ಗ್ಯಾರಂಟಿ ಯೋಜನೆಗೆ ಅನುದಾನ ಕಡಿತ! ಅನ್ನಭಾಗ್ಯ ಮತ್ತು ಗೃಹಲಕ್ಷ್ಮಿ ಯೋಜನೆಗಳ ಪರಿಷ್ಕರಣೆ

ಹಲೋ ಸ್ನೇಹಿತರೆ, ರಾಜ್ಯ ಸರ್ಕಾರದ ಅನುದಾನ ಕೊರತೆಯ ಕಾರಣ ಗ್ಯಾರಂಟಿ ಯೋಜನೆ ಕಡಿತಕ್ಕೆ ಸಚಿವರಿಂದಲೇ ಒತ್ತಡ ನೀಡುತ್ತಿರುವುದು ಕೇಳಿ ಬಂದಿದೆ. ಉಚಿತ ಯೋಜನೆಗಳ ಪರಿಷ್ಕರಣೆಗೆ ಕಾಂಗ್ರೆಸ್ ಹೈಕಮಾಂಡ್ ಗೆ ಸಚಿವರು ಮನವಿ ಮಾಡಿದ್ದಾರೆ. ಈ ಮನವಿಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಈಶ್ವರ್ ಖಂಡ್ರೆ, ಡಾ.ಜಿ. ಪರಮೇಶ್ವರ್ ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಿಸುವುದಿಲ್ಲ. ಗ್ಯಾರಂಟಿ ಯೋಜನೆಗಳಿಗೆ ಕತ್ತರಿ ಹಾಕುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

Revision of Guarantee Schemes

ಅನ್ನಭಾಗ್ಯ ಮತ್ತು ಗೃಹಲಕ್ಷ್ಮಿ ಈ ಎರಡು ಯೋಜನೆಗಳನ್ನು ಪರಿಷ್ಕರಿಸುವ ಕೆಲಸ ನಡೆಯುತ್ತಿದೆ. ಉಳಿದ ಮೂರು ಗ್ಯಾರಂಟಿ ಯೋಜನೆಗಳಲ್ಲಿ ಯಾವುದೇ ಬದಲಾವಣೆ ಇಲ್ಲವೆಂದು ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಿಗೆ ಇರುವ ಅಸಮಾಧಾನವನ್ನು ಸಚಿವರಿಗೆ ತಲುಪಿಸಿದ್ದೇನೆ. ಬಡವರಿಗೆ ಮಾತ್ರ ಯೋಜನೆ ಲಾಭ ಸಿಗಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಇದನ್ನು ಸಹ ಓದಿ: ಬೆಂಗಳೂರು ಸೇರಿ ಮಲೆನಾಡಿನಲ್ಲಿ ಮತ್ತೆ ಹೆಚ್ಚಲಿದೆ ಮಳೆ, ಆರೆಂಜ್ ಅಲರ್ಟ್ ಘೋಷಣೆ.

ಈ ವಿವಾದದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳಿಗೆ ಕತ್ತರಿ ಹಾಕುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸಚಿವ ಈಶ್ವರ್ ಖಂಡ್ರೆ, ಅವರು ಯೋಜನೆಗಳು ಈಗ ಇರುವಂತೆಯೂ ಮುಂದೆಯೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ. ಪರಿಷ್ಕರಣೆ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಗ್ಯಾರಂಟಿ ಯೋಜನೆಗಳ ದುರ್ಬಳಕೆ ತಡೆಯುವ ನೆಪದಲ್ಲಿ ಗ್ಯಾರಂಟಿಗಳ ಪರಿಷ್ಕರಣೆಗೆ ಸಚಿವರು ಇಲಾಖೆಯ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಪರ- ವಿರೋಧ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಗ್ಯಾರಂಟಿಗಳಿಗೆ ಹಣ ಪೂರೈಕೆಯಿಂದ ಕ್ಷೇತ್ರಗಳಿಗೆ ಅನುದಾನ ಕೊರತೆಯಾಗುತ್ತಿದೆ ಎಂಬ ಶಾಸಕರ ಅಸಮಾಧಾನದೊಂದಿಗೆ ಗ್ಯಾರಂಟಿಗಳು ಬಡವರ ಬದಲು ಶ್ರೀಮಂತರ ಪಾಲಾಗುತ್ತಿದೆ. ಹೀಗಾಗಿ ಯೋಜನೆಗಳನ್ನು ಪರಿಷ್ಕರಣೆ ಮಾಡಬೇಕೆಂಬ ಅಭಿಪ್ರಾಯ ಕೇಳಿಬಂದಿದೆ.

ಇತರೆ ವಿಷಯಗಳು:

ಬೆಂಗಳೂರು ಸೇರಿ ಮಲೆನಾಡಿನಲ್ಲಿ ಮತ್ತೆ ಹೆಚ್ಚಲಿದೆ ಮಳೆ, ಆರೆಂಜ್ ಅಲರ್ಟ್ ಘೋಷಣೆ.

ಬಿಪಿಎಲ್ ಕಾರ್ಡ್ ರದ್ದು, ಅನರ್ಹ ಪಡಿತರ ಚೀಟಿಗಳನ್ನು ರದ್ದುಪಡಿಸುವಂತೆ ಅಧಿಕಾರಿಗಳಿಗೆ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ.

Leave a Reply

Your email address will not be published. Required fields are marked *

rtgh