ಪಡಿತರ ಕಾರ್ಡ್‍ದಾರರ ಇ-ಕೆವೈಸಿ ಕಾರ್ಯ ಮುಂದುವರೆದಿದ್ದು ಇನ್ನೂ ಮಾಡಿಸದೆ ಬಾಕಿ ಇರುವ ಪಡಿತರ ಚೀಟಿಗಳ ಫಲಾನುಭಾವಿಗಳು ತಪ್ಪದೇ ಇ-ಕೆವೈಸಿ ಮಾಡಿಸುವಂತೆ ಸೂಚನೆ ನೀಡಲಾಗಿದೆ.

ಪಡಿತರ ಚೀಟಿದಾರರು ಇ-ಕೆವೈಸಿ ಮಾಡಿಸಲು ಹತ್ತಿರದ ನ್ಯಾಯ ಬೆಲೆ ಅಂಗಡಿಗೆ ಆಗಸ್ಟ್ 31 ರೊಳಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.
ಇಲ್ಲಿದೆ ಪಡಿತರ ಚೀಟಿ ಇ-ಕೆವೈಸಿ ಮಾಡಿಸುವ ವಿಧಾನ
- ಪಡಿತರ ಚೀಟಿಯ ಒರಿಜಿನಲ್ ಪ್ರತಿ
- ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಫೋಟೋಕಾಪಿ
- ಕುಟುಂಬದ ಯಜಮಾನನ ಆಧಾರ್ ಕಾರ್ಡ್ ನಕಲು ಪ್ರತಿ
- ಬ್ಯಾಂಕ್ ಪಾಸ್‌ಬುಕ್‌ನ ಫೋಟೋಕಾಪಿ
- ಕುಟುಂಬದ ಯಜಮಾನನ ಎರಡು ಪಾಸ್‌ಪೋರ್ಟ್ ಅಳತೆಯ ಪೋಟೋ
ಪಡಿತರ ಚೀಟಿ ಮತ್ತು ಆಧಾರ್ ಅನ್ನು ಆನ್ ಲೈನ್ ನಲ್ಲಿ ಈ ರೀತಿ ಲಿಂಕ್ ಮಾಡಿ
- ಮೊದಲು ಅಧಿಕೃತ (ಪಿಡಿಎಸ್) ಪೋರ್ಟಲ್ಗೆ ಭೇಟಿ ನೀಡಿ
- ನಿಮ್ಮ ಸಕ್ರಿಯ ಕಾರ್ಡ್ನೊಂದಿಗೆ ಆಧಾರ್ ಲಿಂಕ್ ಆಯ್ಕೆಯನ್ನು ಮಾಡಿ.
- ನಿಮ್ಮ ಪಡಿತರ ಚೀಟಿಯ ಸಂಖ್ಯೆಯನ್ನು ನಮೂದಿಸಿ ಹಾಗೂ ನಂತರ ಆಧಾರ್ ಕಾರ್ಡ್ ಸಂಖ್ಯೆಯನ್ನು ಸಹ ನಮೂದಿಸಬೇಕು.
- ನಿಮ್ಮ ನೋಂದಾಯಿತ ಮೊಬೈಲ್ ನಂಬರ್ ಅನ್ನು ನಮೂದಿಸಿ.
- ಸಲ್ಲಿಸಿ ಎನ್ನುವ ಬಟನ್ ಅನ್ನು ಆಯ್ಕೆ ಮಾಡಿ.
- ಇದಾದ ನಂತರ ನಿಮ್ಮ ಮೊಬೈಲ್ ಫೋನ್ಗೆ OTPಯನ್ನು ಸ್ವೀಕರಿಸುತ್ತೀರಿ.
- ಆಧಾರ್ ಪಡಿತರ ಲಿಂಕ್ ಪುಟದಲ್ಲಿ OTPಯನ್ನು ನಮೂದಿಸಿ, ಮತ್ತು ಅದಕ್ಕಾಗಿ ನಿಮ್ಮ ವಿನಂತಿ ಈಗ ಸಲ್ಲಿಸಲಾಗಿದೆ.
ಇತರೆ ವಿಷಯಗಳು:
ಬೆಂಗಳೂರು ಸೇರಿ ಮಲೆನಾಡಿನಲ್ಲಿ ಮತ್ತೆ ಹೆಚ್ಚಲಿದೆ ಮಳೆ, ಆರೆಂಜ್ ಅಲರ್ಟ್ ಘೋಷಣೆ.
ಪಿಜಿ ವಸತಿಗೃಹಗಳಿಗೆ ಬಿಬಿಎಂಪಿ ಹೊಸ ನಿಯಮ! ಕಟ್ಟುನಿಟ್ಟಿನ ಕ್ರಮಕ್ಕೆ ಆದೇಶ