ವೇಗದ ಸಂಚಾರವನ್ನು ನಿಯಂತ್ರಿಸಲು, 130 ಕಿ.ಮೀ.ಗಿಂತ ಹೆಚ್ಚಿನ ವೇಗದಲ್ಲಿ ಸಂಚರಿಸುವ ವಾಹನಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗುತ್ತದೆ. ಈ ನಿಯಮವು ಆಗಸ್ಟ್ 1 ರಿಂದ ಜಾರಿಗೆ ಬರುತ್ತದೆ.
ಹೌದು..! ವೇಗದ ನಿಯಂತ್ರಣಕ್ಕಾಗಿ, ಆಗಸ್ಟ್ 1 ರಿಂದ 130 ಕಿ.ಮೀ.ಗಿಂತ ಹೆಚ್ಚು ವೇಗದಲ್ಲಿ ಓಡುವ ವಾಹನಗಳಿಗೆ ಎಫ್‌ಐಆರ್ ದಾಖಲಿಸಲಾಗುತ್ತದೆ. ರಾಜ್ಯದಾದ್ಯಂತ ಈ ಕ್ರಮ ಜಾರಿಗೆ ಬರಲಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗ) ಅಲೋಕ್ ಕುಮಾರ್ ತಿಳಿಸಿದ್ದಾರೆ.
ಸ್ಪಾಟ್ ಸ್ಪೀಡ್ ಮತ್ತು ಸೆಕ್ಷನಲ್ ಸ್ಪೀಡ್ ಆಧಾರದಲ್ಲಿ ವಾಹನ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿ, ದಂಡ ವಿಧಿಸಲಾಗುವುದು. ಈ ರೀತಿಯ ಪ್ರಕರಣಗಳಲ್ಲಿ ರೂ. 2 ಸಾವಿರದವರೆಗೆ ದಂಡ ಮತ್ತು 6 ತಿಂಗಳು ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ವಾಹನಗಳಲ್ಲಿ ಪ್ರಖರ ಬೆಳಕಿನ ಹೆಡ್ಲೈಟ್ಗಳನ್ನು ಅಳವಡಿಸುವುದರಿಂದ ಎದುರು ಸಂಚರಿಸುವ ವಾಹನಗಳಿಗೆ ರಸ್ತೆ ಕಾಣದೇ ಅಪಘಾತ ಸಂಭವಿಸುವ ಸಾಧ್ಯತೆ ಇರುತ್ತದೆ. ಹಾಗಾಗಿ ಕಣ್ಣು ಕುಕ್ಕುವ ಹೆಡ್ಲೈಟ್ಗಳನ್ನು ವಾಹನಗಳಿಗೆ ಅಳವಡಿಸಬೇಡಿ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.
ಕಣ್ಣು ಕುಕ್ಕುವ ಹೆಡ್ ಲೈಟ್ಗಳ ಅಳವಡಿಕೆ ವಿರುದ್ಧ ಕ್ರಮ ಕೈಗೊಂಡ ಪೊಲೀಸರು ರಾಜ್ಯಾದ್ಯಂತ 8 ಸಾವಿರಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದ್ದಾರೆ. ಎಲ್‌ಇಡಿ ದೀಪಗಳನ್ನು ಅಳವಡಿಸಿಕೊಂಡಿರುವ ವಾಹನಗಳ ಮೇಲೆ ಕ್ರಮ ಕೈಗೊಂಡಿರುವುದು ಕರ್ನಾಟಕದಲ್ಲಿಯೇ ಮೊದಲ ಬಾರಿಯಾಗಿದೆ.
ಇತರೆ ವಿಷಯಗಳು:
ರಾಜ್ಯ ಸರ್ಕಾರಿ ನೌಕರರ ಗಮನಕ್ಕೆ, ಇಲ್ಲಿದೆ ಪಿಂಚಣಿ ಕುರಿತು ಸಂಪೂರ್ಣ ಮಾಹಿತಿ.
2024-25ನೇ ಸಾಲಿನ ʻNMMSʼ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ! ವಿದ್ಯಾರ್ಥಿಗಳು ಈ ದಿನಾಂಕದೊಳಗೆ ಅಪ್ಲೇ ಮಾಡಿ