ಆ.10 ರ ವರೆಗೆ ರೇಷನ್ ಕಾರ್ಡ್ ಗೆ ಸಂಬಂಧಿಸಿದ ಈ ಕೆಲಸ ಮಾಡಲು ಅವಕಾಶ!

ಹಲೋ ಸ್ನೇಹಿತರೆ, ರೇಷನ್‌ ಕಾರ್ಡ್‌ ಹೊಂದಿರುವವರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದೂ, ರೇಷನ್‌ ಕಾರ್ಡ್‌ ನಲ್ಲಿ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಆಗಸ್ಟ್ 10 ರವರೆಗೆ ಅವಕಾಶ ನೀಡಲಾಗಿದೆ. ಈ ಕಾರ್ಡ್‌ ನಲ್ಲಿ ನಿಮ್ಮ ಹೆಸರು ವಿಳಾಸ ಇನ್ನಿತರ ಮಾಹಿತಿಗಳು ಸರಿಯಾಗಿ ಇಲ್ಲದಿದ್ದರೆ ನಿಮಗೆ ಗೃಹಲಕ್ಷ್ಮಿಯಂತಹ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಎಲ್ಲಿ ಹೇಗೆ ತಿದ್ದುಪಡಿ ಮಾಡಿಸುವುದು? ಈ ಎಲ್ಲಾ ಮಾಹಿತಿಯ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ ಕೊನೆವರೆಗೂ ಓದಿ.

ration card correction 2024

ನಿಮ್ಮ ಹತ್ತಿರದ ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವೆಬ್‌ ಸೈಟ್‌ ನಲ್ಲಿ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ನೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಈಗಾಗಲೇ ಪಡಿತರ ಚೀಟಿ ಇರುವವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಹೆದರು ಸೇರ್ಪಡೆಗೆ ಅವಕಾಶ ನೀಡಲಾಗುವುದು.

ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ, ಪಡಿತರ ಚೀಟಿದಾರರ ಹೆಸರು ತಿದ್ದುಪಡಿ, ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಆಗಸ್ಟ್ 10 ರ ವರೆಗೆ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ.

ಇದನ್ನು ಸಹ ಓದಿ: ಬೀದಿ ವ್ಯಾಪಾರಿಗಳಿಗೆ ಗುಡ್ ನ್ಯೂಸ್, ಈ ಯೋಜನೆಗೆ ಅರ್ಜಿ ಸಲ್ಲಿಸಿ 10,000 ರೂ. ಹಣ ಪಡೆಯಿರಿ.

ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಸೇರ್ಪಡೆ ಹೇಗೆ ಮಾಡುವುದು?

ನಿಮ್ಮ ಪಡಿತರ ಚೀಟಿಗೆ ಮಗುವಿನ ಹೆಸರು ಸೇರಿಸುವಾಗ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಬೇಕಾಗುತ್ತದೆ. ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾ‌ರ್ ಜೊತೆಗೆ ಗಂಡನ ಮನೆಯ ಪಡಿತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ.

  • ಮೊದಲು ಅಧಿಕೃತ ವೆಬ್ ಸೈಟ್ ಗೆ https://ahara.kar.nic.in/home ಭೇಟಿ ನೀಡಿ
  • ಮುಖ್ಯ ಪುಟದಲ್ಲಿ ಇ-ಸೇವೆಗಳನ್ನು ಆಯ್ಕೆ ಮಾಡಿ.
  • ತಿದ್ದುಪಡಿ ಅಥವಾ ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ.
  • ಹೊಸ ಪೇಜ್ ನಲ್ಲಿನ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿದ ನಂತರ ತಿಳಿಸಲಾದ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಪ್ರತಿಯನ್ನು ಅಪ್ಲೋಡ್ ಮಾಡಿ.
  • ಅಪ್‌ಲೋಡ್ ಮಾಡಿದ ನಂತರದಲ್ಲಿ ಫಾರ್ಮ್ ಅನ್ನು Submit ಮಾಡಿ.

ಅರ್ಜಿ ಸಲ್ಲಿಸುವಾಗ ನೀವು ನೀಡಿರುವಂತಹ ಎಲ್ಲ ದಾಖಲಾತಿಗಳು ಸರಿಯಾಗಿದ್ದರೆ, ನಿಮ್ಮ ಮನಗೆ ಅಪ್‌ಡೇಟ್ ಆಗಿರುವ ಹೊಸ ಪಡಿತರ ಚೀಟಿಯನ್ನು ನೀಡಲಾಗುತ್ತದೆ.

ಇತರೆ ವಿಷಯಗಳು:

ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್, ಈರುಳ್ಳಿ ಶೆಡ್ ನಿರ್ಮಿಸಲು ಸಿಗಲ್ಲಿದೆ 1.60 ಲಕ್ಷ ಹಣ ಸಹಾಯಧನ.

ಕರ್ನಾಟಕ ಗಂಗಾ ಕಲ್ಯಾಣ ಯೋಜನೆಯಡಿ ಉಚಿತ ಬೋರ್‌ವೆಲ್‌, ರೈತರೇ ಇಂದೇ ಅರ್ಜಿ ಸಲ್ಲಿಸಿ.

Leave a Reply

Your email address will not be published. Required fields are marked *

rtgh