ಸರ್ಕಾರಿ ನೌಕರರಿಗೆ ಆ.17ರಂದು ‘ವಿಶೇಷ ಸಾಂದರ್ಭಿಕ ರಜೆ’ ಮಂಜೂರು!

ಹಲೋ ಸ್ನೇಹಿತರೆ, ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ್ದೂ, ಆ.17ರಂದು ವಿಶೇಷ ಸಾಂದರ್ಭಿಕ ರಜೆ ನೀಡಲು ಆದೇಶ ಹೊರಡಿಸಿದೆ. ರಾಜ್ಯದಲ್ಲಿ 7ನೇ ವೇತನ ಆಯೋಗದ ವರದಿ ಜಾರಿ ಮಾಡಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೃತಜ್ಞತೆ ಸಲ್ಲಿಸಲು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ವೃಂದ ಸಂಘಗಳು ಆ.17ರಂದು ನಗರದ ಅರಮನೆ ಆವರಣದಲ್ಲಿ ಅಭಿನಂದನಾ ಕಾರ್ಯಕ್ರಮ ಹಾಗೂ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.

Special Occasional Leave' granted to government employees

ಈ ಕಾರಣಕ್ಕಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಅನುಕೂಲವಾಗಲೆಂದು ಎಲ್ಲಾ ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ರಾಜ್ಯ ಸರ್ಕಾರ ಮಂಜೂರು ಮಾಡಿದೆ.

ಇದನ್ನು ಓದಿ: ಮುಂದಿನ ತಿಂಗಳಿನಿಂದ ಹೊಸ ‘BPL’ ಕಾರ್ಡ್ ವಿತರಣೆ! ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ

ಈ ಬಗ್ಗೆ ಸರ್ಕಾರಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಆಗಿರುವ ವಿಮಲಾಕ್ಷಿ.ಬಿ ರವರು ಸುತ್ತೋಲೆ ಹೊರಡಿಸಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ವೃಂದ ಸಂಘಗಳ ವತಿಯಿಂದ ಆ.17ರಂದು ಬೆಂಗಳೂರು ನಗರದ ಅರಮನೆಯ ಆವರಣದಲ್ಲಿ ಅಭಿನಂದನಾ ಹಾಗೂ ಕಾರ್ಯಾಗಾರ ಆಯೋಜಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತಿ ಇರುವ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬೇಕು ಎಂದು ಮಾಹಿತಿ ತಿಳಿಸಿದ್ದಾರೆ.

ಇತರೆ ವಿಷಯಗಳು:

ಕೃಷಿ ಭಾಗ್ಯ ಯೋಜನೆಯಡಿ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ!

ಬೆಂಗಳೂರು ಸೇರಿ ಮಲೆನಾಡಿನಲ್ಲಿ ಮತ್ತೆ ಹೆಚ್ಚಲಿದೆ ಮಳೆ, ಆರೆಂಜ್ ಅಲರ್ಟ್ ಘೋಷಣೆ.

Leave a Reply

Your email address will not be published. Required fields are marked *

rtgh