Reply

Your email address will not be published. Required fields are marked *

rtgh