ಗಣೇಶ ಹಬ್ಬಕ್ಕೆ ಹೊಸ ರೂಲ್ಸ್! ಪಾಲಿಸದಿದ್ರೆ 10 ಸಾವಿರ ರೂ. ದಂಡ, ಜೈಲು ಶಿಕ್ಷೆ ಫಿಕ್ಸ್

ಹಲೋ ಸ್ನೇಹಿತರೆ, ಇನ್ನೇನು ಕೆಲವೇ ದಿನಗಳಲ್ಲಿ ಗೌರಿ ಹಾಗೂ ಗಣೇಶ ಹಬ್ಬ ಆರಂಭವಾಗಲಿದೆ. ಇದರ ಪ್ರಯುಕ್ತ, ಗೌರಿ ಹಾಗೂ ಗಣೇಶ ವಿಗ್ರಹಗಳನ್ನು ಸಾರ್ವಜನಿಕ ಪ್ರದೇಶಗಳಲ್ಲಿ ಪ್ರತಿಷ್ಠಾಪನೆ ಮಾಡುವ ಮುನ್ನ ಉತ್ಸವ ಆಯೋಜಕರು ಗಣೇಶ ಪ್ರತಿಷ್ಠಾಪನೆಗೆ ಅಗತ್ಯವಿರುವ ಸ್ಥಳ, ವಿದ್ಯುತ್ ಸಂಪರ್ಕ, ಪೆಂಡಾಲ್, ಇನ್ನು ಮುಂತಾದ ವ್ಯವಸ್ಥೆಗಳನ್ನು ಮಾಡಿಕೊಳ್ಳುವ ಮುನ್ನ ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಪಡೆದು ಕಾರ್ಯಕ್ರಮ ನಡೆಸಲು ಸಿದ್ಧತೆ ಮಾಡಿಕೊಳ್ಳಲು ಮಾಹಿತಿ ನೀಡಿದೆ.

Rules For Ganesh Chaturthi

ಗೌರಿ-ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪನೆ ಮಾಡುವವರು ಹಾಗೂ ತಯಾರಿಸುವವರು ವಿಷಕಾರಿ ರಾಸಾಯನಿಕ ಲೋಹದ ಲೇಪದ ಪ್ಲಾಸ್ಟರ್ ಆಫ್ ಪ್ಯಾರೀಸ್ ಅಂತಹ ಪರಿಸರಕ್ಕೆ ಹಾನಿ ಉಂಟು ಮಾಡುವಂತಹ ಸಾಮಾಗ್ರಿಗಳಿಂದ ತಯಾರಿಸಿದ ವಿಗ್ರಹಗಳನ್ನು ಬಳಸದೆ ಪರಿಸರ ಸ್ನೇಹಿ ಸಾದಾ ಜೇಡಿ ಮಣ್ಣಿನಿಂದ ತಯಾರಿಸಿದ ವಿಗ್ರಹ ಬಳಸಬೇಕು.

ಇದನ್ನು ಓದಿ: ಇಂದಿನಿಂದ ‘ಇ-ಶ್ರಮ್ ಕಾರ್ಡ್’ ಮಾಡಿಸಿದವರಿಗೆ ಸಿಗಲಿದೆ ಈ ಎಲ್ಲಾ ಸೌಲಭ್ಯ.!

ಈ ಬಗ್ಗೆ ವಿಗ್ರಹ ಪ್ರತಿಷ್ಠಾಪನೆ ಮಾಡಲು ನಗರಸಭೆಯಿಂದ ಅನುಮತಿ ಪಡೆಯುವ ಮುನ್ನ ರೂ.100 ಗಳ ಛಾಪಾ ಕಾಗದದ ಮೇಲೆ ಮುಚ್ಚಳಿಕೆ ಪತ್ರವನ್ನು ಸಲ್ಲಿಸುವುದು ಸರ್ಕಾರದ ಆದೇಶದ ಪ್ರಕಾರ ಕಡ್ಡಾಯವಾಗಿದೆ. ಇಲ್ಲವಾದಲ್ಲಿ ನಿಯಂತ್ರಣ ಮಂಡಳಿಯ ಜಲಮಾಲಿನ್ಯ (ತಡೆ ಮತ್ತು ನಿಯಂತ್ರಣ) ಕಾಯ್ದೆ 1974ರ ಅನುಸಾರ ಕಲಂ 33(ಆ)ರ ಪ್ರಕಾರ ರೂ.10 ಸಾವಿರ ವರೆಗೂ ದಂಡ ವಿಧಿಸಲಾಗುತ್ತದೆ. ಜೊತೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ.

ನಗರಸಭೆಯು ಸಾರ್ವಜನಿಕರಿಗೆ ಗಣಪತಿ ವಿಗ್ರಹಗಳ ವಿಸರ್ಜನೆಗೆ ಓಂಕಾರೇಶ್ವರ ದೇವಸ್ಥಾನದ ಬಳಿ ಇರುವ ಗೌರಿ ಕೆರೆಯನ್ನು ಗುರುತಿಸಿ, ವಿಸರ್ಜನೆಗೆ ಅವಶ್ಯ ವ್ಯವಸ್ಥೆಗಳನ್ನು ಮಾಡಿದ್ದು, ಈ ಸ್ಥಳದಲ್ಲೆ ವಿಗ್ರಹಗಳನ್ನು ಹೂವು ಹಣ್ಣುಗಳನ್ನು ಪ್ರತ್ಯೇಕಿಸಿ ವಿಸರ್ಜಿಸಲು ತಿಳಿಸಿದೆ. ಒಂದು ವೇಳೆ ಈ ನಿಯಮ ಉಲ್ಲಂಘಿಸಿದಲ್ಲಿ ಕಾನೂನಿನಂತೆ ಕ್ರಮಕೈಗೊಳ್ಳಲಾಗುತ್ತದೆ.

ಇತರೆ ವಿಷಯಗಳು:

ಜ್ವರ, ನೋವು, ಅಲರ್ಜಿಗೆ ನೀಡುವ ಈ 156 ಔಷಧಿಗಳ ಮಾರಾಟ ನಿಷೇಧ.!

ಆಯುಷ್ಮಾನ್ ಫಲಾನುಭವಿಗಳಿಗೆ ಗುಡ್ ನ್ಯೂಸ್!ಈಗ ಸಿಗಲಿದೆ ಇನ್ನಷ್ಟು ಹೆಚ್ಚು ವಿಮಾ ರಕ್ಷಣೆ

Leave a Reply

Your email address will not be published. Required fields are marked *

rtgh