ನಮಸ್ಕಾರ ಕರ್ನಾಟಕ, ಮಹಿಳೆಯರ ಸ್ವಾವಲಂಬನೆ ಮತ್ತು ಸಾಮರ್ಥ್ಯವನ್ನು ಹೆಚ್ಚಿಸಲು ಸರ್ಕಾರವು ಹಲವಾರು ಯೋಜನೆಗಳನ್ನು ರೂಪಿಸುತ್ತಿದೆ. ಹೆಣ್ಣುಮಕ್ಕಳ ಆರ್ಥಿಕ ಬಲವರ್ಧನೆಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವು ಯೋಜನೆಗಳನ್ನು ಜಾರಿಗೆ ತಂದಿವೆ. ಇವುಗಳಲ್ಲಿ ಒಂದಾದ ಉದ್ಯೋಗಿನಿ ಯೋಜನೆ ಅಡಿಯಲ್ಲಿ ಮಹಿಳೆಯರು ಮೂರು ಲಕ್ಷ ರೂಪಾಯಿವರೆಗೆ ಸಹಾಯಧನವನ್ನು ಪಡೆಯಬಹುದು.
ಈ ಮೂರು ಲಕ್ಷ ರೂಪಾಯಿಯಲ್ಲಿ ಶೇಕಡ 50ರಷ್ಟು ಹಣ ಸಬ್ಸಿಡಿಯಾಗಿ ದೊರೆಯುತ್ತದೆ. ಈ ಯೋಜನೆಯ ಮುಖ್ಯ ಉದ್ದೇಶವೆಂದರೆ ಮಹಿಳೆಯರು ಆರ್ಥಿಕ ಹಾಗೂ ಸಾಮಾಜಿಕವಾಗಿ ಪ್ರಗತಿ ಸಾಧಿಸಬೇಕೆಂದು, ಮತ್ತು ಸ್ವಂತ ಉದ್ಯಮಗಳನ್ನು ಆರಂಭಿಸಲು ಬೆಂಬಲ ನೀಡಬೇಕು ಎಂಬುದಾಗಿದೆ.
ಮಹಿಳೆಯರು ತಮ್ಮ ಮನೆಯಲ್ಲಿಯೇ ಯಾವುದೇ ಇನ್ನೊಬ್ಬರ ಸಹಾಯವಿಲ್ಲದೆ ಸ್ವಾವಲಂಬಿಯಾಗಿ ತಮ್ಮ ಕೆಲಸದ ಮೂಲಕ ಹಣವನ್ನು ಸಂಪಾದನೆ ಮಾಡುವುದು ಮತ್ತು ಖರ್ಚಿಗೆ ಬೇಕಾದ ಹಣವನ್ನು ತಾವೇ ಸಂಪಾದಿಸಬೇಕು ಎಂಬುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ಈ ಯೋಜನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 2024-25 ನೇ ವಾರ್ಷಿಕ ಯೋಜನೆಯ ಅಡಿಯಲ್ಲಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸ್ವೀಕರಿಸುತ್ತಿದೆ.
ಈ ಯೋಜನೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಓಬಿಸಿ ವರ್ಗ, ಸಾಮಾನ್ಯ ವರ್ಗ, ಮತ್ತು ಅಲ್ಪಸಂಖ್ಯಾತ ಮಹಿಳೆಯರು ಅರ್ಜಿ ಸಲ್ಲಿಸಬಹುದು. ಈ ಯೋಜನೆಗೆ ಅರ್ಜಿ ಸಲ್ಲಿಸುವ ಮಹಿಳೆಯ ಆದಾಯ ಮಿತಿ 2 ಲಕ್ಷ ರೂಪಾಯಿಗಳ ಒಳಗಿರಬೇಕು.
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:
ನೀವು ಪ್ರಾರಂಭಿಸಲು ಉದ್ದೇಶಿಸಿರುವ ವ್ಯಾಪಾರ ಅಥವಾ ಉದ್ಯಮದ ಒನ್ ಕೊಟೇಶನ್ ಪ್ರಮಾಣ ಪತ್ರ.
18 ರಿಂದ 55 ವರ್ಷದೊಳಗಿನ ಮಹಿಳೆಯರು ಅರ್ಜಿ ಸಲ್ಲಿಸಬಹುದು.
ಈ ಯೋಜನೆಯಲ್ಲಿ ನರ್ಸರಿ ತೆರೆದು, ಮಸಾಲೆ ಪದಾರ್ಥ ತಯಾರಿಸಿ, ಬೆಡ್ ಶೀಟ್ ಮತ್ತು ಹೊದಿಕೆ ತಯಾರಿಸಿ, ಪಡಿತರ ಅಂಗಡಿ ತೆರೆದು, ಇನ್ನೂ ಹಲವಾರು ಉದ್ಯಮಗಳನ್ನು ಪ್ರಾರಂಭಿಸಲು ಮಹಿಳೆಯರು ಹಣಕಾಸಿನ ಸೌಲಭ್ಯವನ್ನು ಪಡೆಯಬಹುದು.
ಇತರೆ ವಿಷಯಗಳು :
ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್, 7ನೇ ರಾಜ್ಯ ವೇತನ ಆಯೋಗ ಜಾರಿಯಾದ್ರೆ ವೇತನ ಎಷ್ಟು ಹೆಚ್ಚಾಗಲಿದೆ?