ಹಲೋ ಸ್ನೇಹಿತರೆ, ರಾಜ್ಯದಲ್ಲಿ ನಿನ್ನೆ ರಾತ್ರಿಯಿಂದ ನಿರಂತರವಾಗಿ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆಯು ಈಗಾಗಲೇ ಕೆಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದ್ದು, ಕೆಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆಯನ್ನು ಈಗಾಗಲೇ ಘೋಷಿಸಲಾಗಿದೆ.
ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ನಾಳೆ ಜುಲೈ 31ಕ್ಕೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಈ ಹಿನ್ನಲೆಯಲ್ಲಿ ಮಲೆನಾಡು ಭಾಗದ ಆರು ತಾಲೂಕುಗಳಲ್ಲಿ ಅಂಗನವಾಡಿ, ಶಾಲಾ ಕಾಲೇಜು, ಪದವಿ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ.
ಚಿಕ್ಕಮಗಳೂರಿನ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಶಾಲಾ ಕಾಲೇಜು, ಪದವಿ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಲ್ಲದೆ ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಚಿಕ್ಕಮಗಳೂರು, ತಾಲೂಕಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ.
ಆದರೆ ಕಡೂರು, ತರೀಕೆರೆ, ಅಜ್ಜಾಪುರ ತಾಲೂಕುಗಳಲ್ಲಿ ರಜೆ ಇಲ್ಲ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲೂ ಮಳೆ ಮುಂದುವರಿದಿದ್ದು, ನದಿ, ತೊರೆಗಳು ತುಂಬಿ ಹರಿಯುತ್ತಿವೆ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ; ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮಾಡಿದೆ.
ಇದನ್ನು ಓದಿ: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ನೇಮಕಾತಿ, ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ.
ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ನಾಳೆ ಜುಲೈ 31ಕ್ಕೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಗಳಲ್ಲಿ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ.
ಕಳೆದೆರಡು ದಿನಗಳಿಂದ ಸ್ವಲ್ಪ ಮಟ್ಟಿಗೆ ನಿಂತಿದ್ದ ಮಳೆ ನಿನ್ನೆಯಿಂದ ಮತ್ತೆ ಚುರುಕುಗೊಂಡಿದ್ದು, ಜಿಲ್ಲೆಯಲ್ಲಿ ಗಾಳಿ ಸಹಿತ ಅಲ್ಲಲ್ಲಿ ಮಳೆಯಾಗುತ್ತಿದೆ. ಅದೇ ರೀತಿ ಸ್ವರ್ಣ ವಾರಾಹಿ, ಪಾಪನಾಶಿನಿ ಸೇರಿದಂತೆ ಜಿಲ್ಲೆಯ ಬಹುತೇಕ ನದಿಗಳು ತುಂಬಿ ಹರಿಯುತ್ತಿವೆ.
ನಿರಂತರ ಗಾಳಿ ಮತ್ತು ಮಳೆಯಿಂದಾಗಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಅಪಘಾತಗಳು ಸಂಭವಿಸಿವೆ; ಮನೆಗಳು ಮತ್ತು ಸರ್ಕಾರಿ ಕಟ್ಟಡಗಳ ಮಹಡಿಗಳ ಮೇಲೆ ಬೃಹತ್ ಮರಗಳು ಬಿದ್ದಿವೆ. ಅಲ್ಲದೆ ಶಿರಾಡಿಘಾಟ್ ನಲ್ಲಿ ಮತ್ತೆ ಗುಡ್ಡ ಕುಸಿದಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಇದರಿಂದ ರಸ್ತೆಯಲ್ಲಿ ಸಾಲು ಸಾಲು ವಾಹನಗಳು ನಿಂತಿವೆ.
ಇತರೆ ವಿಷಯಗಳು:
ರಾಜ್ಯ ಸರ್ಕಾರಿ ನೌಕರರ ಗಮನಕ್ಕೆ, ಇಲ್ಲಿದೆ ಪಿಂಚಣಿ ಕುರಿತು ಸಂಪೂರ್ಣ ಮಾಹಿತಿ.
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ನೇಮಕಾತಿ, ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ.