ಶಿಕ್ಷಕರ ದಿನಾಚರಣೆಯಂದೇ ಶಿಕ್ಷಕರಿಗೆ CM ನೀಡಿದ್ರೂ ಗುಡ್ ನ್ಯೂಸ್!

ಹಲೋ ಸ್ನೇಹಿತರೆ, ಶಿಕ್ಷಕರ ದಿನಾಚರಣೆಯಂದೇ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಹೊಸ ಆದೇಶ ಹೊರಡಿಸಿದೆ. ಮುಂಬಡ್ತಿ ಸೌಲಭ್ಯ ಹಾಗೂ ಇತರೆ ಸೇವಗಳಿಗೆ ಸಂಬಂಧಿಸಿದಂತೆ ಒಂದು ತಿಂಗಳೊಳಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಸೂಕ್ತ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

Teacher's Day

ಸಭೆಯಲ್ಲಿ ಮಾತನಾಡಿದ ನಿಯೋಗದ ಪ್ರತಿನಿಧಿಗಳು 2017ರಲ್ಲಿ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಾವಳನ್ನು ತಿದ್ದುಪಡಿ ಮಾಡಿದ ಬಳಿಕ ಸೇವಾ ನಿಯಮಗಳನ್ನು ಪೂರ್ವಾನ್ವಯವಾಗುವಂತೆ ಅನುಷ್ಠಾನಗೊಳಿಸಬಾರದು. ಪದವೀಧರರಾಗಿರುವ 40 ಸಾವಿರಕ್ಕೂ ಹೆಚ್ಚು ಕಾರ್ಯನಿರ್ವಹಿಸುತ್ತಿರುವ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಿ ಆದೇಶ ಹೊರಡಿಸಬೇಕು.

ಇದನ್ನು ಸಹ ಓದಿ: ಜನಸಾಮಾನ್ಯರಿಗೆ ಬಿಗ್ ಶಾಕ್: ಗಗನಕ್ಕೆರಿದ ಈರುಳ್ಳಿ, ಬೆಳ್ಳುಳ್ಳಿ ಬೆಲೆ!

ಈ ಮೊದಲು ಆಯಾ ಜಿಲ್ಲಾ ನೇಮಕಾತಿ ಸಮಿತಿಯ ಮಟ್ಟದಲ್ಲಿ ಮುಖ್ಯೋಪಾಧ್ಯಾಯ ಹುದ್ದೆಗಳಿಗೆ ಮುಂಬಡ್ತಿ ನೀಡಲಾಗುತ್ತಿತ್ತು. ಅದನ್ನು ಕಳೆದ ಮೂರು ವರ್ಷಗಳಿಂದ ನಿಲ್ಲಿಸಲಾಗಿತ್ತು, ಇದನ್ನು ಮತ್ತೆ ಮುಂದುವರೆಸಬೇಕು. ಹಾಗೆಯೇ ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಯಲ್ಲಿ, ಮುಂಬಡ್ತಿ ಹುದ್ದೆಗಳನ್ನು ಶೇ.50ರಷ್ಟು ನಿಗದಿಪಡಿಸಬೇಕು. ಮುಂಬಡ್ತಿ ಸಂದರ್ಭದಲ್ಲಿ ಸೇವಾ ಜೇಷ್ಟತೆಯನ್ನು ಪರಿಗಣಿಸಬೇಕು ಎಂದು ಶಿಕ್ಷಕರ ಸಂಘದ ನಿಯೋಗ ಸರ್ಕಾರಕ್ಕೆ ಮನವಿ ಸಲ್ಲಿಸಿತು.

ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಗೋವಿಂದ ರಾಜು, ನಸೀರ್‌ ಅಹ್ಮದ್‌, ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ, ಸಾಹಿತಿ ಬರಗೂರು ರಾಮಚಂದ್ರಪ್ಪ, ನಿರಂಜನಾರಾಧ್ಯ, ಇಲಾಖಾ ಪ್ರದಾನ ಕಾರ್ಯದರ್ಶಿ ರಿತೇಶ್‌ ಕುಮಾರ್‌ ಸಿಂಗ್ ಮತ್ತಿತರರು ಈ ಸಭೆಯಲ್ಲಿ ಉಪಸ್ಥಿತರಿದ್ದರು.

ಇತರೆ ವಿಷಯಗಳು:

ಅಕ್ರಮ -ಸಕ್ರಮ ಜಮೀನು! ರಾಜ್ಯದ ರೈತರಿಗೆ ಮತ್ತೊಂದು ಸಿಹಿ ಸುದ್ದಿ

ಹೈನುಗಾರಿಕೆ ನಂಬಿದ್ದ ರೈತರಿಗೆ ನಿರಾಸೆ! ಹಾಲು ಖರೀದಿ ದರದಲ್ಲಿ 1.5 ರೂ ಇಳಿಕೆ

Leave a Reply

Your email address will not be published. Required fields are marked *

rtgh