ನಮಸ್ಕಾರ ಕರ್ನಾಟಕ, ಉಚಿತ ಹೊಲಿಗೆ ಯಂತ್ರ ಯೋಜನೆಗೆ ನೀವು ಅರ್ಜಿ ಸಲ್ಲಿಸಬೇಕೇ? ಈ ಯೋಜನೆಯ ಅಡಿಯಲ್ಲಿ ಯಾರಿಗೆ ಉಚಿತ ಹೊಲಿಗೆ ಯಂತ್ರ ಸಿಗುತ್ತದೆ? ಈ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸಲು ಯಾವೆಲ್ಲಾ ದಾಖಲೆಗಳು ಬೇಕು? ಮತ್ತು ಅರ್ಜಿ ಸಲ್ಲಿಸುವ ವಿಧಾನವೇನು? ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗಿದೆ.
ಕೇಂದ್ರ ಸರ್ಕಾರವು ಕುಶಲಕರ್ಮಿಗಳ ವೃತ್ತಿಯನ್ನು ಉತ್ತೇಜಿಸಲು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ (Pradhan Mantri Vishwakarma Yojana) ಅಡಿಯಲ್ಲಿ ಹಲವು ಸೌಲಭ್ಯಗಳನ್ನು ನೀಡುತ್ತಿದೆ. ಈ ಸೌಲಭ್ಯಗಳಲ್ಲಿ ಉಚಿತ ಹೊಲಿಗೆ ಯಂತ್ರ (Sewing Machine Scheme) ಯೋಜನೆ ಕೂಡ ಒಂದು. ಈ ಯೋಜನೆಯಡಿ ಅರ್ಹ ಕುಶಲಕರ್ಮಿಗಳಿಗೆ ಏನೆಲ್ಲಾ ಸೌಲಭ್ಯಗಳು ಸಿಗುತ್ತವೆ? ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು? ಎಂಬುದನ್ನು ತಿಳಿದುಕೊಳ್ಳೋಣ.
ಅರ್ಹತೆಗಳು:
- ಅರ್ಜಿ ಸಲ್ಲಿಸುವವರು ಕನಿಷ್ಠ 18 ವರ್ಷ ವಯಸ್ಸಿನವರಾಗಿರಬೇಕು.
- ಸಾಂಪ್ರದಾಯಿಕ ಅಸಂಘಟಿತ ಸ್ವಯಂ ಉದ್ಯೋಗ ಮಾಡುತ್ತಿರುವವರಾಗಿರಬೇಕು.
- ಅರ್ಜಿ ಸಲ್ಲಿಸುವವರ ಕುಟುಂಬದ ಬೇರೆ ಸದಸ್ಯರು ಈ ಯೋಜನೆಯ ಸೌಲಭ್ಯ ಪಡೆದಿರಬಾರದು.
- ಒಂದೇ ಕುಟುಂಬದಲ್ಲಿ ಒಂದೇ ವ್ಯಕ್ತಿಗೆ ಈ ಯೋಜನೆಯ ಲಾಭ ದೊರಕಲಿದೆ.
- ಅರ್ಜಿ ಸಲ್ಲಿಸುವವರು ಕೇಂದ್ರ ಅಥವಾ ರಾಜ್ಯ ಸರ್ಕಾರದ ಯಾವುದೇ ಸ್ವಯಂ ಉದ್ಯೋಗ ಸಾಲವನ್ನು ಪಡೆದಿರಬಾರದು.
ಅಗತ್ಯ ದಾಖಲೆಗಳು:
- ಅರ್ಜಿದಾರನ ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಆಧಾರ್ ಕಾರ್ಡ್ ಗೆ ಲಿಂಕ್ ಆದ ಮೊಬೈಲ್ ನಂಬರ್
- ಪಡಿತರ ಚೀಟಿ
ಅರ್ಜಿ ಸಲ್ಲಿಸುವ ವಿಧಾನ:
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ (Pradhan Mantri Vishwakarma Yojana) ಅಡಿಯಲ್ಲಿ ಅರ್ಜಿ ಸಲ್ಲಿಸಲು, ನೀವು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು. ಅರ್ಜಿಯನ್ನು ನೇರವಾಗಿ ಆನ್‌ಲೈನ್‌ನಲ್ಲಿ ಸಲ್ಲಿಸಬಹುದು.
ಅಧಿಕೃತ ವೆಬ್‌ಸೈಟ್ ಲಿಂಕ್: https://pmvishwakarma.gov.in/
ಈ ಮಾಹಿತಿಯನ್ನು ಬಳಸಿಕೊಂಡು ನೀವು ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸಿ, ಯೋಜನೆಯ ಸೌಲಭ್ಯಗಳನ್ನು ಪಡೆಯಿರಿ.