ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆ ವೇಳಾಪಟ್ಟಿ ಪ್ರಕಟಿಸಿದೆ. ಆಗಸ್ಟ್ 20 ರಿಂದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಆರಂಭವಾಗಲಿದೆ.

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ತಿದ್ದುಪಡಿ, ಹೆಸರು ಸೇರ್ಪಡೆಗೆ ಅಗಸ್ಟ್ 20 ರಿಂದ ಅಕ್ಟೋಬರ್ 18ರವರೆಗೆ ಅವಕಾಶವನ್ನು ಕಲ್ಪಿಸಲಾಗಿದೆ. ಮತದಾರರ ಪಟ್ಟಿಯ ಪರಿಷ್ಕರಣೆಯ ವೇಳೆ ರಾಜ್ಯದ ಎಲ್ಲಾ ಮತಗಟ್ಟೆಗಳಲ್ಲಿ ಅಧಿಕಾರಿಗಳು ಮನೆಗಳಿಗೆ ಭೇಟಿಯನ್ನು ನೀಡಲಿದ್ದು, ಆ ಸಮಯದಲ್ಲಿ ಸಾರ್ವಜನಿಕರು ಯಾವುದೇ ರೀತಿಯ ಹೆಸರು ನೋಂದಣಿ, ತಿದ್ದುಪಡಿ, ಮೃತರು & ಸ್ಥಳಾಂತರಗೊಂಡ ಮತದಾರರ ಹೆಸರುಗಳನ್ನು ತೆಗೆದು ಹಾಕುವಿಕೆ, 18 ವರ್ಷ ತುಂಬುವ ಯುವಕರು ಮತದಾರರ ಹೆಸರು ಸೇರ್ಪಡೆಯ ಕುರಿತು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಆಗಸ್ಟ್ 20 ರಿಂದ ಅಕ್ಟೋಬರ್ 18ರವರೆಗೆ ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ. ಅಕ್ಟೋಬರ್ 19 ರಿಂದ 28 ರ ವರೆಗೆ ಸಮಗ್ರ ಕರಡು ಮತದಾರರ ಪಟ್ಟಿ ಸಿದ್ಧಪಡಿಸಲಾಗುವುದು. ಅಕ್ಟೋಬರ್ 29ರಂದು ಸಮಗ್ರ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುವುದು. ಸಾರ್ವಜನಿಕರು ತಮ್ಮ ಲೋಪದೋಷಗಳ ಕುರಿತಾಗಿ ಅಕ್ಟೋಬರ್ 29 ರಿಂದ ನವೆಂಬರ್ 28ರ ವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿರುತ್ತದೆ.
ಡಿಸೆಂಬರ್ 24 ರೊಳಗೆ ಆಕ್ಷೇಪಣೆಗಳ ವಿಲೇವಾರಿ ಮುಕ್ತಾಯಗೊಳಿಸಲಾಗುವುದು. 2025ರ ಜನವರಿ 1ರೊಳಗೆ ಮತದಾರರ ಪಟ್ಟಿ ಗುಣಮಟ್ಟ ಪರಿಶೀಲಿಸಲಾಗುವುದು. ಜನವರಿ 6ರಂದು ಅಂತಿಮ ಪಟ್ಟಿ ಪ್ರಕಟಿಸಲಾಗುವುದು. ಆಕ್ಷೇಪಣೆ ಅವಧಿಯಲ್ಲಿ ಮುಖ್ಯ ಚುನಾವಣಾ ಅಧಿಕಾರಿಗಳು ನಿಗದಿತ ಶನಿವಾರ ಮತ್ತು ಭಾನುವಾರ ವಿಶೇಷ ಅಭಿಯಾನದ ದಿನಾಂಕಗಳನ್ನು ಶೀಘ್ರವೇ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.
ಇತರೆ ವಿಷಯಗಳು:
ದಿಢೀರನೆ ಪಾತಾಳಕ್ಕೆ ಕುಸಿದ ಟೊಮೆಟೊ ಬೆಲೆ! ಕಂಗಾಲಾದ ರೈತರು
ನಾಳೆ ಆಸ್ಪತ್ರೆಗೆ ಹೋಗೋ ಮುನ್ನಾ ಗಮನಿಸಿ! 24 ಗಂಟೆ OPD ಸೇವೆ ಬಂದ್