ದ್ವಿತೀಯ ಪಿಯುಸಿ ಪಾಸಾದವರಿಗೆ ಸಿಹಿ ಸುದ್ದಿ, ಕೇಂದ್ರದಿಂದ 20 ಸಾವಿರ ವಿದ್ಯಾರ್ಥಿವೇತನ.

ಕೇಂದ್ರ ಉನ್ನತ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪೂರೈಸಿ, ಮುಂದಿನ ಮೂರು ವರ್ಷಗಳ ಕಾಲ ಪದವಿ ಶಿಕ್ಷಣವನ್ನು ಮಾಡಲು ಉತ್ಸುಕನಾಗಿರುವ ವಿದ್ಯಾರ್ಥಿಗಳಿಗೆ 20,000 ರೂಪಾಯಿಗಳ ವಿದ್ಯಾರ್ಥಿವೇತನ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ.

ಪ್ರಧಾನಮಂತ್ರಿ ಉಷಾ ವಿದ್ಯಾರ್ಥಿವೇತನ (PM Usha Scholarship 2024) ಎಂಬ ಹೆಸರಿನಲ್ಲಿ ನೀಡಲಾಗುವ ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರದಿಂದ ವಿದ್ಯಾರ್ಥಿವೇತನ ನೀಡಲಾಗುತ್ತದೆ.

ಇಂದು ಶಿಕ್ಷಣಕ್ಕೆ ಹೆಚ್ಚಿನ ಹಣ ಖರ್ಚು ಮಾಡುವ ಅಗತ್ಯವಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳು ಸರ್ಕಾರದಿಂದ ಲಭ್ಯವಿರುವ ವಿದ್ಯಾರ್ಥಿವೇತನ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ಮೂಲಕ ಈ ಆರ್ಥಿಕ ನೆರವನ್ನು ಪಡೆದುಕೊಳ್ಳಲು ಸಹಾಯವಾಗುತ್ತದೆ.

ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹತೆಯ ವಿವರಗಳು, ಅರ್ಜಿ ಸಲ್ಲಿಸುವ ಆನ್‌ಲೈನ್ ಲಿಂಕ್, ಹಾಗೂ ಕೊನೆಯ ದಿನಾಂಕಗಳನ್ನು ಈ ಲೇಖನದಲ್ಲಿ ವಿವರಿಸಲಾಗಿದ್ದು, ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು.

ಪ್ರಧಾನಮಂತ್ರಿ ಉಷಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹತೆಗಳು:

ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಯಲ್ಲಿ 80% ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರುವರು, ಮತ್ತು ಮೂರು ವರ್ಷಗಳ ಪದವಿ ಶಿಕ್ಷಣ ಮಾಡಬಯಸುವವರು ಅರ್ಜಿ ಸಲ್ಲಿಸಲು ಅರ್ಹರು.

ಆಯ್ಕೆಯಾದವರಿಗೆ ಸಿಗುವ ವಿದ್ಯಾರ್ಥಿವೇತನದ ಮೊತ್ತ:

ಅರ್ಜಿ ಸಲ್ಲಿಸಿ ಆಯ್ಕೆಯಾದವರಿಗೆ ಈ ಯೋಜನೆಯ ಅಡಿಯಲ್ಲಿ ಪ್ರತಿಯೊಬ್ಬ
ವಿದ್ಯಾರ್ಥಿಗೆ ಈ ಕೆಳಗಿನಂತೆ ವಿದ್ಯಾರ್ಥಿವೇತನ ಸಿಗುತ್ತದೆ:

ಮೊದಲ ಶೈಕ್ಷಣಿಕ ವರ್ಷ: ₹12,000/-
ಎರಡನೇ ಮತ್ತು ಮೂರನೇ ಶೈಕ್ಷಣಿಕ ವರ್ಷ: ₹20,000/-

ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲಾತಿಗಳು:

ವಿದ್ಯಾರ್ಥಿಯ ಆಧಾರ್ ಕಾರ್ಡ್
10ನೇ ಹಾಗೂ 12ನೇ ತರಗತಿಯ ಅಂಕ ಪಟ್ಟಿ
ಪದವಿ ಶಿಕ್ಷಣ ಸೇರಿರುವ ಶೈಕ್ಷಣಿಕ ದಾಖಲೆಗಳು
ಭಾವಚಿತ್ರ
ಫೋನ್ ನಂಬರ್
ಕೊನೆಯ ದಿನಾಂಕ:

ಅರ್ಜಿ ಸಲ್ಲಿಸಲು ಅರ್ಹರಿರುವ ವಿದ್ಯಾರ್ಥಿಗಳು 2024ರ 31ನೇ ಅಕ್ಟೋಬರ್ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಪ್ರಮುಖ ಲಿಂಕ್ ಗಳು:

ಸಹಾಯವಾಣಿ/Helpline number – 080-23311330

Leave a Reply

Your email address will not be published. Required fields are marked *

rtgh