ನಮಸ್ಕಾರ ಕರ್ನಾಟಕ, ರಾಜ್ಯದ ಪೋಷಕರಿಗೆ ಸಂತಸದ ಸುದ್ದಿ! ಮುಂದಿನ ವರ್ಷದೊಳಗೆ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲು ಸಿದ್ಧತೆ ನಡೆಯುತ್ತಿದೆ ರಾಜ್ಯ ಸರ್ಕಾರ.
ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಈ ಬಗ್ಗೆ ಮಾಹಿತಿ ನೀಡಿ, “ಪ್ರಸಕ್ತ ಸಾಲಿನಲ್ಲಿ 2,000 ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ಸ್ಥಾಪಿಸಲಾಗಿದೆ” ಎಂದು ತಿಳಿಸಿದ್ದಾರೆ. ಅಲ್ಲದೆ, 1,008 ಅಂಗನವಾಡಿಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳು ಆರಂಭವಾಗಿವೆ.
ಮುಂದಿನ ವರ್ಷದಿಂದ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಉದ್ಘಾಟಿಸಲಾಗುವುದು, ಎಂದು ಸಚಿವರು ಹೇಳಿದ್ದಾರೆ. ಇನ್ನು ಮುಂದೆ, ನಾಲ್ಕು ವರ್ಷಗಳಲ್ಲಿ ಹಂತ ಹಂತವಾಗಿ 3 ಸಾವಿರ ಇಂತಹ ಶಾಲೆಗಳನ್ನು ತೆರೆಯುವ ಉದ್ದೇಶವಿದೆ. ಈ ಹೊಸ ಯೋಜನೆಯಿಂದ 45 ಲಕ್ಷ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಸಿಗಲಿದೆ.
ರಾಜ್ಯದ ವಿವಿಧೆಡೆ, ನಗರ ಮತ್ತು ಗ್ರಾಮೀಣ ಭಾಗಗಳಲ್ಲಿ, ಈ ಶಾಲೆಗಳು ಸ್ಥಾಪನೆಯಾಗಲಿವೆ, ಇದರಿಂದ ಪ್ರತಿಯೊಬ್ಬ ವಿದ್ಯಾರ್ಥಿಗೂ ಸಮಾನ ಶಿಕ್ಷಣ ದೊರೆಯುವುದು ಖಚಿತವಾಗಿದೆ.
ಇತರೆ ವಿಷಯಗಳು:
ಸೂರ್ಯಘರ್ ಉಚಿತ ವಿದ್ಯುತ್ ಯೋಜನೆ, ಪಿಎಂ ಸೂರ್ಯಘರ್ ಯೋಜನೆಗೆ ಅರ್ಜಿ ಆಹ್ವಾನ.
ರಾಜ್ಯದ ರೈತರಿಗೆ ಸಿಹಿ ಸುದ್ದಿ, ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ.