ವಿದ್ಯಾರ್ಥಿಗಳಿಗೆ 15,000 ಸ್ಕಾಲರ್ ಶಿಪ್ ಗಾಗಿ ಅರ್ಜಿ ಸಲ್ಲಿಕೆ ಆರಂಭ!

ಹಲೋ ಸ್ನೇಹಿತರೆ, ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಕೆಗೆ ಆಹ್ವಾನಿಸಲಾಗಿದೆ. 10ನೇ ತರಗತಿ ಬಳಿಕ ಉನ್ನತ ಶಿಕ್ಷಣ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು ಈ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಬಹುದು. ಉನ್ನತ ಶಿಕ್ಷಣಕ್ಕೆ ಸೇರಿಕೊಂಡು ಹಾಸ್ಟೆಲ್ ಸೌಲಭ್ಯ ಸಿಗದ ವಿದ್ಯಾರ್ಥಿಗಳಿಗೆ ಈ ಸ್ಕಾಲರ್ ಸಿಪ್ ಆರ್ಥಿಕ ಸಹಾಯವಾಗಲಿದೆ. ಈ ಯೋಜನೆ ಅರ್ಜಿ ವಿಧಾನ, ಅರ್ಹತೆ, ಅಗತ್ಯ ದಾಖಲೆಗಳ ಬಗ್ಗೆ ಇಲ್ಲಿ ತಿಳಿಸಲಾಗಿದೆ ಕೊನೆವರೆಗೂ ಓದಿ.

Vidyasiri Scholarship

ಈ ಯೋಜನೆಯಡಿ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು 1,500 ರೂಪಾಯಿಯಂತೆ 10 ತಿಂಗಳ ಶೈಕ್ಷಣಿಕ ವರ್ಷದ ಅವಧಿಗೆ 15,000 ರೂಪಾಯಿಗಳ ಸ್ಕಾಲರ್ ಶಿಪ್ ನೀಡಲಾಗುತ್ತದೆ. SC/ST ಅಥವಾ OBC ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಈ ಪ್ರಯೋಜನ ದೊರೆಯಲಿದೆ.

ಅರ್ಹತೆಗಳು:

  • ಕ್ಯಾಸ್ಟ್ ಸರ್ಟಿಫಿಕೇಟ್ ಇರಬೇಕು.
  • 2A, 3A ಅಥವಾ 3B OBC ವಿದ್ಯಾರ್ಥಿ ಆದರೆ ಅವರ ಕುಟುಂಬದ ವಾರ್ಷಿಕ ಆದಾಯ 1 ಲಕ್ಷದ ಒಳಗಿರಬೇಕು. ಪ್ರವರ್ಗ 1 ಕ್ಕೆ ಸೇರಿದ ವಿದ್ಯಾರ್ಥಿ ಆದರೆ, ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷದ ಒಳಗಿರಬೇಕು.
  • ಸುಮಾರು 7 ವರ್ಷಗಳಿಂದ ನಮ್ಮ ರಾಜ್ಯದಲ್ಲಿ ವ್ಯಾಂಸಗ ಮಾಡುತ್ತಿರಬೇಕು,
  • 75% ಗಿಂತ ಹೆಚ್ಚು ಅಂಕ ಪಡೆದಿರಬೇಕು.
  • ವಿದ್ಯಾರ್ಥಿಗಳು ರಾಜ್ಯದ ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಸರ್ಕಾರಿ, ಪ್ರೈವೇಟ್ ಅಥವಾ ಅನುದಾನಿತ ಕಾಲೇಜು ಅಥವಾ ಸಂಸ್ಥೆಯಲ್ಲಿ ಓದುತ್ತಿರಬೇಕು.
  • ಹಾಸ್ಟೆಲ್ ಅಡ್ಮಿಷನ್, ಊಟ ವಸತಿ ಯೋಜನೆಯಲ್ಲಿ ಒಂದು ಸೌಲಭ್ಯ ಪಡೆಯಬಹುದು.

ಇದನ್ನು ಓದಿ: ಆ.31 ಲಾಸ್ಟ್ ಡೇಟ್: ಮುಂದಿನ ತಿಂಗಳಿನಿಂದ ರೇಷನ್‌ ಸೌಲಭ್ಯ ನಿಲ್ಲಿಸಲು ಸರ್ಕಾರದ ಆದೇಶ!

ಅಗತ್ಯ ದಾಖಲೆಗಳು :

  • ಎಸ್.ಎಸ್.ಎಲ್ ಸಿ ತರಗತಿ ಮಾರ್ಕ್ಸ್ ಕಾರ್ಡ್
  • ಪಿಯುಸಿ ಮಾರ್ಕ್ಸ್ ಕಾರ್ಡ್
  • ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ಕ್ಯಾಸ್ಟ್ ಸರ್ಟಿಫಿಕೇಟ್
  • ಇನ್ಕಮ್ ಸರ್ಟಿಫಿಕೇಟ್
  • ಪಾಸ್ ಪೋರ್ಟ್ ಸೈಜ್ ಫೋಟೋ
  • ಅಡ್ಮಿಷನ್ ಫೀಸ್ ರೆಸಿಪ್ಟ್
  • ವಾಸಸ್ಥಳ ದೃಢೀಕರಣ ಪತ್ರ

SSP ಪೋರ್ಟಲ್ ಮೂಲಕ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಬಹುದು?

  • ವಿದ್ಯಾರ್ಥಿಗಳು https://ssp.postmatric.karnataka.gov.in ಲಿಂಕ್ ಓಪನ್ ಮಾಡಿ.
  • ನಂತರ ಹೋಮ್ ಪೇಜ್ ನಲ್ಲಿ ಅಕೌಂಟ್ ಓಪನ್ ಮಾಡುವ ಆಪ್ಶನ್ ಸೆಲೆಕ್ಟ್ ಮಾಡಿ.
  • ನಿಮ್ಮ ಹೆಸರನ್ನು ಆಧಾರ್ ಕಾರ್ಡ್ ನಲ್ಲಿ ಇರುವ ಹಾಗೆ ಅರ್ಜಿ ತುಂಬಿ.
  • ಓಟಿಪಿ ಆಪ್ಶನ್ ಆಯ್ಕೆ ಮಾಡಿ, ಕ್ಯಾಪ್ಚ ಕೋಡ್ ಹಾಕಿ, ಅಪ್ಲಿಕೇಶನ್ ಗೆ ಮುಂದುವರಿಯಿರಿ.
  • ಅರ್ಜಿ ವಿವರ ತುಂಬಿ ಸಬ್ಮಿಟ್ ಮಾಡಿದರೆ ನಿಮ್ಮ ಫೋನ್ ಗೆ OTP ಬರುತ್ತದೆ.
  • OTP ಬಂದ ನಂತರ ನಿಮ್ಮ ID password ಹಾಕಿ ಲಾಗಿನ್ ಮಾಡಿ. ಈ ಐಡಿ ಪಾಸ್ವರ್ಡ್ ಬಳಸಿ, SSP ಪೋರ್ಟಲ್ ಲಾಗಿನ್ ಮಾಡಬೇಕು. ಬಳಿಕ ಎಲ್ಲಾ ವಿವರಗಳನ್ನು ಭರ್ತಿ ಮಾಡಿ.
  • ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಿ. ಅಪ್ಲಿಕೇಶನ್ ಸ್ಟೇಟಸ್ ಕೂಡ ವೆಬ್ ಸೈಟ್ ನಲ್ಲಿ ನೋಡಬಹುದಾಗಿದೆ.

ಇತರೆ ವಿಷಯಗಳು:

ಶ್ರಮ ಯೋಗಿ ಮಾನ್ ಧನ್ ಯೋಜನೆಯಡಿ 3,000 ರೂ. ಪಿಂಚಣಿ!

ಶ್ರಮ ಯೋಗಿ ಮಾನ್ ಧನ್ ಯೋಜನೆಯಡಿ 3,000 ರೂ. ಪಿಂಚಣಿ!

Leave a Reply

Your email address will not be published. Required fields are marked *

rtgh