ಇನ್ಮುಂದೆ 300 ಯೂನಿಟ್ ಉಚಿತ ವಿದ್ಯುತ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರದಿಂದ ಸೂರ್ಯಘರ್ ಯೋಜನೆ ಘೋಷಣೆ

Union Budget 2024: ನಮಸ್ಕಾರ ಕರ್ನಾಟಕ, ನಮ್ಮ ರಾಜ್ಯ ಸರ್ಕಾರದ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಯೋಜನೆಯನ್ನು ಘೋಷಿಸಿದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಎನ್‌ಡಿಎ ಸರ್ಕಾರವು ಕೇಂದ್ರ ಬಜೆಟ್ 2024 ರಲ್ಲಿ ಮಹತ್ವದ ಘೋಷಣೆಯನ್ನು ಮಾಡಿದೆ.

ಸೂರ್ಯಘರ್ ಯೋಜನೆಯಡಿ (PM Surya Ghar Yojana) 300 ಯೂನಿಟ್ ಉಚಿತ ವಿದ್ಯುತ್ ಲಭ್ಯವಾಗಲಿದೆ. ಬಜೆಟ್ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಡ ಮತ್ತು ಮಧ್ಯಮ ವರ್ಗದವರಿಗೆ ಹೊಸ ಯೋಜನೆಯನ್ನು ಜಾರಿಗೆ ತರುತ್ತಿದ್ದಾರೆ.

ದೇಶದ ಸುಮಾರು 1 ಕೋಟಿ ಕುಟುಂಬಗಳಿಗೆ ಸೂರ್ಯಘರ್ ಯೋಜನೆಯ ಪ್ರಯೋಜನ ದೊರೆಯಲಿದೆ. ಈ ಯೋಜನೆಯಡಿ, ಮನೆಯ ಮೇಲ್ಚಾವಣಿಯ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ಉಚಿತ ವಿದ್ಯುತ್ ಒದಗಿಸಲಾಗುತ್ತದೆ.

ಪ್ರಧಾನ ಮಂತ್ರಿ ಸೂರ್ಯಘರ್ ಯೋಜನೆಯ ಮೂಲಕ, ಮನೆಯ ಮೇಲ್ಚಾವಣಿಯ ಮೇಲೆ ಸೌರ ವಿದ್ಯುತ್ ಫಲಕಗಳನ್ನು ಅಳವಡಿಸುವ ಮೂಲಕ 300 ಯೂನಿಟ್ ಉಚಿತ ವಿದ್ಯುತ್ ಲಭ್ಯವಾಗುತ್ತದೆ. ಇದರಿಂದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಶಾಶ್ವತ ಉಚಿತ ವಿದ್ಯುತ್ ನೀಡುವುದು ಸರ್ಕಾರದ ಉದ್ದೇಶವಾಗಿದೆ.

ವಾಣಿಜ್ಯ ಉಷ್ಣ ವಿದ್ಯುತ್ ಸ್ಥಾವರ ಘೋಷಣೆ: ಕೇಂದ್ರ ಸರ್ಕಾರವು ಖಾಸಗಿ ಸಹಭಾಗಿತ್ವದ ಮೂಲಕ ವಾಣಿಜ್ಯ ಉಷ್ಣ ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸಲು ಯೋಜಿಸುತ್ತಿದೆ. ಎನ್‌ಟಿಪಿಸಿ ಮತ್ತು ಬಿಎಚ್‌ಇಎಲ್ ಸಹಭಾಗಿತ್ವದಲ್ಲಿ ಎಯುಎಸ್‌ಸಿ ತಂತ್ರಜ್ಞಾನವನ್ನು ಬಳಸಿ 100 ಮೆಗಾವ್ಯಾಟ್ ವಾಣಿಜ್ಯ ಉಷ್ಣ ವಿದ್ಯುತ್ ಸ್ಥಾವರವನ್ನು ಆರಂಭಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.

ಇತರೆ ವಿಷಯಗಳು :

ಮಹಿಳೆಯರು ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ.

ಗೃಹಲಕ್ಷ್ಮಿ ಯೋಜನೆಯಲ್ಲಿ ಬಿಗ್ ಅಪ್ಡೇಟ್, ಇನ್ಮುಂದೆ ಒಟ್ಟು 1.78 ಲಕ್ಷದ ಮಹಿಳೆಯರಿಗೆ ಸಿಗೋದಿಲ್ಲ ಗೃಹಲಕ್ಷ್ಮಿ ಹಣ.

ಸ್ವಂತ ಮನೆ ಇಲ್ಲದವರಿಗೆ ಸಿಹಿ ಸುದ್ದಿ, 3 ಕೋಟಿ ಹೊಸ ಮನೆಗಳು ಬಿಡುಗಡೆ, ಇಂದೇ ಈ ಕೆಲಸ ಮಾಡಿ ಸ್ವಂತ ಮನೆ ಪಡೆದುಕೊಳ್ಳಿ.

Leave a Reply

Your email address will not be published. Required fields are marked *

rtgh