Steel authority of India recruitment: ನಮಸ್ಕಾರ ಕರ್ನಾಟಕ, ನಿರುದ್ಯೋಗಿಗಳಿಗೆ ಒಂದು ಸುವರ್ಣ ಅವಕಾಶ ಈಗ ಲಭ್ಯವಿದೆ. ಕೇಂದ್ರ ಸರ್ಕಾರದ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (ಸೇಲ್) ಸಂಸ್ಥೆಯಲ್ಲಿ ಮ್ಯಾನೇಜ್‌ಮೆಂಟ್ ಟ್ರೈನಿ (ತಾಂತ್ರಿಕ) ಹುದ್ದೆಗಳಿಗೆ 249 ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ವಿವಿಧೆಡೆ ಇರುವ ಪ್ರಾಧಿಕಾರದ ಕಾರ್ಯಾಚರಣೆ ಘಟಕ ಮತ್ತು ಗಣಿಗಳಲ್ಲಿ ಕೆಲಸ ಮಾಡಲಿದ್ದಾರೆ.
ಅರ್ಜಿ ಸಲ್ಲಿಸುವ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ವಿದ್ಯಾರ್ಹತೆ:
ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ಕ್ಷೇತ್ರದಲ್ಲಿ ಪದವಿ ಮುಗಿಸಿರಬೇಕು.
ವಯೋಮಿತಿ:
ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 28 ವರ್ಷ ಇರಬೇಕು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ (ಪ.ಜಾ), ಪರಿಶಿಷ್ಟ ಪಂಗಡ (ಪ.ಪಂ) ಅಭ್ಯರ್ಥಿಗಳಿಗೆ 5 ವರ್ಷ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಶುಲ್ಕ:
ಪ.ಜಾ, ಪ.ಪಂ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 200 ರೂ. ಮತ್ತು ಸಾಮಾನ್ಯ, ಒಬಿಸಿ, ಡಬ್ಲ್ಯೂಎಸ್ (ಆರ್ಥಿಕವಾಗಿ ಶ್ರೇಷ್ಠ) ಅಭ್ಯರ್ಥಿಗಳಿಗೆ 700 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ ಗೇಟ್ 2024 ಅಂಕ, ಗ್ರೂಪ್ ಡಿಸ್ಕಷನ್ ಮತ್ತು ಸಂದರ್ಶನದ ಆಧಾರದ ಮೇಲೆ ನಡೆಯಲಿದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭ: 05/07/2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: 25/07/2024
ಅರ್ಜಿ ಸಲ್ಲಿಕೆ:
ಅಭ್ಯರ್ಥಿಗಳು ಇಲ್ಲಿ ಇರುವ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
Apply Online | Click here |